ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಜನರಿಗೆ ಕೊಟ್ಟ ಭರವಸೆಯಂತೆ 5 ಪ್ರಮುಖ ಗ್ಯಾರಂಟಿಗಳನ್ನು ಜಾರಿಗೆ ಮಾಡಿದ್ದೇವೆ. ಆದರೆ ವಿಪಕ್ಷದವರು ಇದು ಎಂಪಿ ಚುನಾವಣೆವರೆಗೂ ಮಾತ್ರ ಎಂದಿದ್ದರು.ಆದರೆ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಜನರಿಗೆ ಕೊಟ್ಟ ಭರವಸೆಯ 5 ಗ್ಯಾರಂಟಿಗಳನ್ನು ಜಾರಿಗೆ ಮಾಡಿದ್ದೇವೆ. ಆಶ್ವಾಸನೆ ಕೊಟ್ಟ ಎಲ್ಲಾ ಕಾರ್ಯಕ್ರಮಗಳನ್ನು ಜಾರಿಗೆ ಮಾಡಿದ್ದೇವೆ. ಧರ್ಮ, ಜಾತಿ ಭೇದವಿಲ್ಲದೆ ಕಾರ್ಯಕ್ರಮಗಳನ್ನು ಜಾರಿಗೆ ಮಾಡಿದ್ದೇವೆ. ವಿಪಕ್ಷಗಳು ಗ್ಯಾರಂಟಿಗಳನ್ನ ಜಾರಿಗೆ ಮಾಡಲ್ಲ ಅಂತ ಅಂದಿದ್ದರು.
ಜಾರಿ ಮಾಡಿದ ಮೇಲೆ ಎಂಪಿ ಚುನಾವಣೆವರೆಗೂ ಅಂದರು. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ ಎಂದರು.ಅಭಿವೃದ್ಧಿ ಯೋಜನೆಗೆ 1.60 ಲಕ್ಷ ಕೋಟಿ ಮೀಸಲಿಟ್ಟಿದ್ದೇವೆ. ಗ್ಯಾರಂಟಿಗಳಿಗೆ 56 ಸಾವಿರ ಕೋಟಿ ಖರ್ಚು ಮಾಡುತ್ತಿದ್ದೇವೆ. ಅಭಿವೃದ್ಧಿ ಯೋಜನೆಗಳಿಗೆ ಹಣ ಇಲ್ಲ ಅನ್ನೋದು ಸುಳ್ಳು ಎಂದು ಅವರು ತಿಳಿಸಿದರು.