Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕೇಳಿಸದ ಕಿವಿಗೆ ‘ಟೀಮ್ ಈಶ್ವರ್ ಮಲ್ಪೆ’ ಆಸರೆ: ಮೇ.12ರಂದು ಸಾಗರದಲ್ಲಿ ಉಚಿತ ಶ್ರವಣ ತಪಾಸಣಾ ಶಿಬಿರ!

29/04/2026 9:47 PM

BREAKING: ಬೆಂಗಳೂರಲ್ಲಿ ರಣ ಮಳೆಗೆ ಮತ್ತೊಂದು ಬಲಿ: ಕರೆಂಟ್ ಶಾಕ್ ಹೊಡೆದು ವಿದ್ಯಾರ್ಥಿ ಸಾವು

29/04/2026 9:23 PM

‘ದಿಗ್ಬಂಧನ ವಿಸ್ತರಣೆಗೂ ಮುನ್ನ ಒಪ್ಪಂದಕ್ಕೆ ಸಹಿ ಹಾಕಿ’: ಇರಾನ್‌ಗೆ ಡೊನಾಲ್ಡ್ ಟ್ರಂಪ್ ಖಡಕ್ ಎಚ್ಚರಿಕೆ!

29/04/2026 9:08 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬಜೆಟ್ ನಲ್ಲಿ ಘೋಷಣೆಯಾಗದ ಅನಿವಾಸಿ ಸಚಿವಾಲಯ, ನಮಗೆ ನಿರಾಶೆಯಾಗಿದೆ: ಖ್ಯಾತ ಅನಿವಾಸಿ ಉದ್ಯಮಿ ಡಾ.ರೊನಾಲ್ಡ್ ಕೊಲಾಸೊ
KARNATAKA

ಬಜೆಟ್ ನಲ್ಲಿ ಘೋಷಣೆಯಾಗದ ಅನಿವಾಸಿ ಸಚಿವಾಲಯ, ನಮಗೆ ನಿರಾಶೆಯಾಗಿದೆ: ಖ್ಯಾತ ಅನಿವಾಸಿ ಉದ್ಯಮಿ ಡಾ.ರೊನಾಲ್ಡ್ ಕೊಲಾಸೊ

By kannadanewsnow0906/03/2026 10:01 PM

ದುಬೈ: ಶುಕ್ರವಾರ ಮಂಡನೆಯಾಗಿರುವ ಕರ್ನಾಟಕ ಬಜೆಟ್-2026ರಲ್ಲಿ ಅನಿವಾಸಿ ಕನ್ನಡಿಗರ ಬಹುಕಾಲದ ಅತ್ಯಂತ ಪ್ರಮುಖ ಬೇಡಿಕೆಯಾಗಿರುವ ‘ಪ್ರತ್ಯೇಕ ಸಚಿವಾಲಯ’ ಘೋಷಣೆಯಾಗದಿರುವುದು ಅತೀವ ನಿರಾಸೆಯನ್ನುಂಟು ಮಾಡಿದೆ ಎಂದು ಖ್ಯಾತ ಅನಿವಾಸಿ ಉದ್ಯಮಿ ಡಾ.ರೋನಾಲ್ಡ್ ಕೊಲಾಸೊ ಬೇಸರ ವ್ಯಕ್ತಪಡಿಸಿದ್ದಾರೆ.

ಡಿಸೆಂಬರ್ 11ರಂದು ಬೆಳಗಾವಿ ಅಧಿವೇಶನದ ವೇಳೆ ಡಾ.ರೋನಾಲ್ಡ್ ಕೊಲಾಸೊ ನೇತೃತ್ವದಲ್ಲಿ ಸಿಎಂ-ಡಿಸಿಎಂ‌-ಗೃಹಸಚಿವರು, ಇತರ ಸಚಿವರು ಹಾಗೂ ವಿಪಕ್ಷ ನಾಯಕರನ್ನು ಭೇಟಿಯಾದ ಸುಮಾರು ಮೂವತ್ತಕ್ಕೂ ಹೆಚ್ಚು ದೇಶಗಳ 45 ಮಂದಿ ಕನ್ನಡಿಗ ಪ್ರತಿನಿಧಿಗಳ NRI ನಿಯೋಗವು ‘ಪ್ರತ್ಯೇಕ ಸಚಿವಾಲಯ’ಕ್ಕಾಗಿ ಬೇಡಿಕೆಯ ಮನವಿ ಸಲ್ಲಿಸಿತ್ತು. ಈ ವೇಳೆ ಖುದ್ದು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗು ಇತರ ಸಚಿವರು ‘ಪ್ರತ್ಯೇಕ ಸಚಿವಾಲಯ’ವನ್ನು ಶೀಘ್ರವೇ ಮಾಡುವ ಭರವಸೆ ನೀಡಿದ್ದರು. ಹಾಗಾಗಿ ಅನಿವಾಸಿ ಕನ್ನಡಿಗರ ಈ ಬಹುಕಾಲದ ಬೇಡಿಕೆ ಕೊನೆಗೂ ಈಡೇರುವ ನಿರೀಕ್ಷೆ ಇತ್ತು .ಆದರೆ ಈ ಬಾರಿಯ ಕರ್ನಾಟಕ ಬಜೆಟ್-2026ನಲ್ಲಿ ಯಾವುದೇ ರೀತಿಯ ಘೋಷಣೆ ಆಗಲಿ, ಉಲ್ಲೇಖವಾಗಲಿ ಮಾಡದಿರುವುದಕ್ಕೆ ಡಾ.ರೋನಾಲ್ಡ್ ಕೊಲಾಸೊ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ‘ವಾರ್ತಾ ಭಾರತಿ’ಯೊಂದಿಗೆ ಮಾತನಾಡಿರುವ ಅವರು, ಈ ಬಾರಿಯ ಬಜೆಟ್ ನಲ್ಲಿ ‘ಪ್ರತ್ಯೇಕ ಸಚಿವಾಲಯ’ದ ಘೋಷಣೆಯಾಗಲಿದೆ ಎಂದು ಬಹುದೊಡ್ಡ ನಿರೀಕ್ಷೆಯನ್ನು ಇಟ್ಟುಕೊಂಡಿದ್ದೆವು. ಆದರೆ ಕರ್ನಾಟಕ ಕಾಂಗ್ರೆಸ್ ಸರಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅನಿವಾಸಿ ಕನ್ನಡಿಗರ ಆಸೆ, ನಿರೀಕ್ಷೆಗೆ ತಣ್ಣೀರೆರೆಚಿದ್ದಾರೆ ಎಂದು ಖೇದ ವ್ಯಕ್ತಪಡಿಸಿದ್ದಾರೆ.

ಡಿಸೆಂಬರ್ 11ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಹಾಗೂ ಇತರ ಸಚಿವರನ್ನು ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ಭೇಟಿ ಮಾಡಿ, ಪ್ರತ್ಯೇಕ ಸಚಿವಾಲಯ ಇಲ್ಲದಿರುವುದರಿಂದ ಅನಿವಾಸಿ ಕನ್ನಡಿಗರಿಗೆ ಆಗುತ್ತಿರುವ ಹಲವು ಸಮಸ್ಯೆ ಹಾಗು ಪ್ರತ್ಯೇಕ ಸಚಿವಾಲಯ-ಇಲಾಖೆಯ ಅನಿವಾರ್ಯತೆಯನ್ನು ಮನದಟ್ಟುಮಾಡುವ ಮೂಲಕ ಮನವಿ ಸಲ್ಲಿಸಿದ್ದೇವು. ಈ ವೇಳೆ ಆದಷ್ಟು ಬೇಗ ಪ್ರತ್ಯೇಕ ಸಚಿವಾಲಯ ಸ್ಥಾಪಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಮ್ಮ ನಿಯೋಗಕ್ಕೆ ಭರವಸೆ ನೀಡಿದ್ದರು. ಈ ಬಾರಿಯ ಬಜೆಟ್ ನಲ್ಲಿ ಘೋಷಣೆ ಆಗುವುದು ಖಂಡಿತ ಎಂದು ಕೊಂಡಿದ್ದ ನಮಗೆ ಸರಕಾರ ನಿರಾಸಯನ್ನುಂಟು ಮಾಡಿದೆ ಎಂದು ಡಾ.ಕೊಲಾಸೊ ಹೇಳಿದ್ದಾರೆ.

ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಅನಿವಾಸಿ ಕನ್ನಡಿಗರಿಗಾಗಿ ನೀಡಿರುವ ಇನ್ನೊಂದು ಗ್ಯಾರಂಟಿಯಾದ ಅನಿವಾಸಿ ಕನ್ನಡಿಗರು ಕರ್ನಾಟಕದಲ್ಲಿ ಉದ್ಯಮ ನಡೆಸಲು ಉತ್ತೇಜನ ನೀಡುವ ಉದ್ದೇಶದಿಂದ 1 ಸಾವಿರ ಕೋಟಿ ರೂ. ಆವರ್ತನ ನಿಧಿ ಸ್ಥಾಪಿಸುವುದಾಗಿಯೂ ಭರವಸೆ ನೀಡಿದ್ದರು. ಅದರ ಬಗ್ಗೆಯೂ ಈ ಬಜೆಟ್ ನಲ್ಲಿ ಯಾವುದೇ ಪ್ರಸ್ತಾಪವಿಲ್ಲ. ನಮಗೆ ಮುಖ್ಯಮಂತ್ರಿ ನೀಡಿರುವ ಭರವಸೆಯು ಭರವಸೆಯಾಗಿಯೇ ಉಳಿದಿದೆ ಎಂದು ಡಾ.ಕೊಲಾಸೊ ಹೇಳಿದ್ದಾರೆ.

ಅನಿವಾಸಿ ಕನ್ನಡಿಗರ ಪ್ರಮುಖ ಹಾಗು ಬಹುಮುಖ್ಯ ಬೇಡಿಕೆಯಾಗಿರುವ ‘ಪ್ರತ್ಯೇಕ ಸಚಿವಾಲಯ’ವನ್ನು ಮಾರ್ಚ್ ಅಂತ್ಯದೊಳಗೆ 100% ಸ್ಥಾಪಿಸುವುದಾಗಿ ನಮ್ಮ ನಿಯೋಗಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಭರವಸೆ ನೀಡಿದ್ದರು. ಜೊತೆಗೆ ಸ್ಪೀಕರ್ ಯು.ಟಿ.ಖಾದರ್, ಸಭಾಪತಿ ಬಸವರಾಜ್ ಹೊರಟ್ಟಿ ಅವರಿಗೂ ಮನವಿ ಪತ್ರ ನೀಡಿ, ಅನಿವಾಸಿ ಕನ್ನಡಿಗರ ಆಶೋತ್ತರಗಳಿಗೆ ಸ್ಪಂದಿಸುವಂತೆ ಮನವಿ ಮಾಡಿದ್ದೆವು.
ನಾವು ಈ ಬಾರಿಯ ಬಜೆಟ್ ನಲ್ಲಿ ‘ಪ್ರತ್ಯೇಕ ಸಚಿವಾಲಯ’ ಸ್ಥಾಪನೆ ಕುರಿತು ಘೋಷಣೆ ಆಗುತ್ತೆ ಎಂದೇ ನಂಬಿದ್ದೆವು. ನಾವಿಟ್ಟ ನಂಬಿಕೆ, ನಮಗೆ ಕೊಟ್ಟ ಭರವಸೆ ಎಲ್ಲವೂ ಹುಸಿಯಾಗಿದೆ ಎಂದು ಡಾ.ರೋನಾಲ್ಡ್ ಕೊಲಾಸೊ ನೋವನ್ನು ತೋಡಿಕೊಂಡಿದ್ದಾರೆ.

ನಮ್ಮ ನೆರೆಯ ರಾಜ್ಯ ಕೇರಳದಲ್ಲಿ ಅಲ್ಲಿನ ಸರಕಾರ ‘ಪ್ರತ್ಯೇಕ ಸಚಿವಾಲಯ’ ಸ್ಥಾಪಿಸಿದೆ. ಇದರಿಂದ ಅಲ್ಲಿನ ಅನಿವಾಸಿಗಳಿಗೆ ಎಲ್ಲ ರೀತಿಯ ಸಹಾಯ, ಸಹಕಾರ ಸಿಗುತ್ತಿದೆ. ಜೊತೆಗೆ ಅಲ್ಲಿನ ಸರಕಾರಕ್ಕೂ ಹಲವು ರೀತಿಯ ಪ್ರಯೋಜನ, ಲಾಭ ಅನಿವಾಸಿಗಳಿಂದ ಸಿಗುತ್ತಿದೆ.

‘ಪ್ರತ್ಯೇಕ ಸಚಿವಾಲಯ’ ಸ್ಥಾಪನೆಯಿಂದ ಕೇವಲ ಅನಿವಾಸಿ ಕನ್ನಡಿಗರಿಗೆ ಮಾತ್ರ ಪ್ರಯೋಜನ, ಲಾಭ ಸಿಗುವುದಲ್ಲ. ಬದಲಾಗಿ ಕರ್ನಾಟಕ ರಾಜ್ಯಕ್ಕೂ ಇದರಿಂದ ಬಹಳಷ್ಟು ಲಾಭ ಸಿಗಲಿದೆ, ಜೊತೆಗೆ ರಾಜ್ಯದ ಆರ್ಥಿಕತೆಯು ಬೆಳೆಯಲಿದೆ. ಈ ಕುರಿತು ನಮ್ಮ ನಿಯೋಗ ಸಿಎಂ ಸಿದ್ದರಾಮಯ್ಯ ಅವರಿಗೆ ಸೂಕ್ತ ಮಾಹಿತಿ, ಅಂಕಿ ಅಂಶಗಳ ಮೂಲಕ ಮನವರಿಕೆ ಮಾಡಿಕೊಟ್ಟಿತ್ತು.

ಆವರ್ತನ ನಿಧಿ, ‘ಪ್ರತ್ಯೇಕ ಸಚಿವಾಲಯ’ ಸ್ಥಾಪನೆಯಿಂದ ಕೈಗಾರಿಕೆ ಮತ್ತು ಸೇವಾ ವಲಯಗಳಲ್ಲಿ ಅನಿವಾಸಿ ಕನ್ನಡಿಗರ ಹೂಡಿಕೆ ಹೆಚ್ಚಲು, ನವೋದ್ಯಮಗಳಿಗೆ ಅಗತ್ಯವಾದ ಬಲ ಸಿಗಲು ಮತ್ತು ರಾಜ್ಯದಲ್ಲಿ ಉದ್ಯೋಗಾವಕಾಶ ವಿಸ್ತರಣೆಗಾಗಲು ನೆರವಾಗಲಿದೆ. ಜೊತೆಗೆ ವಿದೇಶದಿಂದ ವೃತ್ತಿಪರರು ರಾಜ್ಯಕ್ಕೆ ಮರಳಲು ಬೇಕಾದ ಆರ್ಥಿಕ ಮತ್ತು ಆಡಳಿತಾತ್ಮಕ ಭರವಸೆ ಒದಗಿಸಲಿದೆ ಎಂಬುದನ್ನು ನಾವು ನೀಡಿರುವ ಮನವಿಯಲ್ಲಿ ಉಲ್ಲೇಖಿಸಲಾಗಿತ್ತು.

NRK ಸಮುದಾಯ ಮಾಡುವ ಹಣ ರವಾನೆ, ಜ್ಞಾನ–ಕೌಶಲ್ಯ, ಜಾಗತಿಕ ಸಂಪರ್ಕ ಜಾಲ ಮತ್ತು ಸಾಮಾಜಿಕ ಸೇವಾ ಚಟುವಟಿಕೆಗಳು ರಾಜ್ಯದ ಆರ್ಥಿಕ–ಸಾಮಾಜಿಕ ಬೆಳವಣಿಗೆಗೆ ನಿರಂತರ ಬಲ ನೀಡುತ್ತಿವೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿತ್ತು. ಈ ಹಿನ್ನೆಲೆಯಲ್ಲಿ, ಅನಿವಾಸಿ ಕನ್ನಡಿಗರ ದೀರ್ಘಕಾಲದ ಬೇಡಿಕೆಗಳಿಗೆ ಸರ್ಕಾರ ತ್ವರಿತ ಮತ್ತು ಸ್ಪಷ್ಟ ಕ್ರಮ ಕೈಗೊಳ್ಳಬೇಕೆಂದು ನಮ್ಮ ನಿಯೋಗ ರಾಜ್ಯ ಸರಕಾರವನ್ನು ಒತ್ತಾಯಿಸಿತ್ತು. ಆದರೆ ನಮ್ಮ ಬೇಡಿಕೆ, ಕೊಟ್ಟ ಸಲಹೆ, ಸೂಚನೆಗಳಿಗೆ ಯಾವುದೇ ರೀತಿಯಲ್ಲಿಯೂ ರಾಜ್ಯ ಸರಕಾರ ಸ್ಪಂದಿಸದಿರುವುದು ನಮಗೆ ಬೇಸರ ತಂದಿದೆ ಎಂದು ಡಾ. ಕೊಲಾಸೊ ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಇನ್ನಾದರೂ ‘ಪ್ರತ್ಯೇಕ ಸಚಿವಾಲಯ’ವನ್ನು ಘೋಷಣೆ ಮಾಡುವ ಮೂಲಕ ಅನಿವಾಸಿ ಕನ್ನಡಿಗರ ಬಹುಮುಖ್ಯ ಬೇಡಿಕೆಯನ್ನು ಈಡೇರಿಸಬೇಕು ಎಂದು ಡಾ.ರೋನಾಲ್ಡ್ ಕೊಲಾಸೊ ಒತ್ತಾಯಿಸಿದ್ದಾರೆ.

ನಮಗೆ ತೀವ್ರ ನಿರಾಶೆಯಾಗಿದೆ : ಝಕರಿಯ ಜೋಕಟ್ಟೆ

ನಾವು ಡಾ.ರೋನಾಲ್ಡ್ ಕೊಲಾಸೊ ಅವರ ನೇತೃತ್ವದಲ್ಲಿ 30 ದೇಶಗಳ ಪ್ರತಿನಿಧಿಗಳು ಸರಕಾರದ ಬಳಿ ಹೋಗಿ ಅನಿವಾಸಿ ಸಚಿವಾಲಯ ಪ್ರಾರಂಭಿಸಲು ಆಗ್ರಹಿಸಿದ್ದೆವು. ಸರಕಾರ ನಮ್ಮ ಮನವಿಗೆ ಧನಾತ್ಮಕವಾಗಿ ಪ್ರತಿಕ್ರಿಯಿಸಿ ಖಂಡಿತ ಪ್ರತ್ಯೇಕ ಸಚಿವಾಲಯ ಮಾಡುತ್ತೇವೆ ಎಂದು ಭರವಸೆ ನೀಡಿತ್ತು ಆದರೆ ನಮ್ಮ ಬೇಡಿಕೆಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿರುವುದು ಖೇದಕರ. ಇದು ಇಡೀ ಅನಿವಾಸಿ ಕನ್ನಡಿಗ ಸಮುದಾಯಕ್ಕೆ ತೀವ್ರ ನೋವುಂಟು ಮಾಡಿದೆ ಎಂದು ಸೌದಿ ಅರೇಬಿಯಾದ ಖ್ಯಾತ ಅನಿವಾಸಿ ಕನ್ನಡಿಗ ಉದ್ಯಮಿ ರಾಜ್ಯೋತ್ಸವ ಪುರಸ್ಕೃತ ಝಕರಿಯ ಜೋಕಟ್ಟೆ ಹೇಳಿದ್ದಾರೆ.

Share. Facebook Twitter LinkedIn WhatsApp Email

Related Posts

ಕೇಳಿಸದ ಕಿವಿಗೆ ‘ಟೀಮ್ ಈಶ್ವರ್ ಮಲ್ಪೆ’ ಆಸರೆ: ಮೇ.12ರಂದು ಸಾಗರದಲ್ಲಿ ಉಚಿತ ಶ್ರವಣ ತಪಾಸಣಾ ಶಿಬಿರ!

29/04/2026 9:47 PM2 Mins Read

BREAKING: ಬೆಂಗಳೂರಲ್ಲಿ ರಣ ಮಳೆಗೆ ಮತ್ತೊಂದು ಬಲಿ: ಕರೆಂಟ್ ಶಾಕ್ ಹೊಡೆದು ವಿದ್ಯಾರ್ಥಿ ಸಾವು

29/04/2026 9:23 PM1 Min Read

30 ಕೋಟಿ ವೆಚ್ಚದಲ್ಲಿ ಮದ್ದೂರು ಸಾರ್ವಜನಿಕ ಆಸ್ಪತ್ರೆಗೆ ಹೈಟೆಕ್ ಸ್ಪರ್ಶ: ಮದ್ದೂರು ಶಾಸಕ ಕೆ.ಎಂ.ಉದಯ್

29/04/2026 9:07 PM1 Min Read
Recent News

ಕೇಳಿಸದ ಕಿವಿಗೆ ‘ಟೀಮ್ ಈಶ್ವರ್ ಮಲ್ಪೆ’ ಆಸರೆ: ಮೇ.12ರಂದು ಸಾಗರದಲ್ಲಿ ಉಚಿತ ಶ್ರವಣ ತಪಾಸಣಾ ಶಿಬಿರ!

29/04/2026 9:47 PM

BREAKING: ಬೆಂಗಳೂರಲ್ಲಿ ರಣ ಮಳೆಗೆ ಮತ್ತೊಂದು ಬಲಿ: ಕರೆಂಟ್ ಶಾಕ್ ಹೊಡೆದು ವಿದ್ಯಾರ್ಥಿ ಸಾವು

29/04/2026 9:23 PM

‘ದಿಗ್ಬಂಧನ ವಿಸ್ತರಣೆಗೂ ಮುನ್ನ ಒಪ್ಪಂದಕ್ಕೆ ಸಹಿ ಹಾಕಿ’: ಇರಾನ್‌ಗೆ ಡೊನಾಲ್ಡ್ ಟ್ರಂಪ್ ಖಡಕ್ ಎಚ್ಚರಿಕೆ!

29/04/2026 9:08 PM

30 ಕೋಟಿ ವೆಚ್ಚದಲ್ಲಿ ಮದ್ದೂರು ಸಾರ್ವಜನಿಕ ಆಸ್ಪತ್ರೆಗೆ ಹೈಟೆಕ್ ಸ್ಪರ್ಶ: ಮದ್ದೂರು ಶಾಸಕ ಕೆ.ಎಂ.ಉದಯ್

29/04/2026 9:07 PM
State News
KARNATAKA

ಕೇಳಿಸದ ಕಿವಿಗೆ ‘ಟೀಮ್ ಈಶ್ವರ್ ಮಲ್ಪೆ’ ಆಸರೆ: ಮೇ.12ರಂದು ಸಾಗರದಲ್ಲಿ ಉಚಿತ ಶ್ರವಣ ತಪಾಸಣಾ ಶಿಬಿರ!

By kannadanewsnow0929/04/2026 9:47 PM KARNATAKA 2 Mins Read

ಶಿವಮೊಗ್ಗ: ಇಂದಿನ ಒತ್ತಡದ ಜೀವನಶೈಲಿ ಹಾಗೂ ವಯೋಸಹಜ ಕಾರಣಗಳಿಂದ ಅನೇಕರು ಶ್ರವಣ ದೋಷಕ್ಕೆ (ಕೇಳಿಸಿಕೊಳ್ಳುವ ಸಮಸ್ಯೆ) ಒಳಗಾಗುತ್ತಿದ್ದಾರೆ. ಇಂತಹವರಿಗೆ ನೆರವಾಗುವ…

BREAKING: ಬೆಂಗಳೂರಲ್ಲಿ ರಣ ಮಳೆಗೆ ಮತ್ತೊಂದು ಬಲಿ: ಕರೆಂಟ್ ಶಾಕ್ ಹೊಡೆದು ವಿದ್ಯಾರ್ಥಿ ಸಾವು

29/04/2026 9:23 PM

30 ಕೋಟಿ ವೆಚ್ಚದಲ್ಲಿ ಮದ್ದೂರು ಸಾರ್ವಜನಿಕ ಆಸ್ಪತ್ರೆಗೆ ಹೈಟೆಕ್ ಸ್ಪರ್ಶ: ಮದ್ದೂರು ಶಾಸಕ ಕೆ.ಎಂ.ಉದಯ್

29/04/2026 9:07 PM

ಬೆಂಗಳೂರಲ್ಲಿ ವರುಣನ ಆರ್ಭಟಕ್ಕೆ ಕಾಂಪೌಂಡ್ ಕುಸಿದು 7 ಮಂದಿ ಬಲಿ; ಮೃತರ ಕುಟುಂಬಕ್ಕೆ ತಲಾ ₹5 ಲಕ್ಷ ಪರಿಹಾರ ಘೋಷಣೆ

29/04/2026 8:59 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.