Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಅನುಮತಿ ಇಲ್ಲದೇ ಕಾರ್ಯಕ್ರಮ ಆಯೋಜನೆ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ FIR ದಾಖಲು | Rahul Gandhi

15/05/2025 10:59 PM

BREAKING: ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಟೋ ಶೇರ್: ಸಾಗರದ ಕಾರ್ಗಲ್ ಠಾಣೆಯಲ್ಲಿ FIR ದಾಖಲು

15/05/2025 10:01 PM

ಸಾಗರದಲ್ಲಿ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪಿ ಒಂದೇ ದಿನದಲ್ಲಿ ಅರೆಸ್ಟ್

15/05/2025 9:00 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಾರ್ವಜನಿಕರೇ ಗಮನಿಸಿ: ಬಿಸಿಲಿನ ಸೂರ್ಯಘಾತದ ಅನಾಹುತದಿಂದ ಪಾರಾಗಲು ಹೀಗೆ ಮಾಡಿ!
KARNATAKA

ಸಾರ್ವಜನಿಕರೇ ಗಮನಿಸಿ: ಬಿಸಿಲಿನ ಸೂರ್ಯಘಾತದ ಅನಾಹುತದಿಂದ ಪಾರಾಗಲು ಹೀಗೆ ಮಾಡಿ!

By kannadanewsnow0729/04/2024 5:26 PM

ಜಿಲ್ಲೆಯಲ್ಲಿ ಪ್ರಖರ ಬಿಸಿಲು ಕಂಡುಬರುವ ಹಿನ್ನಲೆಯಲ್ಲಿ ಮಧ್ಯಾಹ್ನದ 01 ಗಂಟೆಯಿಂದ ಸಂಜೆ 04 ಗಂಟೆಯ ಅವಧಿಯಲ್ಲಿ ವಯೋ ವೃದ್ಧರು, ಮಕ್ಕಳು ಗರ್ಭಿಣಿ ಮತ್ತು ದೀರ್ಘಕಾಲಿನ ಖಾಯಿಲೆಗಳಿಗೆ ಔಷಧಿ ಸೇವಿಸುವ ಪ್ರತಿಯೊಬ್ಬರು ಹೊರಗಡೆ ಹೋಗುವುದನ್ನು ತಪ್ಪಿಸಿ, ಬಿಸಿಲಿನ ಸೂರ್ಯಘಾತದ ಅನಾಹುತದಿಂದ ಪಾರಾಗಲು ಕೈ ಜೋಡಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ.ರಮೇಶ ಬಾಬು ಅವರು ಕೋರಿದ್ದಾರೆ.

ಕಳೆದ ಹಲವು ವರ್ಷಗಳಿಗೆ ಹೋಲಿಸಿದರೆ ಪ್ರಸ್ತುತ ಬೇಸಿಗೆಯು ಅತ್ಯಂತ ಪ್ರಖರವಾಗಿದ್ದು, ಈಗಾಗಲೇ ರಾಜ್ಯ ಹವಮಾನ ಇಲಾಖೆಯು ಮುಂದಿನ ಕೆಲವು ದಿನಗಳ ಕಾಲ ಒಣಹವೆಯೊಂದಿಗೆ ಬಿಸಿಗಾಳಿ ಬೀಸುವ ಕುರಿತು ಮುನ್ನಚ್ಚೆರಿಕೆ ನೀಡಿರುವ ಹಿನ್ನಲೆ ಬಳ್ಳಾರಿ ಜಿಲ್ಲೆಯಲ್ಲಿಯೂ ಸಹ ವಾತಾವರಣ ಕಂಡುಬರುತ್ತಿದ್ದು, ಪ್ರತಿಯೊಬ್ಬರು ಆದಷ್ಟು ನೆರಳಿನಲ್ಲಿ ಇರುವುದಕ್ಕೆ ಆದ್ಯತೆ ನೀಡಬೇಕು ಎಂದು ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ದೇಹದಲ್ಲಿ ನಿರ್ಜಲೀಕರಣವನ್ನು ತಡೆಗಟ್ಟಲು ಓ.ಆರ್.ಎಸ್ ಜೀವಜಲ ಪುಡಿಯನ್ನು ಅಗತ್ಯವುಳ್ಳವರಿಗೆ ಕೊಡುವ ವ್ಯವಸ್ಥೆ ಮಾಡಲಾಗಿದೆ. ರೋಗಿಗಳ ಆರೈಕೆಗಾಗಿ, ಐವಿ ಪ್ಲೂಯಿಡ್ಸ್ ಮತ್ತು ಜೀವರಕ್ಷಕ ಔಷಧಗಳ ದಾಸ್ತಾನು ಇಟ್ಟುಕೊಳ್ಳಲಾಗಿದೆ. ಓ.ಆರ್.ಎಸ್. ದ್ರಾವಣವನ್ನು 1 ಲೀಟರ್ ನೀರಿಗೆ 1 ಪೊಟ್ಟಣದ ಸಂಪೂರ್ಣ ಪುಡಿಯನ್ನು ಹಾಕಿ 24 ಗಂಟೆಯೊಳಗಡೆ ಕುಡಿಯಲು ಬಳಸುವ ಮೂಲಕ ಬಿಸಿಲಿನ ಪ್ರಖರತೆಯಿಂದ ಉಂಟಾಗುವ ನಿರ್ಜಲೀಕರಣವನ್ನು ತಡೆಯಬಹುದು ಎಂದು ತಿಳಿಸಿದ್ದಾರೆ.

ಈಗಾಗಲೇ ಜಿಲ್ಲಾಡಳಿತ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಹಕಾರದೊಂದಿಗೆ ಜಿಲ್ಲೆಯಲ್ಲಿ ನಿರ್ಜಲೀಕರಣ ತಡೆಗಟ್ಟಲು ತುರ್ತು ಚಿಕಿತ್ಸಾ ಕೇಂದ್ರಗಳನ್ನು ತೆರೆಯಲಾಗಿದ್ದು, ಜೊತೆಗೆ ಜಿಲ್ಲಾ ಕಾಲರಾ ತಂಡದಿಂದ ಕುಡಿಯುವ ನೀರಿನ ಮೂಲಗಳನ್ನು ನಿರಂತರವಾಗಿ ಪರೀಕ್ಷಿಸಿ ಕುಡಿಯಲು ಯೋಗ್ಯವೆಂದು ಖಚಿತಪಡಿಸಿದ ನಂತರವೇ ಸರಬರಾಜು ಮಾಡಲು ಕ್ರಮವಹಿಸಲಾಗಿದೆ ಎಂದಿದ್ದಾರೆ.

ಲೋಕಸಭಾ ಚುನಾವಣೆಯ ಹಿನ್ನಲೆ ಜಿಲ್ಲೆಯ ಗಡಿಭಾಗದಲ್ಲಿ ಹಾಗೂ ಇತರೆಡೆ ತೆರೆದಿರುವ 24 ಚೆಕ್‍ಪೋಸ್ಟ್ ಸಿಬ್ಬಂದಿಯವರಿಗೆ ಓಆರ್‍ಎಸ್ ಪೊಟ್ಟಣಗಳನ್ನು ಹಾಗೂ ತುರ್ತು ಚಿಕಿತ್ಸಾ ಔಷಧಿಗಳನ್ನು ವಿತರಿಸಲಾಗಿದೆ. ಸಾರ್ವಜನಿಕರು ಮಧ್ಯಾಹ್ನದ ವೇಳೆ ಅಗತ್ಯವೆನಿಸುವ ಸಂದರ್ಭಗಳಲ್ಲಿ ಮನೆಯಿಂದ ಹೊರ ಬರುವಾಗ ಶುದ್ಧ ಕುಡಿಯುವ ನೀರು, ಛತ್ರಿ ಮತ್ತು ಮಕ್ಕಳನ್ನು ಕರೆದುಕೊಂಡು ಹೋಗುವಾಗ ಮಕ್ಕಳಿಗೆ ಆದಷ್ಟು ತಲೆಯ ಮೇಲೆ ನೀರಿನಿಂದ ಒದ್ದೆ ಬಟ್ಟೆಯನ್ನು ಹಾಕಬೇಕು. ಮಕ್ಕಳ ಆರೋಗ್ಯದಲ್ಲಿ ಏರುಪೇರು ಆಗದಂತೆ ಕಾಳಜಿವಹಿಸಬೇಕು ಎಂದು ಅವರು ತಿಳಿಸಿದ್ದಾರೆ.

*ಸಾಮಾನ್ಯ ಅಪಾಯದ ಚಿಹ್ನೆಗಳು:*
ವಯಸ್ಕರಲ್ಲಿ ಅರೆಪ್ರಜ್ಞಾವಸ್ಥೆ, ಪ್ರಜ್ಞೆ ತಪ್ಪುವುದು, ಸಿಡಿಮಿಡಿಗೊಳ್ಳುವುದು, ಗಾಬರಿಗೊಳ್ಳುವುದು, ಅತಿಯಾದ ತಲೆನೋವು, ಚರ್ಮವು ಬಿಸಿ ಹಾಗೂ ಕೆಂಪಾದ ಒಣಚರ್ಮ, ಆತಂಕ, ತಲೆಸುತ್ತುವಿಕೆ, ಮಾಂಸಖಂಡಗಳಲ್ಲಿ ಸುಸ್ತು ಅಥವಾ ಸೆಳೆತ, ವಾಕರಿಕೆ ಮತ್ತು ವಾಂತಿ, ಮಕ್ಕಳಲ್ಲಿ ಆಹಾರ ಸೇವಿಸಲು ನಿರಾಕರಿಸುವುದು, ಕನಿಷ್ಠ ಮೂತ್ರ ವಿಸರ್ಜನೆ, ಬಾಯಿ ಒಣಗುವಿಕೆ, ಆಲಸ್ಯ, ಮೂರ್ಛೆ ಹೋಗುವುದು, ದೇಹದ ಯಾವುದೇ ಭಾಗದಲ್ಲಿ ರಕ್ತಸ್ರಾವ ಇವೆಲ್ಲವುಗಳೂ ಸಾಮಾನ್ಯ ಅಪಾಯದ ಚಿಹ್ನೆಗಳಾಗಿವೆ.
ಬಿಸಿಲಿನ ಶಾಖಾಘಾತಕ್ಕೆ ಅಗತ್ಯ ತುರ್ತು ಚಿಕಿತ್ಸೆ:
ಶಾಖಾಘಾತಕ್ಕೆ ಒಳಗಾದ ವ್ಯಕ್ತಿಯನ್ನು ನೆರಳಿರುವೆಡೆಗೆ ಸ್ಥಳಾಂತರಿಸಿ. ವ್ಯಕ್ತಿಯ ವಸ್ತ್ರಗಳನ್ನು ಸಡಿಲಗೊಳಿಸಿ, ಅಂಗಾತ ಮಲಗಿಸಿ, ಕಾಲುಗಳನ್ನು ಎತ್ತರಿಸಿ. ಸಾಮಾನ್ಯ ನೀರಿನಿಂದ ದೇಹವನ್ನು ಒರೆಸಬೇಕು ಮತ್ತು ಹತ್ತಿರದ ವೈದ್ಯರನ್ನು ಸಂಪರ್ಕಿಸಬೇಕು.
ರಾಷ್ಟ್ರೀಯ ಹವಮಾನ ಬದಲಾವಣೆ ಹಾಗೂ ಮಾನವ ಆರೋಗ್ಯ ಕಾರ್ಯಕ್ರಮದ ಅಡಿಯಲ್ಲಿ ಜಿಲ್ಲಾ ಮಟ್ಟದಲ್ಲಿ ಡಾ.ಅಬ್ದುಲ್ಲಾ ರವರ ನೇತೃತ್ವದಲ್ಲಿ ತಂಡ ರಚಿಸಿ ಕಾರ್ಯನಿರ್ವಹಿಸಲಾಗುತ್ತಿದೆ. ಅಲ್ಲದೇ ಪ್ರತಿ ದಿನ ಪತ್ರಿಕೆಗಳು, ರೇಡಿಯೋ, ದೂರದರ್ಶನ ಮತ್ತು ಜಿಲ್ಲಾ ವಿಪತ್ತು ಪ್ರಾಧಿಕಾರದ ಮೂಲಕ ನೀಡುವ ಸೂಚನೆಗಳನ್ನು ತಪ್ಪದೇ ಪಾಲಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಮೇಶ್ ಬಾಬು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Watch out for the public: Do this to avoid the disaster of sunburn!
Share. Facebook Twitter LinkedIn WhatsApp Email

Related Posts

BREAKING: ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಟೋ ಶೇರ್: ಸಾಗರದ ಕಾರ್ಗಲ್ ಠಾಣೆಯಲ್ಲಿ FIR ದಾಖಲು

15/05/2025 10:01 PM1 Min Read

ಸಾಗರದಲ್ಲಿ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪಿ ಒಂದೇ ದಿನದಲ್ಲಿ ಅರೆಸ್ಟ್

15/05/2025 9:00 PM1 Min Read

ಸಾಗರದಲ್ಲಿ ಮಹಿಳೆಗೆ ಅವಾಚ್ಯ ಶಬ್ದಗಳಿಂದ ಬೈದು, ಜಾತಿ ನಿಂದನೆ ಮಾಡಿದ ಆರೋಪಿ ಅರೆಸ್ಟ್, ಜೈಲುಪಾಲು

15/05/2025 8:48 PM2 Mins Read
Recent News

BREAKING: ಅನುಮತಿ ಇಲ್ಲದೇ ಕಾರ್ಯಕ್ರಮ ಆಯೋಜನೆ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ FIR ದಾಖಲು | Rahul Gandhi

15/05/2025 10:59 PM

BREAKING: ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಟೋ ಶೇರ್: ಸಾಗರದ ಕಾರ್ಗಲ್ ಠಾಣೆಯಲ್ಲಿ FIR ದಾಖಲು

15/05/2025 10:01 PM

ಸಾಗರದಲ್ಲಿ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪಿ ಒಂದೇ ದಿನದಲ್ಲಿ ಅರೆಸ್ಟ್

15/05/2025 9:00 PM

ಸಾಗರದಲ್ಲಿ ಮಹಿಳೆಗೆ ಅವಾಚ್ಯ ಶಬ್ದಗಳಿಂದ ಬೈದು, ಜಾತಿ ನಿಂದನೆ ಮಾಡಿದ ಆರೋಪಿ ಅರೆಸ್ಟ್, ಜೈಲುಪಾಲು

15/05/2025 8:48 PM
State News
KARNATAKA

BREAKING: ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಟೋ ಶೇರ್: ಸಾಗರದ ಕಾರ್ಗಲ್ ಠಾಣೆಯಲ್ಲಿ FIR ದಾಖಲು

By kannadanewsnow0915/05/2025 10:01 PM KARNATAKA 1 Min Read

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಕಾರ್ಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಅವಹೇಳನಕಾರಿಯಾಗಿ ವ್ಯಂಗ್ಯ ಚಿತ್ರದ…

ಸಾಗರದಲ್ಲಿ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪಿ ಒಂದೇ ದಿನದಲ್ಲಿ ಅರೆಸ್ಟ್

15/05/2025 9:00 PM

ಸಾಗರದಲ್ಲಿ ಮಹಿಳೆಗೆ ಅವಾಚ್ಯ ಶಬ್ದಗಳಿಂದ ಬೈದು, ಜಾತಿ ನಿಂದನೆ ಮಾಡಿದ ಆರೋಪಿ ಅರೆಸ್ಟ್, ಜೈಲುಪಾಲು

15/05/2025 8:48 PM

BREAKING : ಯಾದಗಿರಿಯಲ್ಲಿ ಘೋರ ದುರಂತ : ಕಾಲು ಜಾರಿ ಬಾವಿಗೆ ಬಿದ್ದು ಇಬ್ಬರು ಯುವತಿಯರು ಸಾವು!

15/05/2025 8:38 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.