ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆ ( Karnataka Police Department ) ಸಂಘಪರಿವಾರದ ಕೈಗೊಂಬೆಯಾಗಿದೆ. ಬಿಜೆಪಿ ಪಕ್ಷದ ( BJP Party ) ಪುಂಡರ ಗೂಂಡಾಗಿರಿಗೆ ಅವಕಾಶ ನೀಡಿ, ಕೈಕಟ್ಟಿಕೊಂಡು ತಮಾಷೆ ನೋಡುವ ಪೊಲೀಸರ ಕರ್ತವ್ಯ ಲೋಪ ಖಂಡಿಸಿ ಈ ತಿಂಗಳ 26 ರಂದು ಕೊಡಗಿನ ಎಸ್.ಪಿ ಕಚೇರಿಗೆ ಮುತ್ತಿಗೆ ಹಾಕುತ್ತೇವೆ. ಬಿಜೆಪಿಯ ಗೂಂಡಾಗಿರಿಗೆ ಹೋರಾಟದ ಮೂಲಕವೇ ತಕ್ಕ ಉತ್ತರ ಕೊಡುತ್ತೇವೆ ಎಂಬುದಾಗಿ ವಿಪಕ್ಷ ನಾಯಕ ಸಿದ್ಧರಾಮಯ್ಯ ( Siddaramaiah ) ರಾಜ್ಯ ಸರ್ಕಾರದ ವಿರುದ್ಧ ಗುಡುಗಿದ್ದಾರೆ.
ರಾಜ್ಯ ಪೊಲೀಸ್ ಇಲಾಖೆ ಸಂಘಪರಿವಾರದ ಕೈಗೊಂಬೆಯಾಗಿದೆ.@BJP4Karnataka ಪಕ್ಷದ ಪುಂಡರ ಗೂಂಡಾಗಿರಿಗೆ ಅವಕಾಶ ನೀಡಿ, ಕೈಕಟ್ಟಿಕೊಂಡು ತಮಾಷೆ ನೋಡುವ ಪೊಲೀಸರ ಕರ್ತವ್ಯ ಲೋಪ ಖಂಡಿಸಿ ಈ ತಿಂಗಳ 26 ರಂದು ಕೊಡಗಿನ ಎಸ್.ಪಿ ಕಚೇರಿಗೆ ಮುತ್ತಿಗೆ ಹಾಕುತ್ತೇವೆ.
ಬಿಜೆಪಿಯ ಗೂಂಡಾಗಿರಿಗೆ ಹೋರಾಟದ ಮೂಲಕವೇ ತಕ್ಕ ಉತ್ತರ ಕೊಡುತ್ತೇವೆ.
— Siddaramaiah (@siddaramaiah) August 19, 2022
ಈ ಬಗ್ಗೆ ಟ್ವಿಟ್ ಮಾಡಿರುವಂತ ಅವರು, ಸಿದ್ದಾಂತಕ್ಕೆ ಸಿದ್ದಾಂತ ಉತ್ತರವಾಗಬೇಕು, ಸಿದ್ದಾಂತವನ್ನು ಕಲ್ಲು-ಮೊಟ್ಟೆಗಳ ಮೂಲಕ ಎದುರಿಸುವುದು, ಸಮರ್ಥಿಸುವುದು ಹೇಡಿಗಳ ಲಕ್ಷಣ. ಬನ್ನಿ ಚರ್ಚೆ ಮಾಡೋಣ ಎಂದು ಬಹಿರಂಗವಾಗಿ ಆಹ್ವಾನವನ್ನು ಬಿಜೆಪಿ ನಾಯಕರಿಗೆ ನೀಡಿದ್ದಾರೆ.
ಸಿದ್ದಾಂತಕ್ಕೆ ಸಿದ್ದಾಂತ ಉತ್ತರವಾಗಬೇಕು,
ಸಿದ್ದಾಂತವನ್ನು ಕಲ್ಲು-ಮೊಟ್ಟೆಗಳ ಮೂಲಕ
ಎದುರಿಸುವುದು, ಸಮರ್ಥಿಸುವುದು
ಹೇಡಿಗಳ ಲಕ್ಷಣ.ಬನ್ನಿ ಚರ್ಚೆ ಮಾಡೋಣ@CMofKarnataka @narendramodi @nalinkateel @JPNadda pic.twitter.com/mtxIxtXZf8
— Siddaramaiah (@siddaramaiah) August 19, 2022