ಬೆಂಗಳೂರು : 2ಸಿ ಅಡಿ ಒಕ್ಕಲಿಗರಿಗೆ ಶೇ.6ರಷ್ಟು ಮೀಸಲಾತಿ ನೀಡಿದ್ದನ್ನು ಸ್ವಾಗತಿಸುತ್ತೇವೆ ಎಂದು ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಮಹಾಸ್ವಾಮೀಜಿ ಹೇಳಿದರು.
ಶೇಕಡಾ 12ರಷ್ಟು ಮೀಸಲಾತಿ ಹೆಚ್ಚಳ ಮಾಡಲು ನಾವು ಕೇಳಿದ್ದೆವು, ಆದರೆ ಸರ್ಕಾರ 2ಸಿ ಅಡಿ ಶೇಕಡಾ 6ರಷ್ಟು ಮೀಸಲಾತಿ ನೀಡಿದೆ. ಶೇಕಡಾ 2ರಷ್ಟು ಮೀಸಲಾತಿ ಪ್ರಮಾಣ ಹೆಚ್ಚಿಸಿದ್ದನ್ನು ಸ್ವಾಗತಿಸುತ್ತೇವೆ. ಶೀಘ್ರವೇ ಮೀಸಲಾತಿ ಬಳಕೆಗೆ ಅವಕಾಶ ಮಾಡಿಕೊಡಬೇಕು ಎಂದು ಶ್ರೀಗಳು ಹೇಳಿದರು.
ಇನ್ನೂ, ಲಿಂಗಾಯತರಿಗೆ 2ಡಿ ಅಡಿ ಮೀಸಲಾತಿ ಹೆಚ್ಚಳ ಮಾಡಿದ್ದು, ಈ ಬಗ್ಗೆ ಬಸವ ಜಯಮೃತ್ಯುಂಜಯ ಸ್ವಾಮೀಜಿ ಪ್ರತಿಕ್ರಿಯೆ ನೀಡಿದ್ದಾರೆ. ಸಚಿವ ಸಂಪುಟ ನಿರ್ಧಾರದ ಬಗ್ಗೆ ಪರಿಶೀಲನೆ ನಡೆಸಿ ಶನಿವಾರ ತೀರ್ಮಾನ ಕೈಗೊಳ್ಳಲಿದ್ದೇವೆ ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ತಿಳಿಸಿದರು.ಹಲವು ದಿನಗಳಿಂದ ಪ್ರತಿಭಟನೆ ನಡೆಯುತ್ತಿದೆ., ಮೀಸಲಾತಿ ಶೇ 7ರಷ್ಟು ಹೆಚ್ಚಿಸಿರುವ ಬಗ್ಗೆ ನಾವು ಚರ್ಚೆ ಮಾಡುತ್ತೇವೆ. ನಮ್ಮ ನಾಯಕರ ಜೊತೆ ಚರ್ಚಿಸಿ ನಾಳೆ ನಿರ್ಧಾರ ಪ್ರಕಟಿಸುತ್ತೇವೆ ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ಪ್ರತಿಕ್ರಿಯೆ ನೀಡಿದ್ದಾರೆ.
ಲಿಂಗಾಯತರಿಗೆ 2ಡಿ ಅಡಿ ಮೀಸಲಾತಿ ಹೆಚ್ಚಳ : ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದೇನು..?