ಬಳ್ಳಾರಿ: ನಾವು ಎಲ್ಲಿಯೂ ಗೃಹಲಕ್ಷ್ಮಿ ಹಣವನ್ನು ಪ್ರತಿ ತಿಂಗಳೂ ಕೊಡ್ತೀವಿ ಅಂತ ಹೇಳಿಲ್ಲ ಎಂಬುದಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳುವ ಮೂಲಕ ಉಲ್ಟಾ ಹೊಡೆದಿದ್ದಾರೆ.
ನಗರದಲ್ಲಿನ ಕಾಂಗ್ರೆಸ್ ಸಾಧನಾ ಸಮಾವೇಶದ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರಿಗೆ ಗೃಹ ಲಕ್ಷ್ಮೀ ಹಣ ಯಾವಾಗ ಬರುತ್ತೆ ಎಂಬುದಾಗಿ ಪತ್ರಕರ್ತರೊಬ್ಬರು ಪ್ರಶ್ನಿಸಿದರು. ಆಗ ನೋಡ್ರಿ ತಿಂಗಳು ತಿಂಗಳು ಹಣ ಕೊಡ್ತೀವಿ ಅಂತ ನಾವು ಹೇಳಿಲ್ಲ. ನೀವು ಟ್ಯಾಕ್ಸ್ ಕಟ್ಟುತ್ತಾ ಇರಬೇಕು. ನಾವು ದುಡ್ಡು ಕೊಡ್ತಾ ಇರಬೇಕು ಎಂದರು.
ಈಗ ಗುತ್ತಿಗೆ ಕೆಲಸ ಮಾಡುವವರಿಗೆ ನಾಳೆಯೇ ಹಣ ಬಂದು ಬಿಡುತ್ತಾ? ಎರಡು, ಮೂರು ಇಲ್ಲವೇ ಐದು ವರ್ಷ ಆಗುತ್ತೆ ಅಲ್ವ? ಅದೇ ರೀತಿ ಗೃಹಲಕ್ಷ್ಮೀ ಯೋಜನೆಯ ಹಣ ಯಜಮಾನಿಯರಿಗೆ ಬಂದಾಗ ಬರುತ್ತೆ ಅಂತ ಹಾರಿಕೆ ಉತ್ತರ ನೀಡಿದರು.
ಗೃಹಲಕ್ಷ್ಮಿ ಹಣ ತಿಂಗಳು ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್#DKShivakumar #Congress #Gruhalakshmi #Karnataka #Politics pic.twitter.com/NaWjCdoa0m
— PublicTV (@publictvnews) May 19, 2025
ಸಾರ್ವಜನಿಕರೇ ಗಮನಿಸಿ : ನಿಮ್ಮ `ಮೊಬೈಲ್’ ಕಳ್ಳತನವಾದ್ರೆ ಚಿಂತೆಬೇಡ, ಜಸ್ಟ್ ಈ ರೀತಿ ಮಾಡಿ.!