ಬೆಂಗಳೂರು : ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಅನುದಾನ ಹಂಚಿಕೆ ವಿಚಾರದಲ್ಲಿ ಮಲತಾಯಿ ಧೋರಣೆ ಆಗುತ್ತಿದೆ ಎಂದು ವಿರೋಧಿಸಿ ಇತ್ತೀಚಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ 136 ಶಾಸಕರು ದೆಹಲಿಯ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸಿದ್ದರು.
ಇದೀಗ ಗೃಹ ಸಚಿವ ಜಿ ಪರಮೇಶ್ವರ್ ಕೂಡ ಕೇಂದ್ರದ ವಿರುದ್ಧ ಕಿಡಿ ಕಾರಿದ್ದು ಕೇಂದ್ರದಿಂದ ಒಂದೇ ಒಂದು ರೂಪಾಯಿ ಕೂಡ ಬಂದಿಲ್ಲ ಎಂದು ತಿಳಿಸಿದರು.ಬೆಂಗಳೂರಿನಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ಸುದ್ಧಿಗಾರರೊಂದಿಗೆ ಮಾತನಾಡಿ, ಸಂಸತ್ ನಲ್ಲಿ ಸಚಿವೆ ನಿರ್ಮಲಾ ಸೀತಾರಾಮನ ಸುಳ್ಳು ಹೇಳಿದ್ದಾರೆ ಕೇಂದ್ರದಿಂದ ನಮಗೆ ಒಂದೇ ಒಂದು ರೂಪಾಯಿ ಬಂದಿಲ್ಲ ಎಂದು ಕೇಂದ್ರದ ವಿರುದ್ಧ ಆಕ್ರೋಶ ಹೊರಹಕಿದ್ದಾರೆ.
ಕರ್ನಾಟಕಕ್ಕೆ ಅನುದಾನ ನೀಡಿದ್ದೇವೆ ಎಂದು ನಿರ್ಮಲ ಸೀತಾರಾಮನ್ ಸುಳ್ಳು ಹೇಳಿದ್ದಾರೆ. ಅಪರಾಧ್ಯಾನ ಮಾಡಿ ಹೋದರು ಹಣ ಬಿಡುಗಡೆ ಮಾಡಿಲ್ಲ. ನಮಗೆ ಕೊಡಬೇಕಾದ ಏನ್ ಡಿ ಆರ್ ಎಫ್ ಹಣ ಕೊಡಿ ಎಂದು ಬೆಂಗಳೂರಿನಲ್ಲಿ ಗೃಹ ಇಲಾಖೆ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದರು.