ಬೆಂಗಳೂರು: ಬೆಂಗಳೂರಿನ ಪ್ರಸಿದ್ಧ ರಾಮೇಶ್ವರಂ ಕೆಫೆಯಲ್ಲಿ ಇಂದು ಮಧ್ಯಾಹ್ನ ಬಾಂಬ್ ಸ್ಫೋಟಗೊಂಡಾಗ ಹೊಗೆಯ ಮೋಡ, ನೆಲದ ಮೇಲೆ ಮಲಗಿದ್ದ ವ್ಯಕ್ತಿ ಮತ್ತು ಭಯಭೀತರಾದ ಗ್ರಾಹಕರು ಮತ್ತು ಸಿಬ್ಬಂದಿ ಹೊರಗೆ ಧಾವಿಸಿದ ದೃಶ್ಯಗಳು ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿವೆ. ಸ್ಫೋಟದಲ್ಲಿ 9 ಮಂದಿ ಗಾಯಗೊಂಡಿದ್ದಾರೆ.
ಘಟನೆ ವಿಡಿಯೋ ವೈರಲ್ ಆಗಿದ್ದು ಸಿಸಿಟಿವಿಯಲ್ಲಿ ದೃಶ್ಯಗಳು ಸೆರೆಯಾಗಿದೆ.
ಈ ನಡುವೆ ಬೆಂಗಳೂರಿನ ರಾಮೇಶ್ವರ ಕಫೆಯಲ್ಲಿ ನಡೆದಿರುವ ಸ್ಪೋಟ ಘಟನೆಯ ತನಿಖೆ ತೀವ್ರವಾಗಿ ನಡೆಯುತ್ತಿದೆ. ತಪ್ಪಿತಸ್ಥರ ವಿರುದ್ಧ ಖಚಿತವಾಗಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಪ್ರಾಥಮಿಕ ತನಿಖೆಯ ಪ್ರಕಾರ ಅದು ಸಣ್ಣ ಪ್ರಮಾಣದ ಸುಧಾರಿತ ಸ್ಪೋಟಕವಾಗಿತ್ತು ಎಂದು ತಿಳಿದುಬಂದಿದೆ, ಪೂರ್ಣ ವರದಿಗಾಗಿ ಕಾಯುತ್ತಿದ್ದೇನೆ ಎಂದು ತಿಳಿಸಿದರು.
ಕ್ಯಾಶಿಯರ್ ಬಳಿ ಟೋಕನ್ ಪಡೆದು ಅಲ್ಲಿ ತಿಂಡಿ ತಿಂದಿರುವ ವ್ಯಕ್ತಿ, ಬ್ಯಾಗ್ ಇಟ್ಟು ಬಂದಿದ್ದಾನೆ ಎಂಬ ಮಾಹಿತಿ ದೊರೆತಿದೆ ಎಂದರು. ಸುಮಾರು ಎಂಟು ಜನರಿಗೆ ಗಾಯಗಳಾಗಿವೆ. ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಿಸಿ ಟಿವಿ ಕ್ಯಾಮರಾ ಪರೀಕ್ಷಿಸಲಾಗುತ್ತಿದೆ. ಈ ಬಗ್ಗೆ ತನಿಖೆ ನಡೆಯುತ್ತಿದ್ದು ಗೃಹ ಸಚಿವರಿಗೆ ಸ್ಥಳಕ್ಕೆ ಭೇಟಿ ನೀಡುವಂತೆ ತಿಳಿಸಲಾಗಿದೆ. ಇನ್ನು ಸ್ವಲ್ಪ ಹೊತ್ತಿನಲ್ಲಿಯೇ ಸ್ಪಷ್ಟ ಮಾಹಿತಿ ದೊರೆಯಲಿದೆ ಎಂದರು.
VIDEO | Explosion at Rameshwaram Cafe in Bengaluru captured in the CCTV installed in the eatery.
At least five persons were injured in a fire caused by a suspected LPG cylinder blast at the popular city eatery earlier today.
(Source: Third Party)
(Disclaimer: Disturbing… pic.twitter.com/Wl6GRwsOWo
— Press Trust of India (@PTI_News) March 1, 2024