ಕಲಬುರ್ಗಿ: ಕಲ್ಯಾಣ ಕರ್ನಾಟಕದ ಜನತೆಗೆ ಹೃದಯ ಸಂಬಂಧಿ ಸಮಸ್ಯೆ ಕಂಡು ಬಂದಾಗ, ಕಲಬುರ್ಗಿಯಲ್ಲಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೇ ಈ ಆಸ್ಪತ್ರೆಯಲ್ಲಿನ ಆಪರೇಷನ್ ಥಿಯೇಟರ್ ಅನ್ನೇ ನೀರಿನ ಸಮಸ್ಯೆಯಿಂದಾಗಿ ಬಂದ್ ಮಾಡಿರುವುದಾಗಿ ತಿಳಿದು ಬಂದಿದೆ.

ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಅವರ ತವರು ಜಿಲ್ಲೆಯಲ್ಲೇ ಕಲ್ಯಾಣ ಕರ್ನಾಟಕದ ಜನತೆಗೆ ಹೃದ್ರೋಗ ಸಂಬಂಧಿಸಿದಂತ ಸಮಸ್ಯೆ ಬಂದಾಗ ಕಲಬುರ್ಗಿಯ ಹೃದ್ರೋಗ ಆಸ್ಪತ್ರೆಗೆ ತೆರಳಿ, ಚಿಕಿತ್ಸೆ ಪಡೆಯುತ್ತಿದ್ದರು. ಅಲ್ಲದೇ ಹೃದ್ರೋಗ ಸಮಸ್ಯೆಗೆ ಸಂಬಂಧಿಸಿದಂತೆ ಆಪರೇಷನ್ ಕೂಡ ಮಾಡಲಾಗುತ್ತಿತ್ತು.

ಆದ್ರೇ ಇದೀಗ ಕಲ್ಯಾಣ ಕರ್ನಾಟಕದ ಹೃದಯ ಸಂಬಂಧಿ ರೋಗಿಗಳ ಸಮಸ್ಯೆಗೆ ಆಸರೆಯಾಗಿದ್ದಂತ ಜಯದೇವ ಹೃದ್ರೋಗ ಆಸ್ಪತ್ರೆಯ ಆಪರೇಷನ್ ಥಿಯೇಟರ್ ನೀರಿನ ಸಮಸ್ಯೆಯಿಂದ ಬಂದ್ ಮಾಡಲಾಗಿದೆ ಎನ್ನಲಾಗುತ್ತಿದೆ. ಕಳೆದ ಮೂರು ದಿನಗಳಿಂದ ವೈದ್ಯರು ಶಸ್ತ್ರ ಚಿಕಿತ್ಸೆ ಮಾಡೋದನ್ನು ನಿಲ್ಲಿಸಿದ್ದಾರೆ ಎನ್ನಲಾಗುತ್ತಿದೆ. ಹೀಗಾಗಿ ಹೃದ್ರೋಗಿಗಳು ತೀವ್ರ ತೊಂದರೆಗೆ ಸಿಲುಕಿದ್ದಾರೆ. ಈ ಬಗ್ಗೆ ಸಚಿವರು ಗಮನ ಹರಿಸಿ ಸಮಸ್ಯೆ ಸರಿಪಡಿಸೋ ಕೆಲಸ ಮಾಡಲಿ ಎಂಬುದಾಗಿ ಜನತೆ ಕೋರಿದ್ದಾರೆ.

BREAKING : ಜಾರ್ಖಂಡ್’ನಲ್ಲಿ ಭದ್ರತಾ ಪಡೆ ಕಾರ್ಯಾಚರಣೆ ; ನಾಲ್ವರು ನಕ್ಸಲರ ಹತ್ಯೆ, ಇಬ್ಬರ ಬಂಧನ

ರಾಜ್ಯದಲ್ಲಿ ಪೆಟ್ರೋಲ್-ಡೀಸೆಲ್ ಮೇಲಿನ ತೆರಿಗೆ ಹೆಚ್ಚಳಕ್ಕೆ ಬಿಜೆಪಿ ಕಾರಣ: ಸಿಎಂ ಸಿದ್ಧರಾಮಯ್ಯ

Share.
Exit mobile version