ಬೆಂಗಳೂರು: ಕೇರಳದ ವಯನಾಡಿನಲ್ಲಿ ಭಾರೀ ಭೂಕುಸಿತ ಉಂಟಾಗಿ ಕನ್ನಡಿಗರು ಮೃತಪಟ್ಟಿದ್ದರು. ಇಂತಹ ಮೃತ ಕನ್ನಡಿಗರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ನೀಡುವುದಾಗಿ ಸಿಎಂ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ.
ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಾವಿನ ಸಂಖ್ಯೆ ಏರುತ್ತಲೇ ಹೋಗುತ್ತಿದೆ. ಇದೊಂದು ಅತ್ಯಂತ ಘೋರ ದುರಂತ, ಈ ದುರಂತದಲ್ಲಿ ಕನ್ನಡಿಗರು ಪ್ರಾಣ ಕಳೆದುಕೊಂಡದ್ದು ಮತ್ತಷ್ಟು ನೋವುಂಟು ಮಾಡಿದೆ ಎಂದಿದ್ದಾರೆ.
ಮೃತಪಟ್ಟ ಕನ್ನಡಿಗರಿಗೆ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು. ಇದೇ ವೇಳೆ ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.
ಈಗಾಗಲೇ ರಾಜ್ಯದ ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳು, ಎನ್.ಡಿ.ಆರ್.ಎಫ್ ತಂಡ ಮತ್ತು ಸೇನಾ ಪಡೆಯ ತಂಡಗಳು ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ. ಇಂದು ರಕ್ಷಣಾ ಕಾರ್ಯದ ಉಸ್ತುವಾರಿಗಾಗಿ ಸಚಿವರಾದ ಸಂತೋಷ್ ಲಾಡ್ ಅವರನ್ನು ವಯನಾಡಿಗೆ ಕಳುಹಿಸಿಕೊಡಲಾಗುತ್ತಿದೆ ಎಂದು ಹೇಳಿದ್ದಾರೆ.
ಸಂತ್ರಸ್ತರ ಪ್ರಾಣ ರಕ್ಷಣೆ ನಮ್ಮ ಮೊದಲ ಆದ್ಯತೆಯಾಗಿದ್ದು, ಸಂಕಷ್ಟದಲ್ಲಿರುವ ಕನ್ನಡಿಗರನ್ನು ಸುರಕ್ಷಿತವಾಗಿ ನಾಡಿಗೆ ಕರೆತರಲು ನಮ್ಮ ಸರ್ಕಾರ ಶಕ್ತಿಮೀರಿ ಶ್ರಮಿಸುತ್ತಿದೆ ಎಂದಿದ್ದಾರೆ.
ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಾವಿನ ಸಂಖ್ಯೆ ಏರುತ್ತಲೇ ಹೋಗುತ್ತಿದೆ. ಇದೊಂದು ಅತ್ಯಂತ ಘೋರ ದುರಂತ, ಈ ದುರಂತದಲ್ಲಿ ಕನ್ನಡಿಗರು ಪ್ರಾಣ ಕಳೆದುಕೊಂಡದ್ದು ಮತ್ತಷ್ಟು ನೋವುಂಟು ಮಾಡಿದೆ.
ಮೃತಪಟ್ಟ ಕನ್ನಡಿಗರಿಗೆ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು. ಇದೇ ವೇಳೆ ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು…
— CM of Karnataka (@CMofKarnataka) July 31, 2024
ಬೆಂಗಳೂರು, ನೀರಾವರಿ ಅಭಿವೃದ್ಧಿಗೆ ಹೆಚ್ಚಿನ ಅನುದಾನಕ್ಕೆ ಪ್ರಧಾನಿ ಮೋದಿ ಬಳಿ ಬೇಡಿಕೆ: ಡಿಸಿಎಂ ಡಿ.ಕೆ.ಶಿವಕುಮಾರ್
ರಾಜ್ಯದಲ್ಲಿ ಮತ್ತೆ ಸದ್ದು ಮಾಡಿದ ‘ಭ್ರೂಣಹತ್ಯೆ’ : ರಾಮನಗರ ಪೊಲೀಸರ ವಿರುದ್ಧ ಮೋದಿಗೆ ಪತ್ರ ಬರೆದ ಮಹಿಳೆ!