ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ ಇದೀಗ ತೀವ್ರ ಸಂಕಷ್ಟ ಎದುರಾಗಿದ್ದು, ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ನಿನ್ನೆ ವಿಚಾರಣೆ ನಡೆಸಿದ ಹೈಕೋರ್ಟ್ ಆಗಸ್ಟ್ 29ಕ್ಕೆ ವಿಚಾರಣೆ ಮುಂದೂಡಿ ಆದೇಶ ಹೋರಡಿಸಿದೆ.
ಇದಕ್ಕೂ ಮೊದಲು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಎಲ್ಲಾ ಸಚಿವರು ಸಿಎಂ ಬೆಂಬಲಕ್ಕೆ ನಿಂತಿದ್ದು, ನೀವು ಎದೆಗುಂದಬೇಡಿ ನಿಮ್ಮ ಜೊತೆಗೆ ನಾವಿದ್ದೇವೆ ಎಂದು ಆತ್ಮಸ್ಥೈರ್ಯ ತುಂಬಿದ್ದರು. ಇಂಡಿಯಾ ಒಕ್ಕೂಟದ ನಾಯಕರು ಕೂಡ ಸಿಎಂ ಸಿದ್ರಾಮಯ್ಯ ಬೆಂಬಲಕ್ಕೆ ನಿಂತಿದ್ದಾರೆ.
ಹೌದು ಸಿಎಂ ಸಿದ್ದರಾಮಯ್ಯ ಪರವಾಗಿ ಪಕ್ಕದ ರಾಜ್ಯದ ಮುಖ್ಯಮಂತ್ರಿಗಳು ಅವರ ಬೆನ್ನಿಗೆ ನಿಂತಿದ್ದಾರೆ. ಕೇರಳ, ತಮಿಳುನಾಡು, ತೆಲಂಗಾಣ ರಾಜ್ಯದ ಮುಖ್ಯಮಂತ್ರಿಗಳು ಸಿಎಂ ಸಿದ್ದರಾಮಯ್ಯ ಅವರಿಗೆ ಕರೆ ಮಾಡಿ, ಚರ್ಚಿಸಿದ್ದಾರೆ. ನಿಮ್ಮ ಜೊತೆಗೆ ನಾವಿದ್ದೇವೆ ಎಂದು ಅಭಯ ನೀಡಿದ್ದಾರೆ. ಅಲ್ಲದೆ ರಾಜ್ಯಪಾಲರ ನಿರ್ಧಾರ ಹಾಗೂ ಕೇಂದ್ರದ ವಿರುದ್ಧ ಅಸಮಾಧಾನ ಹೊರಹಕಿದ್ದಾರೆ ಎಂದು ತಿಳಿದುಬಂದಿದೆ.