ಬೆಂಗಳೂರು: ನಾವು ಕುವೆಂಪು ಅವರ ತತ್ವ ಸಿದ್ಧಾಂತ ಪಾಲನೆ, ಪ್ರಚಾರ ಮಾಡುತ್ತಿರುವವರು. ಈ ಘೋಷವಾಕ್ಯ ಬದಲಾವಣೆ ಅಗತ್ಯವೇನಿದೆ ಎಂದು ಕೇಳಿದಾಗ, “ಶಾಲೆಗಳಿಗೆ ಕೈಮುಗಿದು ಹೋಗುವುದರಲ್ಲಿ ತಪ್ಪೇನಿಲ್ಲ. ಹನುಮಂತಯ್ಯನವರು ಸರ್ಕಾರಿ ಕೆಲಸ ದೇವರ ಕೆಲಸ ಎಂದು ಹೇಳಿದ್ದಾರೆ. ಬಿಜೆಪಿಯವರು ಅನಗತ್ಯವಾಗಿ ಅಪಪ್ರಚಾರ ಮಾಡುತ್ತಿದ್ದಾರೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಶಾಲೆಗಳಲ್ಲಿ ಘೋಷವಾಕ್ಯ ಬದಲಾವಣೆ ವಿಚಾರವಾಗಿ ಬಿಜೆಪಿ ಟೀಕೆ ಬಗ್ಗೆ ಕೇಳಿದಾಗ, “ನನಗೆ ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ನಾವು ಕುವೆಂಪು ಅವರ ಆಚಾರ, ವಿಚಾರ ಪ್ರಚಾರ ಮಾಡುತ್ತಿದ್ದೇವೆ. ಕುವೆಂಪು ಅವರ “ಭಾರತ ಜನನಿಯ ತನುಜಾತೆ…”, “ಸರ್ವಜನಾಂಗದ ಶಾಂತಿಯ ತೋಟ…” ಸಂದೇಶವನ್ನು ಪ್ರತಿನಿತ್ಯ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ರಾಜ್ಯದ ಜನರಿಗೆ ಹೇಳುತ್ತಾ ಬಂದಿದ್ದೇವೆ. ಕುವೆಂಪು ಅವರ ತತ್ವ ಸಿದ್ಧಾಂತಗಳನ್ನು ನಾವು ಪಾಲಿಸಿ ಅದಕ್ಕೆ ಶಕ್ತಿ ತುಂಬುವ ಕೆಲಸ ಮಾಡಿದ್ದೇವೆ. ಬಿಜೆಪಿಯವರಿಗೆ ಮಾಡಲು ಕೆಲಸವಿಲ್ಲ. ಹೀಗಾಗಿ ಎಲ್ಲದರಲ್ಲೂ ತಪ್ಪು ಹುಡುಕುವ ಪ್ರಯತ್ನ ಮಾಡುತ್ತಿದ್ದಾರೆ. ಅವರು ಜನರ ಬದುಕಿನ ಬಗ್ಗೆ ಯೋಚಿಸುವುದಿಲ್ಲ, ಭಾವನೆ ಬಗ್ಗೆ ಮಾತ್ರ ಆಲೋಚಿಸಿ ಸಮಾಜ ಕೆಡಿಸುವ ಕೆಲಸ ಮಾಡುತ್ತಾರೆ” ಎಂದರು.
ಬರ ನಿರ್ವಹಣೆಗೆ ಅಗತ್ಯ ಕ್ರಮ
ಬರದಿಂದಾಗಿ ನೀರಿನ ಕೊರತೆ ವಿಚಾರವಾಗಿ ಕೇಳಿದಾಗ, “ಬರ ಪರಿಸ್ಥಿತಿಯಿಂದಾಗ ನೀರಿನ ಅಭಾವ ಹೆಚ್ಚಿದೆ. 200 ತಾಲೂಕುಗಳಲ್ಲಿ ಅಂತರ್ಜಲ ನೀರಿನ ಮಟ್ಟ ಕುಸಿದಿದೆ. ಬೆಂಗಳೂರಿನ 110 ಹಳ್ಳಿಗಳಿಗೆ ಸೇರಿದಂತೆ ಕುಡಿಯುವ ನೀರು ಪೂರೈಸಲು ನಮ್ಮ ಸರ್ಕಾರ ಬಜೆಟ್ ನಲ್ಲಿ ಅಗತ್ಯ ಕ್ರಮ ಕೈಗೊಂಡಿದೆ. ಇನ್ನು ಬೆಂಗಳೂರಿಗೆ ಹೆಚ್ಚುವರಿಯಾಗಿ 6 ಟಿಎಂಸಿ ನೀರನ್ನು ಬಳಸಲು ಆದೇಶ ಹೊರಡಿಸಲಾಗಿದೆ. ಬೆಂಗಳೂರಿನ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದ್ದು, ರಾಜ್ಯದ ಇತರ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಪೂರೈಕೆಗೆ ಜಿಲ್ಲಾಧಿಕಾರಿಗಳಿಗೆ ಹಣ ನೀಡಲಾಗಿದೆ. ಕೆಲವು ಶಾಸಕರು ಈಗಾಗಲೇ ಇರುವ ಕೊಳವೆ ಬಾವಿಗಳನ್ನು ಇನ್ನು 500 ಅಡಿಗಳಷ್ಟು ಆಳಕ್ಕೆ ಕೊರೆಸಿದರೆ ಹೊಸ ಕೊಳವೆಬಾವಿ ಕೊರೆಯುವ ಅಗತ್ಯವಿಲ್ಲ ಎಂದು ಸಲಹೆ ನೀಡಿದ್ದಾರೆ. ಈ ಅವಕಾಶದ ಬಗ್ಗೆ ಅಧಿಕಾರಿಗಳ ಜತೆ ಚರ್ಚೆ ಮಾಡುತ್ತೇನೆ” ಎಂದು ತಿಳಿಸಿದರು.
ತಮಿಳುನಾಡಿನಲ್ಲಿ ಕಮಲ್ ಹಸನ್ ಅವರು ಇಂಡಿಯಾ ಮೈತ್ರಿಕೂಟಕ್ಕೆ ಸೇರಲು ಮುಂದಾಗಿದ್ದು ಇದರಿಂದ ಮೈತ್ರಿಗೆ ಅನುಕೂಲವಾಗುತ್ತದೆಯೇ ಎಂದು ಕೇಳಿದಾಗ, “ಖಂಡಿತವಾಗಿಯೂ ಅನುಕೂಲವಾಗುತ್ತದೆ. ನಮ್ಮ ಜತೆ ಕೈಜೋಡಿಸುವವರಿಗೆ ನಾವು ಸ್ವಾಗತಿಸುತ್ತೇವೆ” ಎಂದು ತಿಳಿಸಿದರು.
ಶಾಸಕರ ವಿರುದ್ಧದ ಎಫ್ಐಆರ್ ಖಂಡಿಸಿ ಬಿಜೆಪಿ, ವಿಹೆಚ್ ಪಿ ಪ್ರತಿಭಟನೆ ಬಗ್ಗೆ ಕೇಳಿದಾಗ, “ಬಿಜೆಪಿ ಸ್ನೇಹಿತರು ನಮಗೆ ಕೆಲವು ಪಾಠ ಕಲಿಸಿದ್ದು, ನಾವು ಆ ಪಾಠ ಕಲಿತಿದ್ದೇವೆ” ಎಂದರು.
Shocking News: ‘ಬಗರ್ ಹುಕುಂ’ ಅಡಿ ಒಬ್ಬರಿಂದಲೇ ’25 ಅರ್ಜಿ’ ಸಲ್ಲಿಕೆ – ಸಚಿವ ಕೃಷ್ಣಬೈರೇಗೌಡ
ಟಾಟಾ ಸಮೂಹದ ಮಾರುಕಟ್ಟೆ ಮೌಲ್ಯವು ಈಗ ಪಾಕಿಸ್ತಾನದ ‘ಸಂಪೂರ್ಣ ಆರ್ಥಿಕತೆಗಿಂತ’ ಹೆಚ್ಚು