Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಾಸಿಕ್ ಬಿಪಿಒ ಮತಾಂತರ ವಿವಾದ: ದೇಶಾದ್ಯಂತದ ಉದ್ಯೋಗಿಗಳಿಗೆ ಟಿ‌ಸಿಎಸ್ ಕಟ್ಟುನಿಟ್ಟಿನ ಸಂದೇಶ !

15/04/2026 8:03 PM

‘ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ-2026’ ಕ್ಕೆ ರಾಜ್ಯಪಾಲರ ಅಂಕಿತ

15/04/2026 8:01 PM

ರಾಜ್ಯ ಪ್ರಶಸ್ತಿಗಳ ಘೋಷಣೆ: ದೇವನೂರು ಮಹಾದೇವ ಅವರಿಗೆ ‘ಪಂಪ ಪ್ರಶಸ್ತಿ’, ಸಿದ್ದರಾಮ ಶರಣರಿಗೆ ‘ಬಸವ ಪುರಸ್ಕಾರ’

15/04/2026 7:59 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಂವಿಧಾನ ರಕ್ಷಣೆಗೆ, ದೇಶದ ಐಕ್ಯತೆಗೆ ನಾವು ಹೋರಾಟ ಮಾಡಬೇಕು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
KARNATAKA

ಸಂವಿಧಾನ ರಕ್ಷಣೆಗೆ, ದೇಶದ ಐಕ್ಯತೆಗೆ ನಾವು ಹೋರಾಟ ಮಾಡಬೇಕು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

By kannadanewsnow0926/01/2025 2:31 PM

ಬೆಂಗಳೂರು: ದೇಶದ ಸಂವಿಧಾನ ರಕ್ಷಣೆ ಹಾಗೂ ಐಕ್ಯತೆಗೆ ನಾವು ಹೋರಾಟ ಮಾಡಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದರು.

76ನೇ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಕೆಪಿಸಿಸಿ ಕಚೇರಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಧ್ವಜಾರೋಹಣ ನೆರವೇರಿಸಿದರು. ನಂತರ ಮಾತನಾಡಿದ ಅವರು ಹೇಳಿದ್ದಿಷ್ಟು, 76ನೇ ಗಣರಾಜ್ಯೋತ್ಸವ ಬಹಳ ಮಹತ್ವದ್ದಾಗಿದೆ. ಸಂವಿಧಾನ ರಕ್ಷಣೆ ಹಾಗೂ ಸಂವಿಧಾನದ ಪ್ರಕಾರವಾಗಿ ನಡೆದುಕೊಳ್ಳುವುದು ಅತಿ ಮುಖ್ಯ. ಆದರೆ ಈಗಿರುವ ಕೇಂದ್ರ ಸರ್ಕಾರ ಸಂವಿಧಾನದ ಎಲ್ಲಾ ಮೌಲ್ಯಗಳನ್ನು ಮೂಲೆಗುಂಪು ಮಾಡುತ್ತಿದೆ. ಇದರಿಂದ ನಾಗರೀಕರಿಗೆ ಸಿಗಬೇಕಾದ ಮೂಲಭೂತ ಹಕ್ಕುಗಳು, ಅದರಲ್ಲೂ ಮಹಿಳೆಯರಿಗೆ ವಿಶೇಷವಾಗಿ ಸಿಗುವ ಸ್ವಾತಂತ್ರ್ಯ ಮೊಟಕುಗೊಳಿಸಲಾಗುತ್ತಿದೆ ಎಂದರು.

ದೇಶಕ್ಕೆ ಸ್ವಾತಂತ್ರ್ಯ ಹಾಗೂ ಸಂವಿಧಾನ ಸಿಕ್ಕ ನಂತರ ನಮಗೆ ವಿಶೇಷವಾದ ಸ್ಥಾನಮಾನ ಸಿಕ್ಕಿದೆ. ಇದು ಅನೇಕರಿಗೆ ಗೊತ್ತಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರ ಮನೆ ಬಾಗಿಲಿಗೆ ಹೋಗಿ ಮತ ಕೇಳಲಾಗುತ್ತಿದೆ. ಇದು ಕಾಂಗ್ರೆಸ್ ಪಕ್ಷದ ಕೊಡುಗೆ. ಬಾಬಾ ಸಾಹೇಬ್ ಅಂಬೇಡ್ಕರ್ ಹಾಗೂ ಪಂಡಿತ್ ಜವಹಾರ್ ಲಾಲ್ ನೆಹರು ಅವರ ಕೊಡುಗೆ ಎಂದರು.

ಇವರುಗಳ ಕೊಡುಗೆಯಿಂದ ನಾವು ಈ ದೇಶವನ್ನು ಸ್ವಾತಂತ್ರ್ಯವಾಗಿ ಉಳಿಸಿ, ದೇಶದ ಐಕ್ಯತೆಗಾಗಿ ಹೋರಾಟ ಮಾಡುತ್ತಿದ್ದೇವೆ. ಆದರೆ ದುಃಖದ ವಿಚಾರ ಎಂದರೆ, ಅಮಿತ್ ಶಾರಂತಹ ದೇಶದ ಪ್ರಮುಖ ನಾಯಕರು ಸಂವಿಧಾನವನ್ನು ಹಿಯ್ಯಾಳಿಸುತ್ತಿದ್ದಾರೆ. ಸಂವಿಧಾನ ರಚಿಸಿದವರ ಬಗ್ಗೆ ಟೀಕೆ ಮಾಡಿ ಅವರಿಗೆ ಅಗೌರವ ತೋರುತ್ತಿದ್ದಾರೆ ಎಂದು ತಿಳಿಸಿದರು.

ಪ್ರತಿಯೊಂದಕ್ಕೂ ಅಂಬೇಡ್ಕರ್ ಹೆಸರು ಜಪ ಮಾಡುತ್ತೀರಿ. ಅದರ ಬದಲು ದೇವರ ಹೆಸರು ಜಪಿಸಿದ್ದರೆ 7 ಜನ್ಮದಲ್ಲಿ ಸ್ವರ್ಗ ಸಿಗುತ್ತಿತ್ತು ಎಂದು ಸಂಸತ್ತಿನಲ್ಲಿ ಅಮಿತ್ ಶಾ ಅವರು ಹೇಳಿದ್ದಾರೆ. ಈ ದೇಶದ ನರಕದಲ್ಲಿದ್ದಾಗ ಇವರು ದೇಶಕ್ಕೆ ಸ್ವಾತಂತ್ರ್ಯ ತಂದುಕೊಡಲಿಲ್ಲ ಎಂದರು.

ಮೋದಿ ಅವರು ತಮ್ಮ ಭಾಷಣದಲ್ಲಿ ದೇಶವನ್ನು ಆರ್ಥಿಕವಾಗಿ ಮೂರನೇ ಸ್ಥಾನಕ್ಕೆ ತರಲು ಶಕ್ತಿ ತುಂಬುತ್ತಿದ್ದೇನೆ ಎಂದು ಹೇಳಿದ್ದಾರೆ. ಆದರೆ ದೇಶ 5ನೇ ಸ್ಥಾನದಿಂದ ಮುಂದಕ್ಕೆ ಹೋಗಲು ಸಾಧ್ಯವಾಗುತ್ತಿಲ್ಲ. ಯುಪಿಎ ಸರ್ಕಾರದ ಶ್ರಮದಿಂದ ದೇಶವನ್ನು ಆರ್ಥಿಕವಾಗಿ ನಾಲ್ಕನೇ ಸ್ಥಾನಕ್ಕೆ ತರಲಾಗಿತ್ತು. ಆದರೆ ಈಗಿನ ಸರ್ಕಾರಕ್ಕೆ ನಾಲ್ಕನೇ ಸ್ಥಾನಕ್ಕೆ ತರಲೂ ಸಾಧ್ಯವಾಗುತ್ತಿಲ್ಲ ಎಂದು ಹೇಳಿದರು.

ಕೇಂದ್ರ ಸರ್ಕಾರ ದೇಶದ ಪ್ರಜೆಗಳನ್ನು ಬಹಳ ಹೀನಾಯವಾಗಿ ನೋಡುತ್ತಿದೆ. ಅತಿ ಶ್ರೀಮಂತರು ಹಾಗೂ ಪ್ರಭಾವಿ ವ್ಯಕ್ತಿಗಳಿಗೆ ಸರ್ಕಾರ ಹೆಚ್ಚಿನ ಸೌಲಭ್ಯ ನೀಡುತ್ತಿದೆ. ಬಡವರನ್ನು ಕಡೆಗಣಿಸುತ್ತಿದೆ. ನೆಹರೂ, ಇಂದಿರಾಗಾಂಧಿ, ರಾಜೀವ್ ಗಾಂಧಿ ಅವರು ದೇಶಕ್ಕೆ ಮಾಡಿರುವುದನ್ನು ಮೋದಿ ಅವರಾಗಲಿ, ಅವರ ಜತೆಗಿರುವವರಾಗಲಿ ಮಾಡುತ್ತಿಲ್ಲ. ಅದಕ್ಕಾಗಿ ನಾವು ಹೋರಾಟ ಮಾಡಬೇಕಾಗಿದೆ ಎಂದರು.

ನಾಳೆ ಅಂಬೇಡ್ಕರ್ ಅವರ ಜನ್ಮಸ್ಥಳದಲ್ಲಿ ಲಕ್ಷಾಂತರ ಜನರನ್ನು ಸೇರಿಸಿ ದೊಡ್ಡ ಸಭೆ ನಡೆಸುತ್ತಿದ್ದು, ನಾನು ಅದರಲ್ಲಿ ಭಾಗವಹಿಸುತ್ತಿದ್ದೇನೆ. ಮೋದಿ ಹಾಗೂ ಅಮಿತ್ ಶಾ ಅವರು ದೇಶಕ್ಕೆ ಮಾಡುತ್ತಿರುವ ತೊಂದರೆ, ದೇಶದ ಸ್ವಾತಂತ್ರ್ಯಕ್ಕೆ ಧಕ್ಕೆ ತರುತ್ತಿರುವುದರ ವಿರುದ್ಧ ಧ್ವನಿ ಎತ್ತಲಾಗುವುದು ಹೇಳಿದರು.

BREAKING: ಖ್ಯಾತ ಮಲಯಾಳಂ ನಿರ್ದೇಶಕ ಶಫಿ ವಿಧಿವಶ | Director Shafi No More

ಸುಡಾನ್ ನಲ್ಲಿ ಆಸ್ಪತ್ರೆ ಮೇಲೆ ದಾಳಿ: 70 ಮಂದಿ ಸಾವು | Attack on Hospital

Share. Facebook Twitter LinkedIn WhatsApp Email

Related Posts

‘ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ-2026’ ಕ್ಕೆ ರಾಜ್ಯಪಾಲರ ಅಂಕಿತ

15/04/2026 8:01 PM1 Min Read

ರಾಜ್ಯ ಪ್ರಶಸ್ತಿಗಳ ಘೋಷಣೆ: ದೇವನೂರು ಮಹಾದೇವ ಅವರಿಗೆ ‘ಪಂಪ ಪ್ರಶಸ್ತಿ’, ಸಿದ್ದರಾಮ ಶರಣರಿಗೆ ‘ಬಸವ ಪುರಸ್ಕಾರ’

15/04/2026 7:59 PM2 Mins Read

BIG NEWS: ಲಂಚ ಸ್ವೀಕರಿಸುತ್ತಿದ್ದ ಪಿಡಿಓಗೆ 7 ವರ್ಷ ಜೈಲು ಶಿಕ್ಷೆ: ಸುಳ್ಳು ಸಾಕ್ಷಿ ನುಡಿದ ರೈತನ ವಿರುದ್ಧವೂ ಕೇಸ್!

15/04/2026 7:53 PM1 Min Read
Recent News

ನಾಸಿಕ್ ಬಿಪಿಒ ಮತಾಂತರ ವಿವಾದ: ದೇಶಾದ್ಯಂತದ ಉದ್ಯೋಗಿಗಳಿಗೆ ಟಿ‌ಸಿಎಸ್ ಕಟ್ಟುನಿಟ್ಟಿನ ಸಂದೇಶ !

15/04/2026 8:03 PM

‘ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ-2026’ ಕ್ಕೆ ರಾಜ್ಯಪಾಲರ ಅಂಕಿತ

15/04/2026 8:01 PM

ರಾಜ್ಯ ಪ್ರಶಸ್ತಿಗಳ ಘೋಷಣೆ: ದೇವನೂರು ಮಹಾದೇವ ಅವರಿಗೆ ‘ಪಂಪ ಪ್ರಶಸ್ತಿ’, ಸಿದ್ದರಾಮ ಶರಣರಿಗೆ ‘ಬಸವ ಪುರಸ್ಕಾರ’

15/04/2026 7:59 PM

BIG NEWS: ಲಂಚ ಸ್ವೀಕರಿಸುತ್ತಿದ್ದ ಪಿಡಿಓಗೆ 7 ವರ್ಷ ಜೈಲು ಶಿಕ್ಷೆ: ಸುಳ್ಳು ಸಾಕ್ಷಿ ನುಡಿದ ರೈತನ ವಿರುದ್ಧವೂ ಕೇಸ್!

15/04/2026 7:53 PM
State News
KARNATAKA

‘ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ-2026’ ಕ್ಕೆ ರಾಜ್ಯಪಾಲರ ಅಂಕಿತ

By kannadanewsnow0915/04/2026 8:01 PM KARNATAKA 1 Min Read

ಬೆಂಗಳೂರು: ಕರ್ನಾಟಕದ ಸ್ಥಳೀಯ ಸಂಸ್ಥೆಗಳ ಚುನಾವಣಾ ಇತಿಹಾಸದಲ್ಲಿ ಇಂದು ಅತ್ಯಂತ ನಿರ್ಣಾಯಕ ದಿನ. ರಾಜ್ಯ ಸರ್ಕಾರ ಮಂಡಿಸಿದ್ದ ‘ಕರ್ನಾಟಕ ಗ್ರಾಮ…

ರಾಜ್ಯ ಪ್ರಶಸ್ತಿಗಳ ಘೋಷಣೆ: ದೇವನೂರು ಮಹಾದೇವ ಅವರಿಗೆ ‘ಪಂಪ ಪ್ರಶಸ್ತಿ’, ಸಿದ್ದರಾಮ ಶರಣರಿಗೆ ‘ಬಸವ ಪುರಸ್ಕಾರ’

15/04/2026 7:59 PM

BIG NEWS: ಲಂಚ ಸ್ವೀಕರಿಸುತ್ತಿದ್ದ ಪಿಡಿಓಗೆ 7 ವರ್ಷ ಜೈಲು ಶಿಕ್ಷೆ: ಸುಳ್ಳು ಸಾಕ್ಷಿ ನುಡಿದ ರೈತನ ವಿರುದ್ಧವೂ ಕೇಸ್!

15/04/2026 7:53 PM

BREAKING: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮಹತ್ವದ ಬದಲಾವಣೆ: ಇವಿಎಂ ಬದಲು ಬ್ಯಾಲೆಟ್ ಪೇಪರ್‌ಗೆ ರಾಜ್ಯಪಾಲರ ಅಂಕಿತ!

15/04/2026 7:51 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.