ಬೆಂಗಳೂರು: ನೆರೆಯ ಕೇರಳದ ವಯನಾಡಿನಲ್ಲಿ ಭೀಕರ ಭೂ ಕುಸಿತ ಉಂಟಾಗಿತ್ತು. ಈ ಘಟನೆಯಲ್ಲಿ ನೂರಾರು ಮಂದಿ ಸಾವನ್ನಪ್ಪಿದ್ದಾರೆ. ಈ ಹಿನ್ನಲೆಯಲ್ಲಿ ಕೇರಳದ ನೆರವಿಗೆ ಹಾಗೂ ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಧಾವಿಸಿದೆ. ಅಲ್ಲದೇ ಸಹಾಯವಾಣಿ ಸಂಖ್ಯೆಯನ್ನು ಬಿಡುಗಡೆ ಮಾಡಲಾಗಿದೆ.
ರಾಜ್ಯ ಸರ್ಕಾರದಿಂದ ಮಾಹಿತಿ ಬಿಡುಗಡೆ ಮಾಡಿದ್ದು, ಬೆಂಗಳೂರಿನಲ್ಲಿರುವ ಎನ್ ಡಿ ಆರ್ ಎಪ್ ತಂಡ ಹಾಗೂ ಮದ್ರಾಸ್ ಎಂಜಿನಿಯರ್ ಗ್ರೂಪ್ ಸೇನಾ ಪಡೆಯ ತಂಡಗಳ ತ್ವರಿತ ರವಾನೆ ಮಾಡಲಾಗುತ್ತದೆ. ಅಗತ್ಯ ಉಪಕರಣಗಳು ಮತ್ತು ಪರಿಹಾರ ಸಾಮಗ್ರಿಗಳನ್ನು ರವಾನೆಗೆ ನೆರವು ನೀಡಲಾಗುವುದು ಎಂದಿದೆ.
ಕನ್ನಡಿಗರ ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗಳ ಸಮನ್ವಯಕ್ಕಾಗಿ ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಸಿ.ಜಾಫರ್ -9448355577 ಹಾಗೂ ದಿಲೀಶ್ ಶಶಿ-9446000514 ಗೆ ಸಂತ್ರಸ್ತರು ಕರೆ ಮಾಡಿ, ನೆರವು ಪಡೆಯಬಹುದು ಅಂತ ಹೇಳಿದೆ.
ಇದಷ್ಟೇ ಅಲ್ಲದೇ ಚಾಮರಾಜನ ನಗರ ಜಿಲ್ಲಾಧಿಕಾರಿ ಕಚೇರಿಯಿಂದ ಸಹಾಯವಾಣಿ ಸಂಖ್ಯೆ ಆರಂಭಿಸಲಾಗಿದೆ. 08226-223163, 223161, 223160 ಹಾಗೂ ವಾಟ್ಸ್ ಆಪ್ ಸಂಖ್ಯೆ 9740942901ಗೆ ಸಂಪರ್ಕಿಸಿ ನೆರವಿಗೆ ಕೋರಿದೆ.
ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಿಂದ ಸಂಕಷ್ಟದಲ್ಲಿರುವ ಜನರ ನೆರವಿಗಾಗಿ ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಹಾಗೆಯೇ ಗಡಿಜಿಲ್ಲೆ ಚಾಮರಾಜ ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಹಾಯವಾಣಿ ತೆರೆಯಲಾಗಿದೆ.
ಈ ಮಾಹಿತಿಯನ್ನು ಹೆಚ್ಚೆಚ್ಚು ಜನರಿಗೆ ತಲುಪಿಸಿ, ಸಂಕಷ್ಟದಲ್ಲಿರುವವರಿಗೆ ಸಕಾಲದಲ್ಲಿ ನೆರವು ಸಿಗಲು… pic.twitter.com/UYoYAFdqMf
— DIPR Karnataka (@KarnatakaVarthe) July 30, 2024
BREAKING: ನಾಳೆ ಕೇರಳದ ವಯನಾಡಿಗೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭೇಟಿ | Wayanad Landslide
BREAKING: ಕ್ರೌಡ್ ಸ್ಟ್ರೈಕ್ ನಂತ್ರ ‘ಮೈಕ್ರೋಸಾಫ್ಟ್ 365’ ಸೇವೆ ಸ್ಥಗಿತ: ಬಳಕೆದಾರರು ಪರದಾಟ | Microsoft 365