Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇರಾನ್ ಜೊತೆ ಮಾತುಕತೆಗೆ ಅಮೆರಿಕ ಸಿದ್ಧ; ಒಪ್ಪಂದಕ್ಕೆ ಬರದಿದ್ದರೆ ಸೇನಾ ಕಾರ್ಯಾಚರಣೆಯ ಎಚ್ಚರಿಕೆ ನೀಡಿದ ಟ್ರಂಪ್

21/04/2026 9:58 PM

BREAKING: ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣ: ಅರಾಫತ್‌ಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್

21/04/2026 9:48 PM

ಮೆಕ್ಸಿಕೋದ ಪ್ರಸಿದ್ಧ ಪಿರಮಿಡ್ ಮೇಲೆ ನಿಂತು ಪ್ರವಾಸಿಗರ ಮೇಲೆ ಗುಂಡಿನ ದಾಳಿ; ಕೆನಡಾ ಪ್ರಜೆ ಸಾವು, 13 ಜನರಿಗೆ ಗಾಯ

21/04/2026 9:29 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಾವು ಮತಕಳ್ಳತನದ ವಿರುದ್ಧ ಹೋರಾಟ: DKS
KARNATAKA

ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಾವು ಮತಕಳ್ಳತನದ ವಿರುದ್ಧ ಹೋರಾಟ: DKS

By kannadanewsnow0914/12/2025 3:08 PM

ನವದೆಹಲಿ : “ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಾವು ಮತಕಳ್ಳತನದ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಇದರಲ್ಲಿ ಯಾವುದೇ ರಾಜಕೀಯ ಉದ್ದೇಶವಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ದೆಹಲಿಯ ಕರ್ನಾಟಕ ಭವನದಲ್ಲಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಭಾನುವಾರ ಪ್ರತಿಕ್ರಿಯೆ ನೀಡಿದರು.

ವೋಟ್ ಚೋರಿ ಪ್ರತಿಭಟನೆ ಬಗ್ಗೆ ಕೇಳಿದಾಗ, “ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರ ನಾಯಕತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಾವು ಮತಕಳ್ಳತನ ವಿರುದ್ಧದ ಹೋರಾಟ ಆರಂಭಿಸಿದ್ದೆವು. ಈಗ ರಾಮಲೀಲಾ ಮೈದಾನದಲ್ಲಿ ಪ್ರತಿಭಟನೆ ಮಾಡುತ್ತಿದ್ದೇವೆ. ಈ ದೇಶದಲ್ಲಿ ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಸಬೇಕು ಎಂಬ ಸಂದೇಶ ನೀಡಲಾಗುತ್ತಿದೆ. ದೇಶದ ಚುನಾವಣೆಗಳು ಈಗ ನ್ಯಾಯಸಮ್ಮತವಾಗಿಲ್ಲ. ಮತಕಳ್ಳತನ ಮಾಡಲಾಗುತ್ತಿದೆ. ಇದಕ್ಕೆ ಸಾವಿರಾರು ಉದಾಹರಣೆಗಳಿವೆ. ರಾಹುಲ್ ಗಾಂಧಿ ಅವರು ಈ ವಿಚಾರವಾಗಿ ಸಂಸತ್ತಿನಲ್ಲಿ ಧ್ವನಿ ಎತ್ತಿದ್ದಾರೆ. ಇನ್ನು ಹಲವು ಬಾರಿ ಮಾಧ್ಯಮಗೋಷ್ಠಿ ಮೂಲಕ ದಾಖಲೆಗಳನ್ನು ಬಹಿರಂಗಗೊಳಿಸಿದ್ದಾರೆ. ಇಷ್ಟಾದರೂ ಚುನಾವಣಾ ಆಯೋಗದಿಂದ ಸರಿಯಾದ ಉತ್ತರ ಸಿಗುತ್ತಿಲ್ಲ. ಹೀಗಾಗಿ ಸಾಂವಿಧಾನಿಕ ಸಂಸ್ಥೆಗಳ ದುರ್ಬಳಕೆ ಬಗ್ಗೆ ಜನರಿಗೆ ಅರಿವು ಮೂಡಿಸಲು ನಾವು ಬೀದಿಗಿಳಿದು ಹೋರಾಟ ಮಾಡುತ್ತಿದ್ದೇವೆ” ಎಂದು ತಿಳಿಸಿದರು.

ರಾಜ್ಯದ ಸುಮಾರು 4 ಸಾವಿರ ಕಾರ್ಯಕರ್ತರು ಭಾಗಿ

“ದೆಹಲಿಯ ಪ್ರತಿಭಟನೆಗೆ ರಾಜ್ಯದಿಂದ ಆಗಮಿಸುವ 1500 ಕಾರ್ಯಕರ್ತರಿಗೆ ನಾವು ವಾಸ್ತವ್ಯದ ವ್ಯವಸ್ಥೆ ಕಲ್ಪಿಸಿದ್ದೇವೆ. ಸುಮಾರು 2 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಹಾಗೂ ನಾಯಕರು ತಮ್ಮ ವ್ಯವಸ್ಥೆ ತಾವೇ ಮಾಡಿಕೊಂಡಿದ್ದಾರೆ. ಕೆಲವರು ವಿಮಾನ, ಮತ್ತೆ ಕೆಲವರು ರೈಲಲ್ಲಿ ಆಗಮಿಸಿದ್ದಾರೆ. ಸುಮಾರು 3500 ರಿಂದ 4000 ಜನ ಪ್ರತಿಭಟನೆಗೆ ಬಂದಿದ್ದಾರೆ. ಮತಕಳ್ಳತನ ವಿರುದ್ಧ ರಾಜ್ಯದಲ್ಲಿ ನಡೆದ ಸಹಿಸಂಗ್ರಹ ಅಭಿಯಾನದಲ್ಲಿ 1.42 ಕೋಟಿ ಸಹಿ ಸಂಗ್ರಹ ಮಾಡಲಾಗಿದೆ. ಇಲ್ಲಿ ಸೇರಿರುವ ನಾಯಕರು, ಕಾರ್ಯಕರ್ತರೇ ಈ ಹೋರಾಟದ ಉತ್ಸಾಹಕ್ಕೆ ಸಾಕ್ಷಿ. ಇಲ್ಲಿರುವ ಪ್ರತಿಯೊಬ್ಬರೂ ದೇಶ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಉಳಿಸಿಕೊಳ್ಳಬೇಕು, ಮತದಾನದ ಹಕ್ಕು ಕಾಪಾಡಬೇಕು ಎಂದು ಬಂದಿದ್ದಾರೆ” ಎಂದು ತಿಳಿಸಿದರು.

“ದೆಹಲಿಗೆ ಬರುವ ವಾಹನಗಳನ್ನು ಬಿಜೆಪಿ ಸರ್ಕಾರ ತಡೆ ಹಿಡಿದಿದೆಯಂತೆ. ವಾಹನ ದೆಹಲಿಯೊಳಗೆ ಪ್ರವೇಶ ಮಾಡಲು ಅವಕಾಶ ನೀಡುತ್ತಿಲ್ಲ. ಯಾಕೆ ಈ ರೀತಿ ಮಾಡುತ್ತಿದ್ದಾರೆ ತಿಳಿಯುತ್ತಿಲ್ಲ. ಕೇಂದ್ರ ಸರ್ಕಾರ ಈ ವಿಚಾರದಲ್ಲಿ ಯಾಕೆ ಗಾಬರಿಯಾಗುತ್ತಿದೆ ಗೊತ್ತಿಲ್ಲ. ನಮ್ಮ ಧ್ವನಿಯನ್ನು ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ” ಎಂದು ಸ್ಪಷ್ಟಪಡಿಸಿದರು.

ಕಾಂಗ್ರೆಸ್ ಕಚೇರಿಗೆ ಭೇಟಿ ನೀಡುವ ಬಗ್ಗೆ ಕೇಳಿದಾಗ, “ಕಾಂಗ್ರೆಸ್ ಕಚೇರಿಗೆ ಬರುವಂತೆ ನಮಗೆ ಆಹ್ವಾನ ನೀಡಿದ್ದಾರೆ. ಸಂಚಾರ ದಟ್ಟಣೆ ಹಿನ್ನೆಲೆಯಲ್ಲಿ ಅಲ್ಲಿಂದ ನಾವು ಬಸ್ ಮೂಲಕ ರಾಮಲೀಲಾ ಮೈದಾನಕ್ಕೆ ತೆರಳುತ್ತೇವೆ. ಈ ಪ್ರತಿಭಟನೆಗಾಗಿ ನಾವು ನಮ್ಮ ಕಾರ್ಯಕರ್ತರಿಗೆ ವಿಶೇಷವಾಗಿ ಚಳಿ ವಾತಾವರಣಕ್ಕೆ ಅನುಕೂಲವಾಗುವಂತೆ ಟೀ ಶರ್ಟ್ ಮಾಡಿಸಲಾಗಿದೆ” ಎಂದು ತಿಳಿಸಿದರು.

ಸೋಲು, ಗೆಲುವಿಗೆ ಕಾಂಗ್ರೆಸಿಗರು ಯೋಚಿಸುವುದಿಲ್ಲ:

ಸೋಲಿನ ಹತಾಶೆಯಿಂದ ಕಾಂಗ್ರೆಸ್ ಈ ರೀತಿ ಸಮಾವೇಶ ಮಾಡುತ್ತಿದೆ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಅವರು ತಮ್ಮ ಖುಷಿಗೆ ಏನು ಬೇಕಾದರೂ ಮಾತನಾಡುತ್ತಾರೆ. ನಾವು ಕಾಂಗ್ರೆಸಿಗರು ಸೋಲು, ಗೆಲುವಿನ ಬಗ್ಗೆ ಯೋಚನೆ ಮಾಡುವುದಿಲ್ಲ. ಈ ದೇಶಕ್ಕೆ ಸ್ವಾತಂತ್ರ್ಯ ಹಾಗೂ ಸಂವಿಧಾನ ತಂದು ಕೊಟ್ಟಾಗ ನಮ್ಮ ಹಿರಿಯರು ಸಾಕಷ್ಟು ಪ್ರಾಣತ್ಯಾಗ ಮಾಡಿದ್ದಾರೆ. ಈ ದೇಶದ ಆರ್ಥಿಕ ತಜ್ಞನಿಗೆ ಸೋನಿಯಾ ಗಾಂಧಿ ಅವರು ಅಧಿಕಾರ ತ್ಯಾಗ ಮಾಡಿದರು. ಇಂದಿರಾ ಗಾಂಧಿ ಹಾಗೂ ರಾಜೀವ್ ಗಾಂಧಿ ಅವರು ದೇಶಕ್ಕಾಗಿ ಪ್ರಾಣವನ್ನೇ ಅರ್ಪಿಸಿದರು. ಜವಾಹರ್ ಲಾಲ್ ನೆಹರೂ, ಗಾಂಧಿಜಿ ಸೇರಿದಂತೆ ಅನೇಕ ಮಹನೀಯರು ಜೈಲುವಾಸ ಅನುಭವಿಸಿದರು. ನೂರು ವರ್ಷಗಳ ಹಿಂದೆ ಮಹಾತ್ಮಾ ಗಾಂಧಿ ಅವರು ದೇಶದ ಸ್ವಾತಂತ್ರ್ಯ ಹೋರಾಟದ ನಾಯಕತ್ವ ವಹಿಸಿದರು. ಇಂದು ಪಕ್ಷ ಕಷ್ಟಕಾಲದಲ್ಲಿರುವಾಗ ಮಲ್ಲಿಕಾರ್ಜುನ ಖರ್ಗೆ ಅವರು ಪಕ್ಷದ ಅಧ್ಯಕ್ಷರಾಗಿದ್ದಾರೆ” ಎಂದು ತಿಳಿಸಿದರು.

ನಿಮ್ಮ ದರ್ಪ, ದುರಂಹಕಾರಕ್ಕೆ ಮತಹಾಕುವ ಜನರೇ ಬುದ್ಧಿ ಕಲಿಸುತ್ತಾರೆ: ಧಮ್ಕಿ ಡಿಕೆಶಿ ಎಂದ ಜೆಡಿಎಸ್

‘ಡಿಜಿಟಲ್ ಅರೆಸ್ಟ್’ ವಂಚನೆ: 1 ಕೋಟಿ ರೂ. ಕಳೆದುಕೊಂಡ 82 ವರ್ಷದ ವ್ಯಕ್ತಿ | Digital arrest scam

Share. Facebook Twitter LinkedIn WhatsApp Email

Related Posts

BREAKING: ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣ: ಅರಾಫತ್‌ಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್

21/04/2026 9:48 PM1 Min Read

ಬೆಳಗಾವಿಯಲ್ಲಿ 100 ಕೋಟಿ ವೆಚ್ಚದಲ್ಲಿ ತಿರುಪತಿ ವೆಂಕಟೇಶ್ವರ ದೇವಸ್ಥಾನ ನಿರ್ಮಾಣ: ಟಿಟಿಡಿ ಸದಸ್ಯ ನರೇಶ್ ಕುಮಾರ್

21/04/2026 8:45 PM2 Mins Read

ಸಾಗರದ ಶ್ರೀ ಶೃಂಗೇರಿ ಶಂಕರ ಮಠದಲ್ಲಿ ಅದ್ಧೂರಿ ಶಂಕರ ಜಯಂತಿ ಆಚರಣೆ

21/04/2026 8:13 PM2 Mins Read
Recent News

ಇರಾನ್ ಜೊತೆ ಮಾತುಕತೆಗೆ ಅಮೆರಿಕ ಸಿದ್ಧ; ಒಪ್ಪಂದಕ್ಕೆ ಬರದಿದ್ದರೆ ಸೇನಾ ಕಾರ್ಯಾಚರಣೆಯ ಎಚ್ಚರಿಕೆ ನೀಡಿದ ಟ್ರಂಪ್

21/04/2026 9:58 PM

BREAKING: ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣ: ಅರಾಫತ್‌ಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್

21/04/2026 9:48 PM

ಮೆಕ್ಸಿಕೋದ ಪ್ರಸಿದ್ಧ ಪಿರಮಿಡ್ ಮೇಲೆ ನಿಂತು ಪ್ರವಾಸಿಗರ ಮೇಲೆ ಗುಂಡಿನ ದಾಳಿ; ಕೆನಡಾ ಪ್ರಜೆ ಸಾವು, 13 ಜನರಿಗೆ ಗಾಯ

21/04/2026 9:29 PM

​ಇರಾನ್-ಅಮೆರಿಕ ಶಾಂತಿ ಮಾತುಕತೆ: ನಾಳೆ ಇಸ್ಲಾಮಾಬಾದ್‌ನಲ್ಲಿ ಎರಡನೇ ಸುತ್ತಿನ ಚರ್ಚೆ; ಅಮೆರಿಕ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ಭಾಗಿ

21/04/2026 9:12 PM
State News
KARNATAKA

BREAKING: ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣ: ಅರಾಫತ್‌ಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್

By kannadanewsnow0921/04/2026 9:48 PM KARNATAKA 1 Min Read

ಬೆಂಗಳೂರು: ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಶಿವಮೊಗ್ಗದ ಟ್ರಯಲ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಎನ್‌ಐಎ (NIA) ವಿಶೇಷ ನ್ಯಾಯಾಲಯವು ಪ್ರಮುಖ ತೀರ್ಪು…

ಬೆಳಗಾವಿಯಲ್ಲಿ 100 ಕೋಟಿ ವೆಚ್ಚದಲ್ಲಿ ತಿರುಪತಿ ವೆಂಕಟೇಶ್ವರ ದೇವಸ್ಥಾನ ನಿರ್ಮಾಣ: ಟಿಟಿಡಿ ಸದಸ್ಯ ನರೇಶ್ ಕುಮಾರ್

21/04/2026 8:45 PM

ಸಾಗರದ ಶ್ರೀ ಶೃಂಗೇರಿ ಶಂಕರ ಮಠದಲ್ಲಿ ಅದ್ಧೂರಿ ಶಂಕರ ಜಯಂತಿ ಆಚರಣೆ

21/04/2026 8:13 PM

ಗುರುಗಳು ಹೇಳಿದ ಆ ಮಾತೇ ಆ ಯುವಕನ ಬದುಕು ಬದಲಿಸಿತು. ಅದೇನು ಅಂತ ಈ ಸುದ್ದಿ ಓದಿ!

21/04/2026 7:36 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.