ಉಡುಪಿ: ಮಲ್ಪೆ ಬಂದರನ್ನು ಸಂಪರ್ಕಿಸುವ ಕರಾವಳಿ ಬೈಪಾಸ್- ಮಲ್ಪೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಸಂಬಂಧಿಸಿದಂತೆ ಉಡುಪಿ ಐಬಿಯಲ್ಲಿ ನಡೆದ ಸಭೆಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಮೀನುಗಾರ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ.
ಇದೇ ವೇಳೇ ಸಭೆಯಲ್ಲಿ ಮಲ್ಪೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೈಜ್ಞಾನಿಕ ರೀತಿಯಲ್ಲಿಲ್ಲ. ರಸ್ತೆಯ ಸರ್ವೆ, ಪರಿಹಾರದ ಬಗ್ಗೆ ಜನರಿಗೆ ಗೊಂದಲಗಳಿವೆ. ಭೂಮಿಯ ಪರಿಹಾರ ಕಾರ್ಯ ಕೂಡ ವೈಜ್ಞಾನಿಕವಾಗಿ ನಡೆದಿಲ್ಲ. ಕೋಟ್ಯಂತರ ಆದಾಯ ಇರುವ ಈ ರಸ್ತೆ ಪರಿಹಾರಕ್ಕೆ ಕೇವಲ 50 ಕೋಟಿ ರೂ. ಕೊಡಲು ಹಿಂದೇಟು ಏಕೆ? ಎಂದು ಪ್ರಶ್ನೆ ಮಾಡಿದ್ದಾರೆ ಅಂತ ತಿಳಿದು ಬಂದಿದೆ.
BIG NEWS: ‘ಫೈಬರ್ನೆಟ್’ ಹಗರಣ:ಆಂದ್ರ ಮಾಜಿ ಸಿಎಂ ಚಂದ್ರಬಾಬು ನಾಯ್ಡು ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ ಸಿಐಡಿ
ಸಭೆಯಲ್ಲಿ ನಾವು ನಿಮ್ಮ ಮೇಲೆ ವಿಶ್ವಾಸ ಇಟ್ಟು ಮತ ಹಾಕಿ ಗೆಲ್ಲಿಸಿದ್ದೇವೆ. ಆದರೆ ನೀವು ನಮ್ಮ ಮೇಲೆ ವಿಶ್ವಾಸಇಟ್ಟಿಲ್ಲ. ನಿಮಗೆ 10 ವರ್ಷಗಳಿಂದ ಮತ ಹಾಕಿದ್ದಕ್ಕೆ ನೀವು ನಮಗೆ ಏನು ಮಾಡಿದ್ದೀರಿ. ರಸ್ತೆಯಲ್ಲಿ ಭೂಮಿ ಕಳೆದುಕೊಳ್ಳುವವರನ್ನು ಸೇರಿಸಿ ಈವರೆಗೆ ಒಂದೇ ಒಂದು ಸಭೆ ಕರೆದಿಲ್ಲ. ನೀವು ನಮ್ಮ ಜನಪ್ರತಿನಿಧಿ ಅಲ್ಲವೇ? ಎಂದು ಪ್ರಶ್ನೆ ಮಾಡಿದ್ದಾರೆ.
ದೆಹಲಿ ವಿಧಾನಸಭೆಯಲ್ಲಿ ಇಂದು ಅರವಿಂದ್ ಕೇಜ್ರಿವಾಲ್ ವಿಶ್ವಾಸಮತ ಯಾಚನೆ!