Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING: ತಾಯಂದಿರ ದಿನವೇ ಹೆತ್ತಮ್ಮನನ್ನು ಗುಂಡಿಕ್ಕಿ ಕೊಂದ ಮಗ

​ತಾಯಂದಿರ ದಿನದ ವಿಶೇಷ: ಪತ್ನಿ ತಾಯಿಯಾದ ಮೇಲೆ ಪತಿಯರು ಮಾಡುವ ಈ 7 ತಪ್ಪುಗಳ ಬಗ್ಗೆ ಎಚ್ಚರವಿರಲಿ!

ಅಮೆರಿಕದ ಶಾಂತಿ ಪ್ರಸ್ತಾವನೆಗೆ ಇರಾನ್ ಪ್ರತಿಕ್ರಿಯೆ: ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ಸಲ್ಲಿಕೆಯಾದ ವರದಿ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಸಾಮಾಜಿಕ ಸಾಮರಸ್ಯಕ್ಕಾಗಿ ʻನಾವು ಮನುಜರುʼ ಕಾರ್ಯಕ್ರಮ : ಶಿಕ್ಷಣ ಇಲಾಖೆ ಆದೇಶ
KARNATAKA

ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಸಾಮಾಜಿಕ ಸಾಮರಸ್ಯಕ್ಕಾಗಿ ʻನಾವು ಮನುಜರುʼ ಕಾರ್ಯಕ್ರಮ : ಶಿಕ್ಷಣ ಇಲಾಖೆ ಆದೇಶ

By kannadanewsnow57

ಬೆಂಗಳೂರು : 2024-25ನೇ ಸಾಲಿನ ಆಯವ್ಯಯ ಘೋಷಿತ ‘ನಾವು-ಮನುಜರು’ ಕಾರ್ಯಕ್ರಮವನ್ನು ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಅನುಷ್ಠಾನಗೊಳಿಸುವ ಕುರಿತು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಮೇಲಿನ ವಿಷಯ ಮತ್ತು ಉಲ್ಲೇಖಕ್ಕೆ ಸಂಬಂಧಿಸಿದಂತೆ, ರಾಜ್ಯದ ಎಲ್ಲಾ ಶಿಕ್ಷಣ ಸಂಸ್ಥೆಗಳನ್ನು ಸಾಮಾಜಿಕ ಸಾಮರಸ್ಯ, ವೈಜ್ಞಾನಿಕ ಮನೋಭಾವ ಮತ್ತು ಸಹಬಾಳ್ವೆಯ ವಿದ್ಯಾಕೇಂದ್ರಗಳನ್ನಾಗಿ ರೂಪಿಸಲು ‘ನಾವು-ಮನುಜರು’ ಎಂಬ ಹೆಸರಿನಲ್ಲಿ ಎಲ್ಲಾ ಶಾಲಾ ಕಾಲೇಜುಗಳಲ್ಲಿ ವಾರಕ್ಕೆ 2 ಗಂಟೆಗಳ ವಿಚಾರ ವಿಮರ್ಶೆ ಮತ್ತು ಸಂವಾದ ಚಟುವಟಿಕೆಗಳನ್ನು ಒಳಗೊಂಡ ತರಗತಿಗಳನ್ನು ನಡೆಸಲಾಗುವುದು ಎಂದು 2024-25 ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಘೋಷಿಸಲಾಗಿರುತ್ತದೆ.

ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ವಾರಕ್ಕೆ 2 ಗಂಟೆಗಳ (120 ನಿಮಿಷ – 40 ನಿಮಿಷಗಳ 3 ಅವಧಿಗಳು) ವಿಚಾರ ವಿಮರ್ಶೆ ಮತ್ತು ಸಂವಾದ ಚಟುವಟಿಕೆಗಳನ್ನು ಒಳಗೊಂಡ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವ ಸಂಬಂಧ ಉಲ್ಲೇಖ-3 ರ ಸರ್ಕಾರದ ಆದೇಶದಲ್ಲಿ ನಿರ್ದೇಶಿಸಲಾಗಿದೆ. ಸದರಿ ಆದೇಶದ ಅನುಬಂಧದ ಕ್ರಿಯಾಯೋಜನೆಯಲ್ಲಿ ನೀಡಿರುವಂತೆ ಶಾಲಾ ವೇಳಾಪಟ್ಟಿಯಲ್ಲಿ ಮೌಲ್ಯಶಿಕ್ಷಣದ 1 ಅವಧಿ ಮತ್ತು ಸಾ.ಉ.ಉ.ಕಾ 2 ಅವಧಿಗಳನ್ನು ಹೊಂದಾಣಿಕೆ ಮಾಡಿಕೊಂಡು ಕಡ್ಡಾಯವಾಗಿ ಶಾಲೆಗಳಲ್ಲಿ ಅನುಷ್ಠಾನ ಮಾಡಲು ತಿಳಿಸಿದೆ.

ಮೇಲುಸ್ತುವಾರಿ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಸದರಿ ಕಾರ್ಯಕ್ರಮದ ಅನುಷ್ಠಾನದ ಬಗ್ಗೆ ಖಾತರಿಪಡಿಸಿಕೊಂಡು ಸೂಕ್ತ ಮಾರ್ಗದರ್ಶನ ನೀಡುವುದು ಹಾಗೂ ಜಿಲ್ಲಾ ಹಂತದಲ್ಲಿ ನೋಡಲ್ ಅಧಿಕಾರಿಯನ್ನು ನಿಯೋಜಿಸಿ, ಸದರಿ ಕಾರ್ಯಕ್ರಮದ ಯಶಸ್ವಿ ಅನುಷ್ಠಾನದ ಬಗ್ಗೆ ಉಪನಿರ್ದೇಶಕರು ಆಡಳಿತ ಮತ್ತು ಉಪನಿರ್ದೇಶಕರು ಅಭಿವೃದ್ಧಿ ರವರು ಜಂಟಿಯಾಗಿ ವರದಿಯನ್ನು ಸಿದ್ಧಪಡಿಸಿ DSERT ಕಛೇರಿಗೆ ಸಲ್ಲಿಸಲು ತಿಳಿಸಿದೆ.

 

'We are Manujaru' programme for social harmony in all schools and colleges in the state: Education Department ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಸಾಮಾಜಿಕ ಸಾಮರಸ್ಯಕ್ಕಾಗಿ ʻನಾವು ಮನುಜರುʼ ಕಾರ್ಯಕ್ರಮ : ಶಿಕ್ಷಣ ಇಲಾಖೆ ಆದೇಶ
Share. Facebook Twitter LinkedIn WhatsApp Email

Related Posts

ಸಾಗರದ ‘ನಗರಸಭೆ ಜಾಗ’ ಅಕ್ರಮ ಒತ್ತುವರಿ; ಬೆಲೆಬಾಳುವ ಆಸ್ತಿ ರಕ್ಷಣೆಯಲ್ಲಿ ‘ನಗರಾಡಳಿತ’ ತೀವ್ರ ನಿರ್ಲಕ್ಷ್ಯ

2 Mins Read

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 74 DYSP, 293 ಪಿಐ ವರ್ಗಾವಣೆ ಮಾಡಿ ಆದೇಶ

4 Mins Read

ಗಿಗ್ ಕಾರ್ಮಿಕರ ಬಾಳಿಗೆ ಆಸರೆಯಾದ ಕಾಂಗ್ರೆಸ್ ಸರ್ಕಾರ: ಚುನಾವಣೆ ಮುನ್ನ ನೀಡಿದ್ದ ಭರವಸೆ ಈಡೇರಿಕೆ

2 Mins Read
Recent News

SHOCKING: ತಾಯಂದಿರ ದಿನವೇ ಹೆತ್ತಮ್ಮನನ್ನು ಗುಂಡಿಕ್ಕಿ ಕೊಂದ ಮಗ

​ತಾಯಂದಿರ ದಿನದ ವಿಶೇಷ: ಪತ್ನಿ ತಾಯಿಯಾದ ಮೇಲೆ ಪತಿಯರು ಮಾಡುವ ಈ 7 ತಪ್ಪುಗಳ ಬಗ್ಗೆ ಎಚ್ಚರವಿರಲಿ!

ಅಮೆರಿಕದ ಶಾಂತಿ ಪ್ರಸ್ತಾವನೆಗೆ ಇರಾನ್ ಪ್ರತಿಕ್ರಿಯೆ: ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ಸಲ್ಲಿಕೆಯಾದ ವರದಿ!

​ಸಾವಿರಾರು ಕಾಯಿಲೆಗಳಿಗೆ ಆಹ್ವಾನ ನೀಡುವ ‘ನಕಲಿ ಕುಡಿಯುವ ನೀರು’: ಅಸಲಿ ಬಾಟಲಿಯನ್ನು ಗುರುತಿಸುವುದು ಹೇಗೆ? ಇಲ್ಲಿವೆ ಟಿಪ್ಸ್!

State News
KARNATAKA

ಸಾಗರದ ‘ನಗರಸಭೆ ಜಾಗ’ ಅಕ್ರಮ ಒತ್ತುವರಿ; ಬೆಲೆಬಾಳುವ ಆಸ್ತಿ ರಕ್ಷಣೆಯಲ್ಲಿ ‘ನಗರಾಡಳಿತ’ ತೀವ್ರ ನಿರ್ಲಕ್ಷ್ಯ

By ವಸಂತ್‌ ಬಿ ಈಶ್ವರಗೆರೆ KARNATAKA 2 Mins Read

ಶಿವಮೊಗ್ಗ: ಸಾಗರ ನಗರದ ಹೃದಯಭಾಗದಲ್ಲಿರುವ ನಗರಸಭೆಯ ಕೋಟ್ಯಂತರ ರೂಪಾಯಿ ಬೆಲೆಬಾಳುವ ಜಾಗವೊಂದು ಅಕ್ರಮ ಒತ್ತುವರಿಯಾಗುತ್ತಿದ್ದರೂ, ನಗರಸಭೆ ಆಡಳಿತ ಮಂಡಳಿ ಮಾತ್ರ ಕಣ್ಣಿದ್ದೂ…

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 74 DYSP, 293 ಪಿಐ ವರ್ಗಾವಣೆ ಮಾಡಿ ಆದೇಶ

ಗಿಗ್ ಕಾರ್ಮಿಕರ ಬಾಳಿಗೆ ಆಸರೆಯಾದ ಕಾಂಗ್ರೆಸ್ ಸರ್ಕಾರ: ಚುನಾವಣೆ ಮುನ್ನ ನೀಡಿದ್ದ ಭರವಸೆ ಈಡೇರಿಕೆ

ಸಚಿವ ಡಿ.ಸುಧಾಕರ್ ಅಂತಿಮ ದರ್ಶನದ ವೇಳೆ ಬಿಕ್ಕಿ ಬಿಕ್ಕಿ ಅತ್ತ ಡಿಸಿಎಂ ಡಿ.ಕೆ ಶಿವಕುಮಾರ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.