ಮೀಸಲಾತಿ ಸೌಲಭ್ಯ ಕೊಟ್ಟಿದ್ದು ನಾವು, ಅದರ ಪ್ರತಿಫಲ ಸಿಗುತ್ತಿರುವುದು ಕಾಂಗ್ರೆಸ್ ಪಕ್ಷಕ್ಕೆ: HDD ಬೇಸರ

ಬೆಂಗಳೂರು: ರಾಜ್ಯದಲ್ಲಿ ಸಾಮಾಜಿಕ ನ್ಯಾಯ, ದುರ್ಬಲರಿಗೆ ಮೀಸಲಾತಿ ಸೌಲಭ್ಯ ತಂದಿದ್ದೇ ನಾವು. ಆದರೆ ಇವತ್ತು ಅದರ ಪ್ರತಿಫಲವನ್ನು ಕಾಂಗ್ರೆಸ್‌ ಅನುಭವಿಸುತ್ತಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಹೇಳಿದರು. ಜೆಡಿಎಸ್‌ ಪಕ್ಷದ ರಾಜ್ಯದ ಕಚೇರಿ ಜೆಪಿ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಇವರು ಬಜೆಟ್‌ ಮಂಡಿಸಿದ್ದಾರೆ. ಅದರ ಬಗ್ಗೆ ನಾನು ಒಂದು ಶಬ್ದವನ್ನೂ ಮಾತನಾಡುವುದಿಲ್ಲ. ಸಮಯ ಬಂದಾಗ ಮಾತನಾಡುತ್ತೇನೆ. ಆದರೆ ಸಾಮಾಜಿಕ ನ್ಯಾಯ ಎಂದೆಲ್ಲಾ ಮಾತನಾಡುತ್ತಿದ್ದಾರೆ. ಈ ರಾಜ್ಯದಲ್ಲಿ ಸಾಮಾಜಿಕ ನ್ಯಾಯ ಮತ್ತು … Continue reading ಮೀಸಲಾತಿ ಸೌಲಭ್ಯ ಕೊಟ್ಟಿದ್ದು ನಾವು, ಅದರ ಪ್ರತಿಫಲ ಸಿಗುತ್ತಿರುವುದು ಕಾಂಗ್ರೆಸ್ ಪಕ್ಷಕ್ಕೆ: HDD ಬೇಸರ