ಬೆಂಗಳೂರು : ನಾವು ಗ್ಯಾರಂಟಿ ಯೋಜನೆಗಳಿಗೆ ಕೇಂದ್ರ ಸರ್ಕಾರದ ಬಳಿ ಹಣ ಕೇಳಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್. ಅಶೋಕ್, ಬಸವರಾಜ ಬೊಮ್ಮಾಯಿ, ಯಡಿಯೂರಪ್ಪ ಸುಳ್ಳು ಹೇಳುತ್ತಿದ್ದಾರೆ. ಬಿಜೆಪಿ ಅಂದ್ರೆ ಸುಳ್ಳಿನ ಫ್ಯಾಕ್ಟರಿ. ಇವರ ಜೊತೆಗೆ ಜೆಡಿಎಸ್ ನವರೂ ಸೇರಿಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಕೇಂದ್ರ ಸರ್ಕಾರ ಕರ್ನಾಟಕಕ್ಕೆ ದೊಡ್ಡ ಅನ್ಯಾಯ ಮಾಡಿದೆ. ನಾವು ಮನವಿ ಸಲ್ಲಿಸಿ ಏಳು ತಿಂಗಳಾದ್ರು ಪರಿಹಾರ ಕೊಟ್ಟಿಲ್ಲ. ಹಾಗಾಗಿ ನಾವು ಸುಪ್ರೀಂಕೋರ್ಟ್ ಗೆ ಹೋಗಬೇಕಾಯಿತು. ಬರ ಬಂದಾಗ ಪರಿಹಾರ ಕೊಡುವುದು ಅವರ ಕರ್ತವ್ಯ, ಭಿಕ್ಷೆ ಅಲ್ಲ ಎಂದು ಹೇಳಿದ್ದಾರೆ.