ಶಿವಮೊಗ್ಗ: ಜಿಲ್ಲೆಯ ಭದ್ರ ಜಲಾಶಯದಿಂದ ಮಂಗಳವಾರ ಬೆಳಗ್ಗೆ ನಾಲ್ಕು ಕ್ರಾಸ್ಟರ್ ಗೇಟ್ ಗಳ ಮೂಲಕ ನೀರು ಭದ್ರಾ ನದಿಗೆ ಬಿಡುಗಡೆ ಮಾಡಲಾಗಿದೆ.
ಭದ್ರಾ ಜಲಾಶಯದಲ್ಲಿ 30 ಸಾವಿರ ಕ್ಯೂಸೆಕ್ ನೀರು ಒಳಹರಿವಿದ್ದು ಸೋಮವಾರ ರಾತ್ರಿ 181.3 ಅಡಿ ನೀರು ಸಂಗ್ರಹವಾಗಿತ್ತು. ಇಂದು 183.3 ಕ್ಯೂಸೆಕ್ ನೀರು ಸಂಗ್ರಹವಾಗಿದ್ದರಿಂದ ಜಲಾಶಯ ಭರ್ತಿಯಾಗುವ ಹಂತಕ್ಕೆ ತಲುಪಿದೆ.
186ಅಡಿ ಸಾಮರ್ಥ್ಯದ ಜಲಾಶಯದಲ್ಲಿ ಒಳಹರಿವು ಹೆಚ್ಚಾದ ಪರಿಣಾಮ ಜಲಾಶಯದಿಂದ ಭದ್ರಾ ನದಿಗೆ ನೀರು ಹರಿಸಲಾಗುತ್ತಿದೆ.
ಸುಮಾರು 2 ಸಾವಿರ ಕ್ಯೂಸೆಸ್ ನೀರು ನದಿ ಬಿಡಲಾಗಿದೆ ನದಿ ಪಾತ್ರದ ಜನರಿಗೆ ಮುನ್ನೆಚ್ಚರಿಕೆ ನೀಡಲಾಗಿದ್ದು ಸುರಕ್ಷತಾ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ನೀರಾವರಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ವಯನಾಡಿನಲ್ಲಿ ಭೂ ಕುಸಿತ: ತೀವ್ರ ಆಘಾತ ವ್ಯಕ್ತಪಡಿಸಿದ ಕೇಂದ್ರ ಸಚಿವ HD ಕುಮಾರಸ್ವಾಮಿ
BREAKING :40 ವರ್ಷಗಳ ಹಿಂದೆಯೇ HD ಕುಮಾರಸ್ವಾಮಿಗೆ ‘ಮುಡಾ’ ಸೈಟ್ ಸಿಕ್ಕಿದೆ : ಸಿಎಂ ಸಿದ್ದರಾಮಯ್ಯ ತಿರುಗೇಟು