ಬೆಂಗಳೂರು: ಗ್ಯಾರಂಟಿ ಯೋಜನೆಗಳಿಗಾಗಿ ನಮ್ಮ ಸರ್ಕಾರ ಬರೋಬ್ಬರಿ ₹76,509 ಕೋಟಿ ಖರ್ಚು ಮಾಡಿದೆ. ಇದು ಸತ್ಯ ಎನ್ನುವುದು ಸದನದಲ್ಲಿರುವ ಪ್ರತಿಯೊಬ್ಬರಿಗೂ ಸ್ಪಷ್ಟವಾಗಿ ಗೊತ್ತಿದೆ. ನಮ್ಮ ಸರ್ಕಾರ ದಿವಾಳಿಯಾಗಿದ್ದರೆ ₹76,509 ಕೋಟಿ ಕೊಡಲು ಸಾಧ್ಯವಿತ್ತೇ? ಲೋಕಸಭಾ ಚುನಾವಣೆ ನಂತರದಲ್ಲಿ ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ನಿಲ್ಲಿಸಿಬಿಡುತ್ತೆ ಎಂದು ಸುಳ್ಳು ಆರೋಪ, ಅಪಪ್ರಚಾರ ಮಾಡಿದ್ರಲ್ಲಾ, ನಿಂತೋಯ್ತಾ? ರಾಜ್ಯದ ಜನರನ್ನು ಯಾವಾಗಲೂ ಮೂರ್ಖರನ್ನಾಗಿಸಲು ಪ್ರಯತ್ನಿಸಿದರೆ ಸಾಧ್ಯವಿಲ್ಲ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದರು.
ಇಂದು ವಿಧಾನಸಭಾ ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ವಿಧಾನ ಪರಿಷತ್ತಿನಲ್ಲಿ ಉತ್ತರಿಸಿದಂತ ಅವರು, 05-03-2025 ರಂದು ಕೇರಳ ಸರ್ಕಾರದ ಅಧಿಕಾರಿಗಳ ತಂಡ ಹಾಗೂ ಇತರೆ ದಿನಾಂಕಗಳಲ್ಲಿ ಆಂಧ್ರಪ್ರದೇಶದ ಹಾಗೂ ಮಹಾರಾಷ್ಟ್ರದ ಅಧಿಕಾರಿಗಳು ಗ್ಯಾರಂಟಿ ಯೋಜನೆಗಳ ಅಧ್ಯಯನಕ್ಕೆ ರಾಜ್ಯಕ್ಕೆ ಆಗಮಿಸಿದ್ದರು. ಆ ತಂಡಗಳಿಗೆ ಗ್ಯಾರಂಟಿಗಳ ಬಗ್ಗೆ ವಿಸ್ತೃತವಾಗಿ ವಿವರಿಸಲಾಯಿತು ಎಂದರು.
ಕೇಂದ್ರ ಸರ್ಕಾರದ ಅಧೀನದಲ್ಲಿ ಬರುವ Indian Institute of Pubic Administration ಸಂಸ್ಥೆಯ ಅಧ್ಯಕ್ಷರು , ಕೇಂದ್ರಸಚಿವರಾಗಿದ್ದಾರೆ. ಉಪರಾಷ್ಟ್ರಪತಿಗಳ ಜಗದೀಪ್ ಧನಕರ್ ಅವರು ಅಧ್ಯಕ್ಷರಾಗಿ , ರಾಜ್ಯದ ಗ್ಯಾರಂಟಿಗಳ ಬಗ್ಗೆ ಪ್ರಶಂಸೆಯ ಮಾತುಗಳನ್ನಾಡಿದ್ದಾರೆ ಎಂದರು.
ವಿರೋಧಪಕ್ಷದವರು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡಿದ್ದಾರೆ. ಸರ್ಕಾರದಲ್ಲಿ ಗ್ಯಾರಂಟಿಗಳಿಂದ ಸರ್ಕಾರದಲ್ಲಿ ದುಡ್ಡಿಲ್ಲ ಎಂದು ಹೇಳಿದ್ದಾರೆ. ಸರ್ಕಾರ ಫೆಬ್ರವರಿ ಅಂತ್ಯದಲ್ಲಿ 76509 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ. 2024-25 ರಲ್ಲಿ 52009 ಕೋಟಿಗಳನ್ನು ಗ್ಯಾರಂಟಿಗಳಿಗೆ ಬಜೆಟ್ ನಲ್ಲಿ ಇಡಲಾಗಿದ್ದು, ಅದರಲ್ಲಿ 41560 ಕೋಟಿ ವೆಚ್ಚ ಮಾಡಲಾಗಿದೆ ಎಂದು ತಿಳಿಸಿದರು.
ಅದರಲ್ಲಿ ಗೃಹ ಲಕ್ಷ್ಮಿ 28608 ಕೋಟಿ – ಖರ್ಚು 22611 ಕೋಟಿ , ಗೃಹಜ್ಯೋತಿ – 9657 ಕೋಟಿ –ಖರ್ಚು 8389 ಕೋಟಿ ,ಅನ್ನಭಾಗ್ಯ 8079 ಕೊಟಿ – ಖರ್ಚು 5590 ಕೋಟಿ ಶಕ್ತಿ ಯೋಜನೆಗೆ 5015 ಕೋಟಿಗಳಲ್ಲಿ -4821 ಕೋಟಿ , ಯುವನಿಧಿ 650 ಕೋಟಿ- ವೆಚ್ಚ 240 ಕೋಟಿ , ಒಟ್ಟು 52009 ರಲ್ಲಿ 41650 ಕೋಟಿ ವೆಚ್ಚ ಮಾಡಲಾಗಿದೆ. ಸರ್ಕಾರದಲ್ಲಿ ಹಣವಿಲ್ಲದಿದ್ದರೆ 1.26 ಕೋಟಿ ಕುಟುಂಬಗಳು ಗೃಹಲಕ್ಷ್ಮಿ ಅನ್ನಭಾಗ್ಯದ ಫಲಾನುಭವಿಗಳು , 1.60 ಕೋಟಿ ಕುಟುಂಬದ ಗೃಹಜ್ಯೋತಿಯಿಂದ ಲಾಭಪಡೆದಿದ್ದಾರೆ ಎಂದರು.
ಬಾಹ್ಯಾಕಾಶದಲ್ಲಿ ಸಿಲುಕಿದ್ದ ‘ಸುನೀತಾ ವಿಲಿಯಮ್ಸ್’ಗೆ ನಾಸಾ ಎಷ್ಟು ಪಾವತಿ ಗೊತ್ತಾ? | Sunita Williams