ಬೆಂಗಳೂರು: ವಸತಿ, ವಾಣಿಜ್ಯ ಕಟ್ಟಡಗಳಲ್ಲಿ ತ್ಯಾಜ್ಯ ನೀರು ಸಂಸ್ಕೃಣಾ ಘಟಕ ಸ್ಥಾಪನೆ ಮಾಡುವಂತೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ನಗರ ಪ್ರದೇಶಗಳಲ್ಲಿ ನೀರಿನ ಸಮಸ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ವಸತಿ ಸಮುಚ್ಛಯ, ವಾಣಿಜ್ಯ ಕಟ್ಟಡಗಳು, ವಿದ್ಯಾರ್ಥಿ ನಿಲಯಗಳು, ಶಿಕ್ಷಣ ಸಂಸ್ಥೆಗಳಲ್ಲಿ ತ್ಯಾಜ್ಯ ನೀರು ಸಂಸ್ಕರಣಾ ಘಟಕ ಸ್ಥಾಪನೆ ಮಾಡುವಂತೆ ರಾಜ್ಯ ಸರ್ಕಾರ ತಿಳಿಸಿದೆ.
ತ್ಯಾಜ್ಯ ನೀರು ಸಂಸ್ಕರಿಸಿ ಮರು ಬಳಕೆಗೆ ಸಂಬಂಧಿಸಿದಂತೆ 2016 ರ ಸರ್ಕಾರಿ ಅಧಿಸೂಚನೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆ ಹೊಸ ಅಂಶಗಳನ್ನು ಸೇರಿಸಿ ರಾಜ್ಯ ಸರ್ಕಾರವು ಈ ಆದೇಶವನ್ನು ಹೊರಡಿಸಿದೆ.