ಬೆಳಗಾವಿ : ನಾಳೆ ನಡೆಯಲಿರುವ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ನಾಗೇಂದ್ರ ಮತ್ತು ಕೆ. ಎನ್. ರಾಜಣ್ಣ ಅವರ ರಾಜೀನಾಮೆಯಿಂದ ತೆರವಾಗಿರುವ ಎರಡು ಸಚಿವ ಸ್ಥಾನಗಳನ್ನು ಭರ್ತಿ ಮಾಡುವಂತೆ ಈ ಹಿಂದೆಯೇ ಬೇಡಿಕೆ ಇಟ್ಟಿದ್ದೇವೆ. ಆದಷ್ಟು ಬೇಗನೆ ಈ ಸಮುದಾಯಕ್ಕೆ ಸಚಿವ ಸ್ಥಾನ ನೀಡುವಂತೆ ಸ್ವಾಮೀಜಿ ನೇತೃತ್ವದಲ್ಲಿ ಬೇಡಿಕೆ ಇಡುತ್ತೇವೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಈ ಕುರಿತು ನಗರದಲ್ಲಿಂದು ಮಾಧ್ಯಮದವರ ಜೊತೆಗೆ ಮಾತನಾಡಿದ ಅವರು, ‘ನಾಗೇಂದ್ರ ಮತ್ತು ಕೆ. ಎನ್. ರಾಜಣ್ಣ ಅವರ ರಾಜೀನಾಮೆಯಿಂದ ತೆರವಾಗಿರುವ ಎರಡು ಸಚಿವ ಸ್ಥಾನಗಳನ್ನು ಭರ್ತಿ ಮಾಡುವಂತೆ ಈ ಹಿಂದೆಯೇ ಬೇಡಿಕೆ ಇಟ್ಟಿದ್ದೇವೆ. ಆದಷ್ಟು ಬೇಗನೆ ಈ ಸಮುದಾಯಕ್ಕೆ ಸಚಿವ ಸ್ಥಾನ ನೀಡುವಂತೆ ತಿಳಿಸಿದ್ದೇವೆ. ನಾಳೆ ನಡೆಯಲಿರುವ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ವಾಲ್ಮೀಕಿ ಪೀಠದ ಪ್ರಸನ್ನಾನಂದ ಸ್ವಾಮೀಜಿ ನೇತೃತ್ವದ ನಿಯೋಗದ ಮೂಲಕ ಮುಖ್ಯಮಂತ್ರಿ ಮತ್ತು ಪಕ್ಷದ ಅಧ್ಯಕ್ಷರಿಗೆ ಭೇಟಿಯಾಗಿ ಒತ್ತಡ ಹಾಕುತ್ತೇವೆ’ ಎಂದಿದ್ದಾರೆ.