ನಮಗೆ ಜಾತಿ ಗಣತಿಯಲ್ಲಿ ರಾಜಕೀಯ ಬೇಡ, ಸಾಮಾಜಿಕ ನ್ಯಾಯ ಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : “ನಮಗೆ ರಾಜಕೀಯ ಬಣ್ಣ ಬೇಡ. ಸಾಮಾಜಿಕ ನ್ಯಾಯ ಬೇಕು. ಈ ಕಾರಣಕ್ಕೆ ನಾವು ಮತ್ತೊಮ್ಮೆ ಜಾತಿ ಜನಗಣತಿ ಮಾಡಲು ತೀರ್ಮಾನ ಮಾಡಿದ್ದೇವೆ. ಈ ಹಿಂದಿನ ವರದಿ ಬಗ್ಗೆ ಟೀಕೆ ಮಾಡಿದ್ದ ವಿರೋಧ ಪಕ್ಷದವರು ಈಗ ಉಲ್ಟಾ ಮಾತಾಡುತ್ತಿದ್ದಾರೆ. ಅದರ ಬದಲು ಹಳೆಯದನ್ನೇ ಒಪ್ಪಿಕೊಳ್ಳುವಂತೆ ಆಗ್ರಹಿಸಲಿ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆಯ ನಂತರ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಉತ್ತರಿಸಿದರು. ಜಾತಿಗಣತಿ ವಿಚಾರವಾಗಿ ಮರುಸಮೀಕ್ಷೆಗೆ ಮುಂದಾಗಿರುವ ಸರ್ಕಾರದ ಕ್ರಮವನ್ನು … Continue reading ನಮಗೆ ಜಾತಿ ಗಣತಿಯಲ್ಲಿ ರಾಜಕೀಯ ಬೇಡ, ಸಾಮಾಜಿಕ ನ್ಯಾಯ ಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್