ಬೆಂಗಳೂರು : ಬೆಂಗಳೂರು: ನಗರದಲ್ಲಿನ ನಮ್ಮ ಮೆಟ್ರೋ ಸೇವೆಯಲ್ಲಿ ಎರಡು ದಿನ ಹಸಿರು ಮಾರ್ಗದಲ್ಲಿ ಸಂಚಾರ ವ್ಯತ್ಯಯ ಉಂಟಾಗಲಿದೆ. ಸೆ.6 ಹಾಗೂ ಸೆ. 11 ರಂದುಎರಡು ದಿನಗಳ ಕಾಲ ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ ಸಂಚಾರವನ್ನು ಸ್ಥಗಿತಗೊಳಿಸಲಾಗುತ್ತಿದೆ.
ಈ ಕುರಿತಂತೆ ಬಿಎಂಆರ್ ಸಿಎಲ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ವಿಸ್ತರಿಸಿದ ಹಸಿರು ಮಾರ್ಗದ ನಾಗಸಂದ್ರದಿಂದ ಮಾದವರ ನಡುವೆ ಸಿಗ್ನಲಿಂಗ್ ಸಂಬಂಧಿತ ಪರೀಕ್ಷೆಯನ್ನು ಮುಂದುವರಿಸಲು, ಕೆಲವು ದಿನಗಳಂದು ರೈಲು ಸೇವೆಯ ಸಮಯ ಮತ್ತು ಕಾರ್ಯಾಚರಣೆಗಳಲ್ಲಿ ಬದಲಾವಣೆಯಾಗಲಿದೆ ಎಂದಿದೆ. ಹಸಿರು ಮಾರ್ಗದ ನಾಗಸಂದ್ರದಿಂದ ಮಾದವರ ನಡುವೆ ಸಿಗ್ನಲಿಂಗ್ ಸಂಬಂಧಿತ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದ್ದು, ನಮ್ಮ ಮೆಟ್ರೋದ ಹಸಿರು ಮಾರ್ಗದ ನಾಗಸಂದ್ರ-ರೇಷ್ಮೆ ಸಂಸ್ಥೆ ನಡುವೆ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯವಾಗಿದೆ.
ಸೆಪ್ಟೆಂಬರ್ 6 ಮತ್ತು 11ರಂದು ನಮ್ಮ ಮೆಟ್ರೋ ರೈಲು ಸಂಚಾರ ಪೂರ್ಣ ದಿನ ಸ್ಥಗಿತವಾಗಲಿದೆ. ನೇರಳೆ ಮಾರ್ಗದಲ್ಲಿ ಎಂದಿನಂತೆ ಮೆಟ್ರೋ ರೈಲುಗಳ ಸಂಚಾರ ಇರಲಿದೆ ಎಂದು ತಿಳಿಸಿದೆ.