ನಾವು ಅಧಿಕಾರ ದಾಹದಿಂದ ಪಾದಯಾತ್ರೆ ಹಮ್ಮಿಕೊಂಡಿಲ್ಲ: ಬಿವೈ ವಿಜಯೇಂದ್ರ

ಬೆಂಗಳೂರು: ರಾಜ್ಯದ ಇತಿಹಾಸದಲ್ಲಿ ಇಂಥ ಬೃಹತ್ ಪಾದಯಾತ್ರೆಯನ್ನು ಯಾರೂ ಹಮ್ಮಿಕೊಂಡಿರಲಿಲ್ಲ. ಯಾವುದೇ ಅಧಿಕಾರ ದಾಹದಿಂದ ನಮ್ಮ ಈ ಪಾದಯಾತ್ರೆ ಹಮ್ಮಿಕೊಂಡಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ನಾಲ್ಕನೇ ದಿನವಾದ ಇಂದು ಮೈಸೂರು ಚಲೋ ಪಾದಯಾತ್ರೆಯ ಸಂದರ್ಭದಲ್ಲಿ ಅವರು ಮಾತನಾಡಿದರು. ಭ್ರಷ್ಟ ಕಾಂಗ್ರೆಸ್ ಸರಕಾರ ಮತ್ತು ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಅಧಿಕಾರದಿಂದ ಕಿತ್ತೆಸೆಯಬೇಕೆಂದು ಸಂಕಲ್ಪದೊಂದಿಗೆ ಈ ಪಾದಯಾತ್ರೆ ಹಮ್ಮಿಕೊಂಡಿದ್ದೇವೆ ಎಂದು ತಿಳಿಸಿದರು. ರಾಜ್ಯದ ಆರೂವರೆ ಕೋಟಿ ಜನರಿಗೆ ಚುನಾಯಿತ ಸರಕಾರ ಇದೆ ಎಂದು … Continue reading ನಾವು ಅಧಿಕಾರ ದಾಹದಿಂದ ಪಾದಯಾತ್ರೆ ಹಮ್ಮಿಕೊಂಡಿಲ್ಲ: ಬಿವೈ ವಿಜಯೇಂದ್ರ