Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ವಾಯುವ್ಯ ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ದಾಳಿಗೆ 13 ಸೈನಿಕರು ಬಲಿ

28/06/2025 2:56 PM

BIG NEWS: ಹೀಗಿದೆ ‘ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ-2025’ರ ಕಾರ್ಯಕ್ರಮದ ಸಂಪೂರ್ಣ ವಿವರ | Mysore Dasara 2025

28/06/2025 2:54 PM

ಹೈಡ್ರೋಜನ್ ವಾಹನಗಳಿಗೆ ‘ದ್ವಿ-ಬಣ್ಣದ ನಂಬರ್ ಪ್ಲೇಟ್’ ; ಕೇಂದ್ರ ಸರ್ಕಾರ ಮಹತ್ವದ ಪ್ರಸ್ತಾಪ

28/06/2025 2:46 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಮ್ಮಲ್ಲಿ ಇರುವುದು ಒಬ್ಬರೇ ಸಿಎಂ ಅದು ‘‘ಸ್ಟ್ರಾಂಗ್ ಸಿಎಂ’’: ಪ್ರಧಾನಿ ಮೋದಿಗೆ ‘ಸಿದ್ಧರಾಮಯ್ಯ ತಿರುಗೇಟು’
KARNATAKA

ನಮ್ಮಲ್ಲಿ ಇರುವುದು ಒಬ್ಬರೇ ಸಿಎಂ ಅದು ‘‘ಸ್ಟ್ರಾಂಗ್ ಸಿಎಂ’’: ಪ್ರಧಾನಿ ಮೋದಿಗೆ ‘ಸಿದ್ಧರಾಮಯ್ಯ ತಿರುಗೇಟು’

By kannadanewsnow0919/03/2024 5:50 PM

ಬೆಂಗಳೂರು: ಪ್ರಧಾನಿ ಮೋದಿ ಅವರೇ, ಕಾಂಗ್ರೆಸ್ ಪಕ್ಷದಲ್ಲಿ ಸೂಪರ್ ಸಿಎಂ, ಶ್ಯಾಡೋ ಸಿಎಂ ಗಳಿದ್ದಾರೆ ಎಂದು ಶಿವಮೊಗ್ಗದ ನಿಮ್ಮ ಪಕ್ಷದ ಸಭೆಯಲ್ಲಿ ನೀವು ಗೇಲಿ ಮಾಡಿದ್ದೀರಿ! ನಮ್ಮಲ್ಲಿ ಸೂಪರ್ರೂ ಇಲ್ಲ, ಶ್ಯಾಡೋನೂ ಇಲ್ಲ, ಇರುವುದು ಒಬ್ಬರೇ ಸಿಎಂ ಅದು ‘‘ಸ್ಟ್ರಾಂಗ್ ಸಿಎಂ’’, ನಿಮ್ಮ ಹಾಗೆ ನಾನು ‘‘ವೀಕ್ ಪಿಎಂ’’ ಅಲ್ಲ ಎಂಬುದಾಗಿ ಮೋದಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿರುಗೇಟು ನೀಡಿದ್ದಾರೆ.

ಇಂದು ಎಕ್ಸ್ ಮಾಡಿರುವಂತ ಅವರು, ಮೋದಿಯವರೇ ನಿಮ್ಮನ್ನು ನೀವು 56 ಇಂಚಿನ ಎದೆಯುಳ್ಳವನು ಎಂದು ಬಣ್ಣಿಸಿಕೊಳ್ಳುತ್ತೀರಿ, ನಿಮ್ಮ ಅಭಿಮಾನಿಗಳು ನಿಮ್ಮನ್ನು ವಿಶ್ವಗುರು ಎಂದು ಕೊಂಡಾಡುತ್ತಾರೆ. ಆದರೆ ನೀವೊಬ್ಬ ‘‘ವೀಕ್ ಪಿಎಂ’’ ಎಂದು ಮತ್ತೆ ಮತ್ತೆ ತೋರಿಸಿಕೊಡುತ್ತಿದ್ದೀರಿ. ಬಿ.ಎಸ್ ಯಡಿಯೂರಪ್ಪನವರು ಒಂದು ಕಾಲದಲ್ಲಿ ನಿಮ್ಮ ನಾಯಕತ್ವದ ವಿರುದ್ಧವೇ ಬಂಡಾಯ ಎದ್ದವರು, ನಿಮ್ಮನ್ನು ಹೀನಾಯವಾಗಿ ನಿಂದಿಸಿದವರು. ಅಂತಹವರ ಕಾಲಿಗೆ ಬಿದ್ದು ಮತ್ತೆ ಪಕ್ಷಕ್ಕೆ ಕರೆತಂದು ಮೆರವಣಿಗೆ ಮಾಡುವ ಮೂಲಕ ನೀವೊಬ್ಬ ‘‘ವೀಕ್ ಪಿಎಂ’’ ಎಂದು ನೀವೇ ತೋರಿಸಿಕೊಟ್ಟಂತಾಗಲಿಲ್ಲವೇ? ಎಂದು ಕೇಳಿದ್ದಾರೆ.

ಸನ್ಮಾನ್ಯ ಪ್ರಧಾನಿ @narendramodi ಅವರೇ, ಕಾಂಗ್ರೆಸ್ ಪಕ್ಷದಲ್ಲಿ ಸೂಪರ್ ಸಿಎಂ, ಶ್ಯಾಡೋ ಸಿಎಂ ಗಳಿದ್ದಾರೆ ಎಂದು ಶಿವಮೊಗ್ಗದ ನಿಮ್ಮ ಪಕ್ಷದ ಸಭೆಯಲ್ಲಿ ನೀವು ಗೇಲಿ ಮಾಡಿದ್ದೀರಿ! ನಮ್ಮಲ್ಲಿ ಸೂಪರ್ರೂ ಇಲ್ಲ, ಶ್ಯಾಡೋನೂ ಇಲ್ಲ, ಇರುವುದು ಒಬ್ಬರೇ ಸಿಎಂ ಅದು ‘‘ಸ್ಟ್ರಾಂಗ್ ಸಿಎಂ’’, ನಿಮ್ಮ ಹಾಗೆ ನಾನು ‘‘ವೀಕ್ ಪಿಎಂ’’ ಅಲ್ಲ.

ಮೋದಿಯವರೇ…

— Siddaramaiah (@siddaramaiah) March 19, 2024

ಕರ್ನಾಟಕದಲ್ಲಿ ನಿಮ್ಮ ನಾಯಕತ್ವದ ವಿರುದ್ಧ ಅರ್ಧ ಡಜನ್ ಬಿಜೆಪಿ ನಾಯಕರು ಬಂಡೆದಿದ್ದಾರೆ. ಟಿಕೆಟ್ ಪಡೆಯಲು ಅಸಮರ್ಥರಾದ ನಿಮ್ಮ ಪಕ್ಷದ ನಾಯಕರು ಹಾದಿ ಬೀದಿಲಿ ಹೊಡೆದಾಡಿಕೊಳ್ಳುತ್ತಿದ್ದಾರೆ, ಪರಸ್ಪರ ಕೆಸರೆರಚಾಟ ನಡೆಸುತ್ತಿದ್ದಾರೆ. ನಿಮ್ಮ ಯಾವ ಮನವಿಗೂ ಅವರು ಕಿವಿಕೊಟ್ಟಿಲ್ಲ. ಇವರಲ್ಲಿ ಕೆಲವರು ನಮ್ಮನ್ನೂ ಸಂಪರ್ಕಿಸುತ್ತಿದ್ದಾರೆ. ಶಿಸ್ತಿನ ಪಕ್ಷದಲ್ಲಿ ಇದೆಂತಹ ಅಶಿಸ್ತಿನ ತಾಂಡವ. ಇದಕ್ಕೆಲ್ಲ ಕಾರಣ ನೀವೊಬ್ಬ ‘‘ವೀಕ್ ಪಿಎಂ’’ ಆಗಿರುವುದಲ್ಲವೇ ನರೇಂದ್ರ ಮೋದಿ? ಶಿವಮೊಗ್ಗದಲ್ಲಿ ನೀವು ಪಕ್ಷದ ಪ್ರಚಾರ ಸಭೆ ನಡೆಸುತ್ತಿದ್ದಾಗ ಬಂಡುಕೋರ ನಾಯಕ ಈಶ್ವರಪ್ಪನವರು ಕೂಗಳತೆ ದೂರದ ತಮ್ಮ ಮನೆಯಲ್ಲಿದ್ದರೂ ಕ್ಯಾರೇ ಅನ್ನದೆ ಸಭೆಗೆ ಗೈರು ಹಾಜರಾಗಿದ್ದರು. ಇಷ್ಟು ಮಾತ್ರವಲ್ಲ ನಿರಂತರವಾಗಿ BJP ನಾಯಕತ್ವದ ವಿರುದ್ಧ ಕಿಡಿಕಾರುತ್ತಿದ್ದರು. ಅವರ ವಿರುದ್ಧ ಕ್ರಮಕೈಗೊಳ್ಳಲಾಗದ ನೀವು ‘‘ವೀಕ್ ಪಿಎಂ’’ ಅಲ್ಲದೆ ಮತ್ತೇನು? ಎಂದು ವಾಗ್ಧಾಳಿ ನಡೆಸಿದ್ದಾರೆ.

ಕರ್ನಾಟಕದಲ್ಲಿ ನಿಮ್ಮ ನಾಯಕತ್ವದ ವಿರುದ್ಧ ಅರ್ಧ ಡಜನ್ @BJP4India ನಾಯಕರು ಬಂಡೆದಿದ್ದಾರೆ. ಟಿಕೆಟ್ ಪಡೆಯಲು ಅಸಮರ್ಥರಾದ ನಿಮ್ಮ ಪಕ್ಷದ ನಾಯಕರು ಹಾದಿ ಬೀದಿಲಿ ಹೊಡೆದಾಡಿಕೊಳ್ಳುತ್ತಿದ್ದಾರೆ, ಪರಸ್ಪರ ಕೆಸರೆರಚಾಟ ನಡೆಸುತ್ತಿದ್ದಾರೆ. ನಿಮ್ಮ ಯಾವ ಮನವಿಗೂ ಅವರು ಕಿವಿಕೊಟ್ಟಿಲ್ಲ. ಇವರಲ್ಲಿ ಕೆಲವರು ನಮ್ಮನ್ನೂ ಸಂಪರ್ಕಿಸುತ್ತಿದ್ದಾರೆ.…

— Siddaramaiah (@siddaramaiah) March 19, 2024

ನಮ್ಮದು ಆಂತರಿಕ ಪ್ರಜಾಪ್ರಭುತ್ವ ಇರುವ ಪಕ್ಷ, ಮುಖ್ಯಮಂತ್ರಿ ಸ್ಥಾನಕ್ಕೆ ಅರ್ಹರಾದವರು ಹಲವು ಮಂದಿ ಇದ್ದಾರೆ. ನಿಮ್ಮ ಪಕ್ಷದ ಕತೆ ಏನು? ವಿಶ್ವದಲ್ಲಿಯೇ ಅತ್ಯಂತ ಹೆಚ್ಚು ಸದಸ್ಯರನ್ನು ಹೊಂದಿದ್ದೇವೆ ಎಂದು ಕೊಚ್ಚಿಕೊಳ್ಳುತ್ತಿರುವ ನಿಮ್ಮ ಬಿಜೆಪಿ ಪಕ್ಷದಲ್ಲಿ ಪಿಎಂ ಆಗುವ ಅರ್ಹತೆ ಇರುವ ಒಬ್ಬ ನಾಯಕನೂ ಇಲ್ಲವಲ್ಲಾ..!! ಅಂತಹ ನಾಯಕರೇ ಇಲ್ವಾ? ಕುರ್ಚಿ ಕಳೆದುಕೊಳ್ಳುವ ಭಯದಿಂದ ಅಂತಹ ನಾಯಕರನ್ನು ಬೆಳೆಯಲು ನೀವೇ ಬಿಡುತ್ತಿಲ್ವಾ ನರೇಂದ್ರ ಮೋದಿ ಅವರೇ? ಎಂದು ಕೇಳಿದ್ದಾರೆ.

ನಮ್ಮದು ಆಂತರಿಕ ಪ್ರಜಾಪ್ರಭುತ್ವ ಇರುವ ಪಕ್ಷ, ಮುಖ್ಯಮಂತ್ರಿ ಸ್ಥಾನಕ್ಕೆ ಅರ್ಹರಾದವರು ಹಲವು ಮಂದಿ ಇದ್ದಾರೆ. ನಿಮ್ಮ ಪಕ್ಷದ ಕತೆ ಏನು? ವಿಶ್ವದಲ್ಲಿಯೇ ಅತ್ಯಂತ ಹೆಚ್ಚು ಸದಸ್ಯರನ್ನು ಹೊಂದಿದ್ದೇವೆ ಎಂದು ಕೊಚ್ಚಿಕೊಳ್ಳುತ್ತಿರುವ ನಿಮ್ಮ @BJP4India ಪಕ್ಷದಲ್ಲಿ ಪಿಎಂ ಆಗುವ ಅರ್ಹತೆ ಇರುವ ಒಬ್ಬ ನಾಯಕನೂ ಇಲ್ಲವಲ್ಲಾ..!!
ಅಂತಹ ನಾಯಕರೇ…

— Siddaramaiah (@siddaramaiah) March 19, 2024

ಗಮನಿಸಿ: ಬೆಂಗಳೂರು-ಮೈಸೂರು ‘ಮೆಮು ವಿಶೇಷ ರೈಲು’ ನಾಯಂಡಹಳ್ಳಿ ನಿಲ್ದಾಣದಲ್ಲಿ ನಿಲುಗಡೆ

ಕೂದಲು ಉದುರುವ ಸಮಸ್ಯೆಗೆ ‘ಈ ಪದಾರ್ಥ’ ಶಾಶ್ವತ ಪರಿಹಾರ, ಏನದು.?

ನಮ್ಮಲ್ಲಿ ಇರುವುದು ಒಬ್ಬರೇ ಸಿಎಂ ಅದು ‘‘ಸ್ಟ್ರಾಂಗ್ ಸಿಎಂ’’: ಮೋದಿಗೆ ಸಿದ್ಧರಾಮಯ್ಯ ತಿರುಗೇಟು We have only one CM and that is a 'strong CM': Siddaramaiah to PM Modi
Share. Facebook Twitter LinkedIn WhatsApp Email

Related Posts

BIG NEWS: ಹೀಗಿದೆ ‘ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ-2025’ರ ಕಾರ್ಯಕ್ರಮದ ಸಂಪೂರ್ಣ ವಿವರ | Mysore Dasara 2025

28/06/2025 2:54 PM3 Mins Read

ಬೆಂಗಳೂರಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದವರಿಗೆ BMTC ಶಾಕ್: 5,706 ಮಂದಿಯಿಂದ 12.64 ಲಕ್ಷ ದಂಡ ವಸೂಲಿ

28/06/2025 2:36 PM2 Mins Read

BREAKING : ರಾಜ್ಯದಲ್ಲಿ CM ಬದಲಾವಣೆ ಇಲ್ಲ, ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿರ್ತಾರೆ : ಯತೀಂದ್ರ ಸಿದ್ದರಾಮಯ್ಯ

28/06/2025 2:08 PM1 Min Read
Recent News

BREAKING : ವಾಯುವ್ಯ ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ದಾಳಿಗೆ 13 ಸೈನಿಕರು ಬಲಿ

28/06/2025 2:56 PM

BIG NEWS: ಹೀಗಿದೆ ‘ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ-2025’ರ ಕಾರ್ಯಕ್ರಮದ ಸಂಪೂರ್ಣ ವಿವರ | Mysore Dasara 2025

28/06/2025 2:54 PM

ಹೈಡ್ರೋಜನ್ ವಾಹನಗಳಿಗೆ ‘ದ್ವಿ-ಬಣ್ಣದ ನಂಬರ್ ಪ್ಲೇಟ್’ ; ಕೇಂದ್ರ ಸರ್ಕಾರ ಮಹತ್ವದ ಪ್ರಸ್ತಾಪ

28/06/2025 2:46 PM

ಬೆಂಗಳೂರಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದವರಿಗೆ BMTC ಶಾಕ್: 5,706 ಮಂದಿಯಿಂದ 12.64 ಲಕ್ಷ ದಂಡ ವಸೂಲಿ

28/06/2025 2:36 PM
State News
KARNATAKA

BIG NEWS: ಹೀಗಿದೆ ‘ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ-2025’ರ ಕಾರ್ಯಕ್ರಮದ ಸಂಪೂರ್ಣ ವಿವರ | Mysore Dasara 2025

By kannadanewsnow0928/06/2025 2:54 PM KARNATAKA 3 Mins Read

ಬೆಂಗಳೂರು: ವಿಜ್ರಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು. ಅನಗತ್ಯವಾಗಿ ಹಣ ಖರ್ಚು ಮಾಡುವುದು ವೈಭವ ಅಲ್ಲ. ಜನರ, ಪ್ರವಾಸಿಗರ…

ಬೆಂಗಳೂರಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದವರಿಗೆ BMTC ಶಾಕ್: 5,706 ಮಂದಿಯಿಂದ 12.64 ಲಕ್ಷ ದಂಡ ವಸೂಲಿ

28/06/2025 2:36 PM

BREAKING : ರಾಜ್ಯದಲ್ಲಿ CM ಬದಲಾವಣೆ ಇಲ್ಲ, ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿರ್ತಾರೆ : ಯತೀಂದ್ರ ಸಿದ್ದರಾಮಯ್ಯ

28/06/2025 2:08 PM

BREAKING : ಸೆ.22ಕ್ಕೆ ಮೈಸೂರು ದಸರಾಗೆ ಚಾಲನೆ, ಅ.2 ರಂದು ಜಂಬೂ ಸವಾರಿ : ಸಿಎಂ ಸಿದ್ದರಾಮಯ್ಯ ಹೇಳಿಕೆ

28/06/2025 1:50 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.