ಬೆಂಗಳೂರು : ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನಲ್ಲಿ ಗೃಹ ಇಲಾಖೆ ಸಚಿವ ಜಿ.ಪರಮೇಶ್ವರ್ ಮಾತನಾಡಿದ್ದು ಅಶ್ಲೀಲ ವಿಡಿಯೋ ಹಂಚಿದ್ದು ಯಾರೆಂದು ಗೊತ್ತಿದೆ ಎಂದು ಸ್ಪೋಟಕವಾದ ಹೇಳಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದ ತನಿಖೆ ಇನ್ನೂ ನಡೆಯುತ್ತಿದೆ. ಅಶ್ಲೀಲ ವಿಡಿಯೋ ಹಂಚಿದ್ದು ಯಾರು ಅಂತ ನಮಗೆ ಮಾಹಿತಿ ಇದೆ. ಸಾರ್ವಜನಿಕವಾಗಿ ಅನೇಕ ವಿಚಾರಗಳನ್ನು ಹಂಚಿಕೊಳ್ಳಲು ಆಗುವುದಿಲ್ಲ. ತನಿಖೆ ಮುಗಿದ ಬಳಿಕ ಸಾರ್ವಜನಿಕರಿಗೆ ಮಾಹಿತಿ ಗೊತ್ತಾಗುತ್ತದೆ ಎಂದು ಬೆಂಗಳೂರಿನಲ್ಲಿ ಗೃಹ ಇಲಾಖೆ ಸಚಿವ ಜಿ.ಪರಮೇಶ್ವರ್ ಹೇಳಿಕೆ ನೀಡಿದರು.

Share.
Exit mobile version