ನವದೆಹಲಿ/ಕೊಚ್ಚಿ: ಕೇರಳದ ವಯನಾಡ್ ನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಐವರು ಮೃತಪಟ್ಟಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ದುಃಖ ವ್ಯಕ್ತಪಡಿಸಿದ್ದಾರೆ.
“ವಯನಾಡಿನ ಕೆಲವು ಭಾಗಗಳಲ್ಲಿ ಭೂಕುಸಿತದಿಂದ ತೊಂದರೆಗೀಡಾಗಿದ್ದೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಎಲ್ಲರೊಂದಿಗಿದ್ದೇನೆ ಮತ್ತು ಗಾಯಗೊಂಡವರೊಂದಿಗೆ ಪ್ರಾರ್ಥಿಸುತ್ತೇನೆ” ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ವಯನಾಡ್ ಮಾಜಿ ಸಂಸದ ರಾಹುಲ್ ಗಾಂಧಿ ಕೂಡ ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದು, ಸಿಕ್ಕಿಬಿದ್ದವರನ್ನು ಸುರಕ್ಷಿತವಾಗಿ ರಕ್ಷಿಸುವ ಭರವಸೆ ವ್ಯಕ್ತಪಡಿಸಿದ್ದಾರೆ.
ನವದೆಹಲಿ: ವಯನಾಡ್ ನ ಕೆಲವು ಭಾಗಗಳಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮೃತಪಟ್ಟವರ ಹತ್ತಿರದ ಬಂಧುಗಳಿಗೆ ಪಿ.ಎಂ.ಎನ್.ಆರ್.ಎಫ್. ನಿಂದ 2 ಲಕ್ಷ ರೂ.ಗಳ ಪರಿಹಾರವನ್ನು ಗಾಯಗೊಂಡವರಿಗೆ 50,000 ರೂ.ಪರಿಹಾರವನ್ನು ಪ್ರಧಾನಮಂತ್ರಿಯವರು ಘೋಷಿಸಿದರು.
Prime Minister announced an ex-gratia of Rs. 2 lakhs from PMNRF for the next of kin of each deceased in the landslides in parts of Wayanad. The injured would be given Rs. 50,000. pic.twitter.com/iDy1Kgaqv2
— ANI (@ANI) July 30, 2024