ಹುಬ್ಬಳ್ಳಿ : ರಾಜ್ಯದಲ್ಲಿ ನಡೆದಿರುವ ಅರಾಜಕತೆ ಬಗ್ಗೆ ಅಧಿವೇಶನದಲ್ಲಿ ಚರ್ಚಿಸುತ್ತೇವೆ. ನಮಗೆ ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಬಗ್ಗೆ ಯಾವುದೇ ಭಯವಿಲ್ಲ. ಸರ್ಕಾರದ ವೈಫಲ್ಯದ ಬಗ್ಗೆ ಅಧಿವೇಶನದಲ್ಲಿ ಗಂಭೀರವಾಗಿ ಚರ್ಚಿಸುತ್ತೇವೆ ಎಂದು ಹುಬ್ಬಳ್ಳಿಯಲ್ಲಿ ಅಂಜಲಿ ನಿವಾಸಕ್ಕೆ ಭೇಟಿ ಬಳಿಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿ ಧಾರವಾಡದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ರಾಜಾ ರೋಷವಾಗಿ ಡ್ರಗ್ಸ್ ಮಾರಾಟದಿಂದ ಕೊಲೆಗಳು ನಡೆಯುತ್ತಿವೆ.ಗೃಹ ಮಂತ್ರಿಗಳು ಗುರು-ನಾಲ್ಕು ಅಧಿಕಾರಿಗಳನ್ನು ಅಮಾನತು ಮಾಡಿದ್ದಾರೆ ಎಂದರು.
ತರಾತುರಿಯಲ್ಲಿ ಹುಬ್ಬಳ್ಳಿಗೆ ಬಂದು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿದ್ದಾರೆ. ತಮ್ಮ ವೈಫಲ್ಯ ಮರೆ ಮಾಚುವ ಉದ್ದೇಶದಿಂದ ಅಮಾನತು ಮಾಡುತ್ತಿದ್ದಾರೆ. ಸರ್ಕಾರದ ವೈಫಲ್ಯ ಪೊಲೀಸ ಅಧಿಕಾರಿಗಳ ಮೇಲೆ ತೀರಿಸಿಕೊಳ್ಳುತ್ತಿದ್ದಾರೆ. ರಾಜಕೀಯ ಒತ್ತಡದಿಂದಾಗಿ ಮುಕ್ತವಾಗಿ ಕಾರ್ಯನಿರ್ವಹಿಸಲು ಆಗುತ್ತಿಲ್ಲ. ಬೆಂಗಳೂರು ಸೇರಿದಂತೆ ರಾಜ್ಯದಲ್ಲೆಡೆ ಗಾಂಜಾ ಅಫೀಮು ಮಾರಾಟ ಮಾಡಲಾಗುತ್ತಿದೆ.ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಅನ್ನೋದು ಡೈಲಾಗ್ ಆಗಿಬಿಟ್ಟಿದೆ ಎಂದರು.
ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಲಿ ಗೃಹ ಸಚಿವರು ರಾಜೀನಾಮೆ ಕೊಟ್ಟು ಬೇರೆ ಇಲಾಖೆ ಪಡೆದುಕೊಳ್ಳಲಿ ಒಬ್ಬ ದಲಿತ ನಾಯಕ ಗೃಹ ಸಚಿವರಾಗಿರುವದರಿಂದ ತುಳಿಯುತ್ತಿದ್ದಾರೆ ವಲ್ಲದ ಮನಸ್ಸಿನಿಂದ ಗ್ರಹ ಇಲಾಖೆ ಜವಾಬ್ದಾರಿ ತೆಗೆದುಕೊಂಡಿದ್ದಾರೆ ಹೃದಯ ಕುಟುಂಬಕ್ಕೆ ರಕ್ಷಣೆ ನೀಡುವುದು ಬಿಟ್ಟು ಆರೋಪಿಗೆ ರಕ್ಷಣೆ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಕಿಡಿ ಕಾರಿದರು.