ನವದೆಹಲಿ : ಪಶ್ಚಿಮ ದೆಹಲಿಯ ಬಹುಮಹಡಿ ಪಾರ್ಕಿಂಗ್ ಸ್ಥಳದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 21 ಕಾರುಗಳು ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ.
ದೆಹಲಿಯ ಸುಭಾಷ್ ನಗರದಲ್ಲಿ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಅಗ್ನಿಶಾಮಕ ವಾಹನಗಳು ತೆರಳಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಳಗಿವೆ. ಬೆಂಕಿ ಅನಾಹುತಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪೊಲೀಸರು, ಸಿಸಿಟಿವಿ ದೃಶ್ಯಾವಳಿಗಳನ್ನು ವಿಶ್ಲೇಷಿಸಿದಾಗ, ಪಾರ್ಕಿಂಗ್ ನಲ್ಲಿ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಓಡಾಡುವ ದೃಶ್ಯಗಳು ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ತನಿಖೆ ನಡೆಸಲು ಹಲವು ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
मेरे वॉर्ड #SubhashNagar में सुबह 3 बजे के आस-पास किसी असामाजिक तत्व ने MCD की मल्टी लेवल कार पार्किंग में आग लगा दी जिसमें लगभग 30-35 गाड़ियाँ जलकर ख़ाक हो गई हैं।
मैं सुबह से ही मौक़े पर मौजूद हूं और दोषी को पकड़वाने के लिए हर संभव प्रयास कर रहा हूं pic.twitter.com/itbGV2wQ7U
— Aditya Goswami (@AdityaGoswami_) December 26, 2022
ಮುಂಜಾನೆ 4 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಆರು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿವೆ. ಸದ್ಯ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿಯಾಗಿಲ್ಲೆ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ.
BREAKING NEWS : ಶ್ರೀ ಲಂಕಾ ವಿರುದ್ಧದ ತವರು ಸರಣಿಯಿಂದ ‘ರೋಹಿತ್ ಶರ್ಮಾ, ಕೆಎಲ್ ರಾಹುಲ್’ ಔಟ್ ; ವರದಿ
BIGG NEWS : ಪಂಚರತ್ನಯಾತ್ರೆ, ಪಾದಯಾತ್ರೆಗೆ ಯಾವುದೇ ನಿರ್ಬಂಧ ಇಲ್ಲ : ಸಚಿವ ಡಾ. ಸುಧಾಕರ್ ಸ್ಪಷ್ಟನೆ