ಕೊಪ್ಪಳ : ಬಿಜೆಪಿ ಪಕ್ಷಕ್ಕೆ ಗುಡ್ ಬೈ ಹೇಳಿ ಎಂದು ಸಿಪಿ ಯೋಗೇಶ್ವರ್ ಅವರು ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಕಾಂಗ್ರೆಸ್ ಪಕ್ಷದ ಬಾವುಟ ನೀಡಿ ಅವರನ್ನು ಸ್ವಾಗತಿಸಿದರು. ಈ ಕುರಿತಾಗಿ ಸಚಿವ ದಿನೇಶ್ ಗುಂಡೂರಾವ್ ಅವರು ನಾವು ಯಾವುದೇ ಆಪರೇಷನ್ ಕಮಲ ಮಾಡಿಲ್ಲ ನಮ್ಮ ಪಕ್ಷದ ಸಿದ್ಧಾಂತ ಒಪ್ಪಿ ಅವರಾಗೆ ಬಂದಿದ್ದಾರೆ ಎಂದು ತಿಳಿಸಿದರು.
ಕೊಪ್ಪಳದಲ್ಲಿ ಚಿಕ್ಕಮ್ಯಾಗೇರಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಆರೋಗ್ಯ ಸಮಸ್ಯೆ ತಡೆಗಟ್ಟುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಾವು ಯಾವುದೇ ಆಪರೇಷನ್ ಮಾಡಿಲ್ಲ. ಅವರೇ ಒಪ್ಪಿಕೊಂಡು ಬಂದಿದ್ದಾರೆ. ಮೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲುತ್ತದೆ. ಬಿಜೆಪಿಯವರು ಮಾಡಬಾರದು ಮಾಡಿದ್ದಾರೆ. ಅವರು ನಮಗೆ ಪಾಠ ಮಾಡಬೇಕಾಗಿಲ್ಲ ಎಂದು ಕಿಡಿಕಾರಿದ್ದಾರೆ.
ಸಿ.ಪಿ ಯೋಗೇಶ್ವರ್ ಕಾಂಗ್ರೆಸ್ ಪಕ್ಷದವರು, ಮರಳಿ ಪಕ್ಷ ಸೇರಿದ್ದಾರೆ. ಪಕ್ಷದ ಅಭ್ಯರ್ಥಿಯಾದರೆ ಸಂತೋಷ. ಅದು ಉಪಮುಖ್ಯಮಂತ್ರಿಗಳ ಜವಾಬ್ದಾರಿ ಕ್ಷೇತ್ರ. ಇನ್ನು ಆರೋಗ್ಯ ಕೇಂದ್ರಗಳಲ್ಲಿ ಗುತ್ತಿಗೆ ಆಧಾರದಲ್ಲಿ ವೈದ್ಯರ ನೇಮಕ ಮಾಡಿಕೊಳ್ಳುತ್ತೇವೆ. ಆರೋಗ್ಯ ಇಲಾಖೆಯಿಂದ ಉಚಿತವಾಗಿ ಮನೆಮನೆಗೆ ಮಾತ್ರೆ, ಚಿಕಿತ್ಸೆ ನೀಡುವ ಯೋಜನೆ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ