ಬೆಂಗಳೂರು: “ಹೈಕಮಾಂಡ್ ನಾಯಕರು ದಿಲ್ಲಿಗೆ ಕರೆದರೆ ಹೋಗುತ್ತೇನೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.
ಅವರು ವಿಧಾನಸೌಧದ ಬಳಿ ಕೇಳಿದಾಗ ಮಾಧ್ಯಮಗಳ ಪ್ರಶ್ನೆಗೆ ಗುರುವಾರ ಪ್ರತಿಕ್ರಿಯಿಸಿದರು.
ಸಿಎಂ ಹಾಗೂ ಡಿಸಿಎಂ ಇಬ್ಬರನ್ನೂ ದಿಲ್ಲಿಗೆ ಕರೆದು ಚರ್ಚೆ ಮಾಡುತ್ತೇವೆ ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆ ಬಗ್ಗೆ ಮಾಧ್ಯಮಗಳು ಕೇಳಿದಾಗ, ಹೈಕಮಾಂಡ್ ನನ್ನನ್ನು ಹಾಗೂ ಮುಖ್ಯಮಂತ್ರಿಗಳನ್ನು ಕರೆದರೆ ನಾವು ಮಾತನಾಡಿಕೊಂಡು ದೆಹಲಿಗೆ ಹೋಗುತ್ತೇವೆ” ಎಂದರು.








