ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ನೊಂದಿಗೆ ಮೈತ್ರಿಯನ್ನ ತೃಣಮೂಲ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ತಳ್ಳಿಹಾಕಿದ ಸ್ವಲ್ಪ ಸಮಯದ ನಂತರ, ಆಮ್ ಆದ್ಮಿ ಪಕ್ಷ (AAP) ಮೈತ್ರಿಕೂಟದ ಜೊತೆಗೆ ತಮಗೆ ಯಾವುದೇ ಸಮಸ್ಯೆ ಇಲ್ಲ ಎಂದಿದ್ದಾರೆ.
ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್, “ಆಮ್ ಆದ್ಮಿ ಪಕ್ಷಕ್ಕೆ ಇಂಡಿಯಾ ಮೈತ್ರಿಕೂಟದಂದಿಗೆ ಯಾವುದೇ ಸಮಸ್ಯೆ ಇಲ್ಲ. ಇನ್ನು 13 ಲೋಕಸಭಾ ಸ್ಥಾನಗಳಿಗೆ 40 ಅಭ್ಯರ್ಥಿಗಳನ್ನು ಶಾರ್ಟ್ಲಿಸ್ಟ್ ಮಾಡಿದೆ. ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಮೊದಲು ನಾವು ಸಮೀಕ್ಷೆ ನಡೆಸುತ್ತಿದ್ದೇವೆ” ಎಂದು ಹೇಳಿದ್ದಾರೆ.
ಬಂಗಾಳದಲ್ಲಿ ಕಾಂಗ್ರೆಸ್ನೊಂದಿಗೆ ಯಾವುದೇ ಮೈತ್ರಿ ಇಲ್ಲ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಮೈತ್ರಿಯ ಬಗ್ಗೆ ಯಾವುದೇ ನಿರ್ಧಾರವನ್ನ ಚುನಾವಣೆಯ ನಂತರ ತೆಗೆದುಕೊಳ್ಳಲಾಗುವುದು ಎಂದು ಮಮತಾ ಬ್ಯಾನರ್ಜಿ ಸ್ಫೋಟಕ ಘೋಷಣೆ ಮಾಡಿದ ಕೆಲವೇ ಗಂಟೆಗಳ ನಂತರ ಈ ಹೇಳಿಕೆಗಳು ಬಂದಿವೆ.
BREAKING : ಜ್ಞಾನವಾಪಿ ಮಸೀದಿ ಪ್ರಕರಣ : ‘ASI ಸಮೀಕ್ಷೆ’ ವರದಿ ಬಹಿರಂಗ, ಹಿಂದೂ-ಮುಸ್ಲಿಂ ಎರಡೂ ಕಡೆಯವರಿಗೆ ಲಭ್ಯ
ಬೆಳಿಗ್ಗೆ ದಾಳಿಂಬೆ ಹಣ್ಣು ತಿಂದ್ರೆ ಆರೋಗ್ಯಕ್ಕೆ ಒಳ್ಳೆಯದು… ಏನೆಲ್ಲಾ ಪ್ರಯೋಜನವಿದೆ… ಇಲ್ಲಿದೆ ಮಾಹಿತಿ…