ಮಂಡ್ಯ : ಮಳವಳ್ಳಿ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧ ಹಾಗೂ ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.
ತಮ್ಮ ಟ್ಟಿಟ್ಟರ್ ಖಾತೆಯಲ್ಲಿ ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ 10 ವರ್ಷದ ಮುಗ್ಧ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಹೇಯ ಕೃತ್ಯವಾಗಿದೆ. ಈ ಪ್ರಕರಣದಲ್ಲಿ ತ್ವರಿತ ನ್ಯಾಯ ಮತ್ತು ಗರಿಷ್ಠ ಶಿಕ್ಷೆಯನ್ನು ಖಚಿತಪಡಿಸಿಕೊಳ್ಳಲು ನಾವು ನಮ್ಮ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದೇವೆ.
The rape and murder of 10 yr old innocent girl at Malavalli in Mandya district is a despicable and brutal act.
We are putting all our efforts to ensure speedy justice and maximum punishment in this case.
— alok kumar (@alokkumar6994) October 13, 2022
ಮಳವಳ್ಳಿ ಬಾಲಕಿ ಮಂಗಳವಾರ ಟ್ಯೂಷನ್ಗೆ ಬಂದ ಬಾಲಕಿ (1o) ಮೇಲೆ ಕಾಂತರಾಜು ಅತ್ಯಾಚಾರವೆಸಗಿದ್ದಾನೆ. ನಂತರ ಅರೆ ಪ್ರಜ್ಞಾವಸ್ಥೆಯಲ್ಲಿದ್ದ ಬಾಲಕಿಯ ಕತ್ತು ಹಿಸುಕಿ, ಬಳಿಕ ರಾಡಿನಿಂದ ತಲೆಯ ಭಾಗಕ್ಕೆ ಹೊಡೆದು ಹತ್ಯೆಗೈದಿದ್ದಾನೆ. ಕೊಲೆ ನಂತರ ನಿರ್ಮಾಣ ಹಂತದ ಮನೆಯ ಸಂಪ್ಗೆ ಮೃತದೇಹ ಹಾಕಿ ಪರಾರಿಯಾಗಿದ್ದನು. ನಂತರ ಬಾಲಕಿಯ ಕುಟುಂಬಸ್ಥರ ಜೊತೆ ಸೇರಿ ಆಕೆಗಾಗಿ ಹುಡುಕಾಟ ನಡೆಸಿದ್ದಾನೆ. ಅಲ್ಲದೇ ಪೊಲೀಸರು ಬಂದಾಗಲೂ ಸ್ಥಳದಲ್ಲೇ ಇದ್ದ ಕಾಂತರಾಜು ತನಗೇನು ಗೊತ್ತಿಲ್ಲ ಎಂಬಂತೆ ನಾಟಕ ಮಾಡಿದ್ದಾನೆ. ನಂತರ ಈ ಪ್ರಕರಣಕ್ಕೆ ಸಂಬಂಧ ಕಾಂತರಾಜು ಅನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸತ್ಯ ಬಯಲಾಗಿದೆ.
ಬಾಲಕಿಯನ್ನು ಟ್ಯೂಷನ್ ಗೆ ಕರೆಸಿಕೊಂಡ ಶಿಕ್ಷಕ ನಂತರ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವುದು ಸಾಭೀತಾಗಿದೆ. ಬಂಧಿತ ಶಿಕ್ಷಕನನ್ನು ಕಾಂತ್ ರಾಜ್ ಎಂದು ಗುರುತಿಸಲಾಗಿದೆ. ಟ್ಯೂಷನ್ ಗೆ ಬಂದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ನಂತರ ಪೋಷಕರಿಗೆ ಗೊತ್ತಾದರೆ ಅಪಾಯ ಎಂದು ಭಾವಿಸಿದ ಈತ ಬಾಲಕಿ ತಲೆಗೆ ರಾಡ್ ನಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ , ಬಳಿಕ ಸಂಪ್ ಗೆ ಎಸೆದಿದ್ದಾನೆ ಎಂದು ತಿಳಿದು ಬಂದಿದೆ. ಪ್ರಕರಣ ಸಂಬಂಧ ಐಪಿಸಿ 302 ಹಾಗೂ ಪೋಕ್ಸೋ ಕಾಯಿದೆಯಡಿ ಆರೋಪಿಯನ್ನು ಬಂಧಿಸಿ ಪೊಲೀಸರು ಜೈಲಿಗಟ್ಟಿದ್ದಾರೆ. ಈ ಸಂಬಂಧ ಆಕ್ರೋಶ ವ್ಯಕ್ತಪಡಿಸಿರುವ ಜನರು ಆರೋಪಿ ಕಾಂತ್ ರಾಜ್ ನನ್ಜು ಗಲ್ಲಿಗೇರಿಸಲು ಭಾರಿ ಆಗ್ರಹ ವ್ಯಕ್ತಪಡಿಸಿದ್ದಾರೆ.
ಮೈಸೂರು ರಸ್ತೆಯ ಮಯೂರ ಬೇಕರಿ ಹಿಂಭಾಗದ ನಿರ್ಮಾಣ ಹಂತದ ಮನೆಯ ಕಟ್ಟಡದಲ್ಲಿ 10 ವರ್ಷದ ವಿದ್ಯಾರ್ಥಿನಿ ಶವ ಪತ್ತೆಯಾಗಿತ್ತು. ಮಂಗಳವಾರ ಬೆಳಗ್ಗೆ ಟ್ಯೂಷನ್ ಗಾಗಿ ಮನೆಯಿಂದ ಹೋಗಿದ್ದ ವಿದ್ಯಾರ್ಥಿನಿ ಬಳಿಕ ಮನೆಗೆ ವಾಪಸ್ ಬಂದಿರಲಿಲ್ಲ. ನಂತರ ಮೈಸೂರು ರಸ್ತೆಯ ಮಯೂರ ಬೇಕರಿ ಹಿಂಭಾಗದ ನಿರ್ಮಾಣ ಹಂತದ ಕಟ್ಟಡದ ಸಮೀಪದಲ್ಲಿ ಪರಿಶೀಲಿಸಿದಾಗ ನೀರಿನ ಸಂಪ್ ಒಳಗೆ ಬಾಲಕಿಯ ಶವ ಪತ್ತೆಯಾಗಿತ್ತು.