ನವದೆಹಲಿ: ಲೋಕಸಭಾ ಚುನಾವಣೆಗೆ ಖರ್ಚು ಮಾಡಲು ನಮ್ಮ ಬಳಿಯಲ್ಲಿ ಹಣವೇ ಇಲ್ಲ. ವಿಪಕ್ಷಗಳ ಎಲ್ಲಾ ಬ್ಯಾಂಕ್ ಖಾತೆಗಳನ್ನು ಕೇಂದ್ರ ಸರ್ಕಾರ ಫ್ರೀಜ್ ಮಾಡಿದ್ದಾರೆ. ಚುನಾವಣೆಗೆ ಮುನ್ನವೇ ಮ್ಯಾಚ್ ಫಿಕ್ಸಿಂಗ್ ಆಗಿದೆ ಎಂಬುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ.
ಇಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆದಂತ ಇಂಡಿಯಾ ಮೈತ್ರಿಕೂಟದ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದಂತ ಅವರು, ಈ ಚುನಾವಣೆ ಸಾಮಾನ್ಯ ಚುನಾವಣೆಯಲ್ಲ. ದೇಶದ ಉಳಿವು, ಸಂವಿಧಾನದ ಉಳಿವಿಗಾಗಿ ನಡೆಯುತ್ತಿರುವ ಚುನಾವಣೆಯಾಗಿದೆ ಎಂದರು.
ಬಿಜೆಪಿಯೇತರ ರಾಜ್ಯಗಳ ಸಿಎಂಗಳನ್ನು ಬಿಜೆಪಿ ಟಾರ್ಗೆಟ್ ಮಾಡುತ್ತಿದೆ. ಹೇಮಂತ್ ಸೊರೇನ್, ಅರವಿಂದ್ ಕೇಜ್ರಿವಾಲ್ ಅವರನ್ನು ಬಿಜೆಪಿ ಜೈಲಿಗೆ ಹಾಕಿದ್ದಾರೆ. ಪ್ರಜಾಪ್ರಭುತ್ವ, ಸಂವಿಧಾನ ಉಳಿಯಬೇಕೆಂದ್ರೆ ಬಿಜೆಪಿ ಸೋಲಿಸಬೇಕು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಸುವಂತೆ ಕರೆ ನೀಡಿದರು.
ಕಾಂದ್ರೆಸ್ ಸೇರಿ ಎಲ್ಲಾ ವಿಪಕ್ಷಗಳ ಬ್ಯಾಂಕ್ ಖಾತೆ ಪ್ರೀಜ್ ಮಾಡಿದ್ದಾರೆ. ಲೋಕಸಭಾ ಚುನಾವಣೆಗೆ ವೆಚ್ಚ ಮಾಡಲು ನಮ್ಮ ಬಳಿ ಹಣವೇ ಇಲ್ಲ. ಸಾಂವಿಧಾನಿಕ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಐಟಿ, ಇಡಿ, ಸಿಬಿಐ, ಪೊಲೀಸ್ ಬಳಸಿ ಚುನಾವಣೆ ನಡೆಸುತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹತ್ತಿಕ್ಕಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂಬುದಾಗಿ ವಾಗ್ಧಾಳಿ ನಡೆಸಿದರು.
BREAKING: ಬೈರತಿ ಬಸವರಾಜ್ ಸಹಾಯಕನ ಅಳಿಯನ ಮೇಲೆ IT ದಾಳಿ: 1.20 ಕೋಟಿ ನಗದು ಪತ್ತೆ
ತಾಂಡಾಗಳನ್ನು `ಕಂದಾಯ ಗ್ರಾಮ’ಗಳೆಂದು ಮೊದಲು ಘೋಷಿಸಿದ್ದೆ ಕಾಂಗ್ರೆಸ್ : ಸಚಿವ ಪ್ರಿಯಾಂಕ್ ಖರ್ಗೆ