ನವದೆಹಲಿ: ದೇಶಾದ್ಯಂತ ಇಂಧನ ಅಭಾವ ಸೃಷ್ಟಿಯಾಗಲಿದೆ ಎಂಬ ವದಂತಿಗಳು ಹಬ್ಬಿರುವ ಹಿನ್ನೆಲೆಯಲ್ಲಿ ಹಲವು ಪ್ರಮುಖ ನಗರಗಳಲ್ಲಿ ‘ಪ್ಯಾನಿಕ್ ಬೈಯಿಂಗ್’ (Panic Buying) ಶುರುವಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಸಿಗುವುದಿಲ್ಲ ಎಂಬ ಭಯದಿಂದ ಜನರು ಪೆಟ್ರೋಲ್ ಬಂಕ್ಗಳ ಮುಂದೆ ಕಿಲೋಮೀಟರ್ಗಟ್ಟಲೆ ಸಾಲುಗಟ್ಟಿ ನಿಂತಿರುವ ದೃಶ್ಯಗಳು ಕಂಡುಬರುತ್ತಿವೆ. ಆದರೆ, ಈ ವದಂತಿಗಳನ್ನು ತಳ್ಳಿಹಾಕಿರುವ ಕೇಂದ್ರ ಸರ್ಕಾರ, ದೇಶದಲ್ಲಿ ಇಂಧನದ ಯಾವುದೇ ಕೊರತೆಯಿಲ್ಲ ಎಂದು ಸ್ಪಷ್ಟಪಡಿಸಿದೆ.
ಪಶ್ಚಿಮ ಏಷ್ಯಾದಲ್ಲಿ (ಇರಾನ್-ಅಮೆರಿಕ) ನಡೆಯುತ್ತಿರುವ ಯುದ್ಧದ ಬಿಕ್ಕಟ್ಟಿನಿಂದಾಗಿ ಕಚ್ಚಾ ತೈಲ ಪೂರೈಕೆ ಸ್ಥಗಿತಗೊಳ್ಳಬಹುದು ಎಂಬ ತಪ್ಪು ಮಾಹಿತಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದು ಈ ಆತಂಕಕ್ಕೆ ಮುಖ್ಯ ಕಾರಣವಾಗಿದೆ.
ಮುಂಬೈ, ದೆಹಲಿ, ಹೈದರಾಬಾದ್ ಮತ್ತು ಬೆಂಗಳೂರಿನ ಕೆಲವು ಭಾಗಗಳಲ್ಲಿ ಪೆಟ್ರೋಲ್ ಬಂಕ್ಗಳ ಮುಂದೆ ವಾಹನ ಸವಾರರು ಮುಗಿಬಿದ್ದಿದ್ದಾರೆ.ಕೇವಲ ವಾಹನಗಳಿಗೆ ಮಾತ್ರವಲ್ಲದೆ, ಮುಂದಿನ ದಿನಗಳಿಗಾಗಿ ಜನರು ಬಾಟಲಿ ಮತ್ತು ಕ್ಯಾನ್ಗಳಲ್ಲಿ ಇಂಧನ ತುಂಬಿಸಿಕೊಳ್ಳುತ್ತಿರುವುದು ಕಂಡುಬಂದಿದೆ.
ಗ್ರಾಹಕರಲ್ಲಿ ಮೂಡಿರುವ ಆತಂಕವನ್ನು ಹೋಗಲಾಡಿಸಲು ಕೇಂದ್ರ ಪೆಟ್ರೋಲಿಯಂ ಸಚಿವಾಲಯವು ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದೆ. “ದೇಶದಲ್ಲಿ ಮುಂದಿನ ಹಲವು ವಾರಗಳಿಗೆ ಸಾಕಾಗುವಷ್ಟು ಪೆಟ್ರೋಲ್ ಮತ್ತು ಡೀಸೆಲ್ ದಾಸ್ತಾನು ಇದೆ. ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡಬಾರದು” ಎಂದು ಸರ್ಕಾರ ತಿಳಿಸಿದೆ. ತೈಲ ಕಂಪನಿಗಳು ನಿರಂತರವಾಗಿ ಇಂಧನ ಪೂರೈಕೆ ಮಾಡುತ್ತಿವೆ. ಯಾವುದೇ ಬಂಕ್ಗಳನ್ನು ಮುಚ್ಚುವ ಅಥವಾ ಪೂರೈಕೆ ಕಡಿತಗೊಳಿಸುವ ಆಲೋಚನೆ ಇಲ್ಲ ಎಂದು ಸ್ಪಷ್ಟಪಡಿಸಲಾಗಿದೆ.ಪ್ಯಾನಿಕ್ ಬೈಯಿಂಗ್ನಿಂದಾಗಿ ಖಾಲಿಯಾಗುತ್ತಿರುವ ಬಂಕ್ಗಳಿಗೆ ತಕ್ಷಣವೇ ಇಂಧನ ತಲುಪಿಸಲು ಹೆಚ್ಚುವರಿ ಟ್ಯಾಂಕರ್ಗಳನ್ನು ನಿಯೋಜಿಸಲಾಗಿದೆ.
#WATCH | Prayagraj, UP: Long queues are seen at the petrol stations as the public rushes to refuel their vehicles. The petrol pump owners state that there is no cause for panic and adequate supplies are available. (25.03) pic.twitter.com/Uf4QzySA66
— ANI (@ANI) March 26, 2026








