ದಾವಣಗೆರೆ ; ಪ್ರಸಕ್ತ ಸಾಲಿನಲ್ಲಿ ಭದ್ರಾ ಜಲಾಶಯದಿಂದ ತುಂಗಾಭದ್ರಾ ನದಿಗೆ ಗದಗ, ಹಾವೇರಿ ಜಿಲ್ಲಾ ವ್ಯಾಪ್ತಿಗೆ ಬರುವ ಗ್ರಾಮಗಳ ಕುಡಿಯುವ ನೀರಿನ ಉದ್ದೇಶಕ್ಕಾಗಿ ಭದ್ರಾ ನದಿಯ ಮೂಲಕ ಮೇ.22ರ ರಾತ್ರಿ 10 ಗಂಟೆಯಿಂದ ಮೇ 28ರವರೆಗೆ ನೀರನ್ನು ಹರಿಸಲಾಗುವುದು.
ನದಿ ಪಾತ್ರದಲ್ಲಿ ಸಾರ್ವಜನಿಕರು ತಿರುಗಾಡುವುದಾಗಲಿ, ದನಕರುಗಳನ್ನು ನದಿಗೆ ಇಳಿಸುವುದಾಗಲಿ, ಇತರೆ ಚಟುವಟಿಕೆಗಾಗಿ ನದಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಈ ಅವಧಿಯಲ್ಲಿ ರೈತರು ನದಿ ದಂಡೆಯಲ್ಲಿ ಅನಧಿಕೃತವಾಗಿ ಅಳವಡಿಸಿರುವ ಪಂಪ್‍ಸೆಟ್‍ಗಳಿಂದ ನೀರೆತ್ತುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕ.ನೀ.ನಿ.ನಿ ಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರರು ತಿಳಿಸಿದ್ದಾರೆ.
‘ಸೇನೆಗೆ ಅಗ್ನಿವೀರ ಬೇಡ, ನಾವದನ್ನು ಕಸದ ಬುಟ್ಟಿಗೆ ಎಸೆಯುತ್ತೇವೆ’ : ರಾಹುಲ್ ಗಾಂಧಿ