ಮಹಾರಾಷ್ಟ್ರ: ಮುಂಬೈನಲ್ಲಿ ಸುರಿಯುತ್ತಿದ್ದ ಭಾರೀ ಮಳೆಯ ನಡುವೆಯೂ ಸ್ವಿಗ್ಗಿ ಡೆಲಿವರಿ ಬಾಯ್‌ ಆರ್ಡರ್‌ ನೀಡಿದ್ದ ಫುಡ್‌ ಪ್ಯಾಕೇಜ್‌ಗಳನ್ನು ತಲುಪಿಸಲು ಕುದುರೆಯನ್ನೇರಿ ಹೋಗುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದೆ.

ನಗರದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರಸ್ತೆಗಳು ನೀರಿನಿಂದ ಜಲಾವೃತಗೊಂಡಿದ್ದರಿಂದ ಡೆಲಿವರಿ ಬಾಯ್‌ ಆಹಾರ ಪೊಟ್ಟಣಗಳನ್ನು ತಲುಪಿಸಲು ಕುದುರೆಯ ಮೇಲೆ ಪ್ರಯಾಣಿಸುತ್ತಿರುವುದನ್ನು ವೀಡಿಯೊದಲ್ಲಿ ಚಿತ್ರೀಕರಿಸಲಾಗಿದ್ದು, ವೈರಲ್‌ ಆಗಿದೆ.

ಇದು ಶೇರ್‌ ಆದ ಕೆಲವೇ ಗಂಟೆಗಳಲ್ಲಿ ವೀಡಿಯೊವನ್ನು ನೆಟ್ಟಿಗರು ಪ್ರಶಂಸಿಸಿದ್ದಾರೆ.

ಈ ವಾರದ ಆರಂಭದಲ್ಲಿ ಮುಂಬೈನಲ್ಲಿ ಭಾರೀ ಮಳೆ ಸುರಿದಿದೆ. ಭಾರತೀಯ ಹವಾಮಾನ ಇಲಾಖೆ (IMD) ನಗರದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆಯೆಂದು ಆರೆಂಜ್ ಎಚ್ಚರಿಕೆಯನ್ನು ನೀಡಿದೆ.

Good News : ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ : `CET-NEET’ ವಿದ್ಯಾಭ್ಯಾಸ ಸಾಲಕ್ಕಾಗಿ ಅರ್ಜಿ ಆಹ್ವಾನ

Breaking news:‌ ಮಹಾ ಅಸೆಂಬ್ಲಿ ಸ್ಪೀಕರ್ ಆಗಿ ಬಿಜೆಪಿಯ ʻರಾಹುಲ್ ನಾರ್ವೇಕರ್ʼ ಆಯ್ಕೆ

Share.
Exit mobile version