Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : `GBA’ ವ್ಯಾಪ್ತಿಯ ಮತದಾರರ ಪಟ್ಟಿ ಪ್ರಕಟ : ನಿಮ್ಮ ಹೆಸರಿದೆಯೇ ಎಂದು ಜಸ್ಟ್ ಇಲ್ಲಿ ಸ್ಕ್ಯಾನ್ ಮಾಡಿ !

14/03/2026 8:44 PM

ALERT : ಓರಲ್ ಸೆಕ್ಸ್ (Oral Sex) ಕೂಡ ಗಂಟಲು ಕ್ಯಾನ್ಸರ್ ಗೆ ಕಾರಣವಾಗಬಹುದು ಎಚ್ಚರ !

14/03/2026 8:36 PM

BREAKING : “ನಾವು ಶೀಘ್ರದಲ್ಲೇ ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯುತ್ತೇವೆ” : ಟ್ರಂಪ್

14/03/2026 8:35 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಾರ್ವಜನಿಕರೇ ಗಮನಿಸಿ : ನಾಯಿ ಕಡಿದಲ್ಲಿ ನಿರ್ಲಕ್ಷ್ಯ ಮಾಡದೇ ʻರೇಬೀಸ್ʼ ಚುಚ್ಚುಮದ್ದು ಪಡೆಯಿರಿ!
KARNATAKA

ಸಾರ್ವಜನಿಕರೇ ಗಮನಿಸಿ : ನಾಯಿ ಕಡಿದಲ್ಲಿ ನಿರ್ಲಕ್ಷ್ಯ ಮಾಡದೇ ʻರೇಬೀಸ್ʼ ಚುಚ್ಚುಮದ್ದು ಪಡೆಯಿರಿ!

By kannadanewsnow5704/06/2024 5:59 AM

ಬಳ್ಳಾರಿ : ಸಾಕಿದ ಅಥವಾ ಬೀದಿ ನಾಯಿಗಳು ಕಡಿದ ಸಂದರ್ಭದಲ್ಲಿ ನಿರ್ಲಕ್ಷ್ಯ ತೋರದೆ, ಸೋಪು, ನೀರಿನಿಂದ ಗಾಯ ಅಥವಾ ಪರಚಿದ ಭಾಗವನ್ನು ತೊಳೆದು ತಕ್ಷಣ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ರೇಬೀಸ್ ಚುಚ್ಚುಮದ್ದು ಪಡೆಯಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ.ರಮೇಶ್ ಬಾಬು ಅವರು ಹೇಳಿದರು.

ಅವರು ಸೋಮವಾರದಂದು, ಬಳ್ಳಾರಿಯ ಬಂಡಿಹಟ್ಟಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ವಟ್ಟಪ್ಪಕೇರಿ ಪ್ರದೇಶದಲ್ಲಿ ಕ್ಷೇತ್ರ ಭೇಟಿ ಮಾಡಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿ ಮಾತನಾಡಿದರು.
ನಾಯಿ, ಬೆಕ್ಕು, ಇತರೆ ಯಾವುದೇ ಪ್ರಾಣಿಗಳು ಕಚ್ಚಿದಾಗ ರೇಬೀಸ್ ಕಾಯಿಲೆ ಬರುವ ಸಾಧ್ಯತೆಯಿದ್ದು, ಮುಖ್ಯವಾಗಿ ನಾಯಿಗಳ ಕಡಿತದಿಂದ ಹೆಚ್ಚಿನ ಪ್ರಮಾಣದಲ್ಲಿ ರೋಗ ಹರಡುವುದರಿಂದ ನಿರ್ಲಕ್ಷ್ಯ ಮಾಡದೇ, ಚುಚ್ಚುಮದ್ದು ಪಡೆದು, ಸಂಭಾವ್ಯ ರೇಬಿಸ್ ಖಾಯಿಲೆ ತಡೆಯುವುದರ ಮೂಲಕ ವ್ಯಕ್ತಿಯ ಜೀವ ಕಾಪಾಡುವ ಕಾರ್ಯ ಪ್ರತಿಯೊಬ್ಬರೂ ಮಾಡಬೇಕಿದೆ ಎಂದರು.

ಮನುಷ್ಯರಿಗೆ ರೇಬಿಸ್ ರೋಗವು ಶೇ.99ರಷ್ಟು ನಾಯಿ ಕಡಿತದಿಂದ ಬರುತ್ತದೆ, ಇನ್ನುಳಿದಂತೆ ಬೆಕ್ಕು ತೋಳ ನಾಯಿ ಕಾಡು ಪ್ರಾಣಿಗಳ ಕಡಿತದಿಂದ ಶೇ.1 ಪ್ರಮಾಣದಷ್ಟು ಹರಡುತ್ತದೆ. ರೇಬೀಸ್ ತಡೆಗೆ ನಾಯಿ ಕಚ್ಚಿದ ನಂತರ ಗಾಯವನ್ನು ಸ್ವಚ್ಚ ನೀರಿನಲ್ಲಿ 15 ನಿಮಿಷಗಳ ಕಾಲ ತೊಳೆಯುವುದರಿಂದ ಶೇ.50 ರಿಂದ 70 ರಷ್ಟು ರೇಬಿಸ್‍ಗೆ ತುತ್ತಾಗುವುದನ್ನು ತಡೆಯಬಹುದು. ವೈದ್ಯರ ಸಲಹೆ ಮೇರೆಗೆ 1ನೇ ದಿವಸ, 3ನೇ ದಿವಸ, 7ನೇ ದಿವಸ, 14ನೇ ದಿವಸ, 28ನೇ ದಿವಸ ಸಂಪೂರ್ಣವಾಗಿ (ಎಲ್ಲಾ 5 ಡೋಸ್‍ಗಳನ್ನು) ಪಡೆಯುವುದರ ಮೂಲಕ ರೇಬಿಸ್ ತಡೆಗಟ್ಟಬಹುದಾಗಿದೆ ಎಂದರು.

ವಿಶ್ವದಾದ್ಯಂತ ಸಂಭವಿಸುವ ರೇಬಿಸ್ ಸಾವಿನ ಪ್ರಕರಣಗಳಲ್ಲಿ ಶೇ.36ರಷ್ಟು ಭಾರತದಲ್ಲಿಯೇ ಸಂಭವಿಸುತ್ತಿವೆ. ಪ್ರಸ್ತುತ ಬಳ್ಳಾರಿ ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ತಕ್ಷಣ ಲಸಿಕೆ ಲಭ್ಯವಾಗುವ ನಿಟ್ಟಿನಲ್ಲಿ ಆ್ಯಂಟಿ ರೇಬಿಸ್ ಕ್ಲಿನಿಕ್‍ನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದರು.

ಬಳ್ಳಾರಿ ಜಿಲ್ಲೆಯು ಎನ್.ಆರ್.ಸಿ.ಪಿ ಕಾರ್ಯಕ್ರಮದಡಿಯಲ್ಲಿ ಎಲ್ಲಾ ಪ್ರಾಣಿ ಮತ್ತು ನಾಯಿ ಕಡಿತ ಪ್ರಕರಣಗಳನ್ನು ಪರಿಣಾಮಕಾರಿಯಾಗಿ ಪರಿವೀಕ್ಷಣೆಯಲ್ಲಿಟ್ಟಿದ್ದು, ರೋಗ ನಿಯಂತ್ರಣ ಚಟುವಟಿಕೆಗಳನ್ನು ಬಲಪಡಿಸಲು ತರಬೇತಿ ಹಾಗೂ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ ಹಾಗೂ ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಅಂತರ್ ಇಲಾಖಾ ಸಹಕಾರ ಅತ್ಯವಶ್ಯಕ ಎಂದು ಅವರು ಹೇಳಿದರು.

ರೇಬಿಸ್ ಖಾಯಿಲೆಗೆ ಒಮ್ಮೆ ತುತ್ತಾದ ಬಳಿಕ ಯಾವುದೇ ಚಿಕಿತ್ಸೆ ಇರುವುದಿಲ್ಲವಾದರೂ ರೇಬಿಸ್ ಖಾಯಿಲೆಯು ಸೂಕ್ತ ಪೂರ್ವ ರೋಗ ನಿರೋಧಕ ಲಸಿಕೆ ಪಡೆಯುವುದರಿಂದ ಸಂಪೂರ್ಣವಾಗಿ ತಡೆಗಟ್ಟಬಹುದಾಗಿದೆ. ಆದ್ದರಿಂದ ಸಾರ್ವಜನಿಕರು ಯಾವುದೇ ಪ್ರಾಣಿ ಕಡಿತ ಸಂದರ್ಭದಲ್ಲಿ ಗಾಬರಿಪಡದೆ ನಾಯಿ, ಪ್ರಾಣಿ ಕಡಿತದ 24 ಗಂಟೆಯೊಳಗೆ ಆ್ಯಂಟಿ ರೇಬಿಸ್ ಲಸಿಕೆಯನ್ನು ತಪ್ಪದೇ ಪಡೆಯಬೇಕು ಎಂದು ತಿಳಿಸಿದರು.
ಪ್ರಾಣಿಗಳಿಗೆ ರೋಗನಿರೋಧಕ ಲಸಿಕೆ ಹಾಕಿಸುವುದರಿಂದ ಜೊತೆಯಲ್ಲಿ ನಾಯಿಗಳ ಸಂತಾನೋತ್ಪತ್ತಿ ನಿಯಂತ್ರಿಸಲು ಪರಿಣಾಮಕಾರಿಯಾದ ಮಾರ್ಗಗಳನ್ನು ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಅನುಷ್ಠಾನಗೊಳಿಸುವುದರಿಂದ ರೇಬಿಸ್ ಖಾಯಿಲೆಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಬಹುದು ಎಂದು ಹೇಳಿದರು.

Watch out for the public: Get a rabies injection without neglecting a dog bite! ಸಾರ್ವಜನಿಕರೇ ಗಮನಿಸಿ : ನಾಯಿ ಕಡಿದಲ್ಲಿ ನಿರ್ಲಕ್ಷ್ಯ ಮಾಡದೇ ʻರೇಬೀಸ್ʼ ಚುಚ್ಚುಮದ್ದು ಪಡೆಯಿರಿ!
Share. Facebook Twitter LinkedIn WhatsApp Email

Related Posts

BIG NEWS : `GBA’ ವ್ಯಾಪ್ತಿಯ ಮತದಾರರ ಪಟ್ಟಿ ಪ್ರಕಟ : ನಿಮ್ಮ ಹೆಸರಿದೆಯೇ ಎಂದು ಜಸ್ಟ್ ಇಲ್ಲಿ ಸ್ಕ್ಯಾನ್ ಮಾಡಿ !

14/03/2026 8:44 PM1 Min Read

ALERT : ಓರಲ್ ಸೆಕ್ಸ್ (Oral Sex) ಕೂಡ ಗಂಟಲು ಕ್ಯಾನ್ಸರ್ ಗೆ ಕಾರಣವಾಗಬಹುದು ಎಚ್ಚರ !

14/03/2026 8:36 PM2 Mins Read

JOB ALERT: ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ; ರಾಜ್ಯ ಪೊಲೀಸ್ ಇಲಾಖೆಯ 5,764 ಕಾನ್ ಸ್ಟೇಬಲ್ ಹುದ್ದೆ ಭರ್ತಿಗೆ ಚಾಲನೆ

14/03/2026 8:23 PM1 Min Read
Recent News

BIG NEWS : `GBA’ ವ್ಯಾಪ್ತಿಯ ಮತದಾರರ ಪಟ್ಟಿ ಪ್ರಕಟ : ನಿಮ್ಮ ಹೆಸರಿದೆಯೇ ಎಂದು ಜಸ್ಟ್ ಇಲ್ಲಿ ಸ್ಕ್ಯಾನ್ ಮಾಡಿ !

14/03/2026 8:44 PM

ALERT : ಓರಲ್ ಸೆಕ್ಸ್ (Oral Sex) ಕೂಡ ಗಂಟಲು ಕ್ಯಾನ್ಸರ್ ಗೆ ಕಾರಣವಾಗಬಹುದು ಎಚ್ಚರ !

14/03/2026 8:36 PM

BREAKING : “ನಾವು ಶೀಘ್ರದಲ್ಲೇ ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯುತ್ತೇವೆ” : ಟ್ರಂಪ್

14/03/2026 8:35 PM

JOB ALERT: ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ; ರಾಜ್ಯ ಪೊಲೀಸ್ ಇಲಾಖೆಯ 5,764 ಕಾನ್ ಸ್ಟೇಬಲ್ ಹುದ್ದೆ ಭರ್ತಿಗೆ ಚಾಲನೆ

14/03/2026 8:23 PM
State News
KARNATAKA

BIG NEWS : `GBA’ ವ್ಯಾಪ್ತಿಯ ಮತದಾರರ ಪಟ್ಟಿ ಪ್ರಕಟ : ನಿಮ್ಮ ಹೆಸರಿದೆಯೇ ಎಂದು ಜಸ್ಟ್ ಇಲ್ಲಿ ಸ್ಕ್ಯಾನ್ ಮಾಡಿ !

By kannadanewsnow5714/03/2026 8:44 PM KARNATAKA 1 Min Read

ಬೆಂಗಳೂರು: ಮತದಾರರು ತಮ್ಮ ಹೆಸರನ್ನು ಸುಲಭವಾಗಿ ಹುಡುಕಲು ಅನುಕೂಲವಾಗುವಂತೆ, ವಾರ್ಡ್ವಾರು ಪರಿಷ್ಕೃತ ಕರಡು ಮತದಾರರ ಪಟ್ಟಿಯನ್ನು ಇದೀಗ ಅಧಿಕೃತ ಜಾಲತಾಣದಲ್ಲಿ…

ALERT : ಓರಲ್ ಸೆಕ್ಸ್ (Oral Sex) ಕೂಡ ಗಂಟಲು ಕ್ಯಾನ್ಸರ್ ಗೆ ಕಾರಣವಾಗಬಹುದು ಎಚ್ಚರ !

14/03/2026 8:36 PM

JOB ALERT: ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ; ರಾಜ್ಯ ಪೊಲೀಸ್ ಇಲಾಖೆಯ 5,764 ಕಾನ್ ಸ್ಟೇಬಲ್ ಹುದ್ದೆ ಭರ್ತಿಗೆ ಚಾಲನೆ

14/03/2026 8:23 PM

ನಿಮ್ಮ ದೇವರ ಮನೆಯಲ್ಲಿ ಕುಳಿತು ಈ ಶ್ಲೋಕಗಳನ್ನು ತಪ್ಪದೇ ಪಠಿಸಿ, ಕಷ್ಟಗಳೆಲ್ಲಾ ದೂರ ದೂರ

14/03/2026 6:57 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.