ಬೆಂಗಳೂರು: ಮುಸ್ಲಿಮರಿಗೆ ಶೇ 4 ಮೀಸಲಾತಿಯನ್ನು ನಾವು ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ; ಇದನ್ನು ನಾವು ವಿರೋಧಿಸುತ್ತೇವೆ. ಸದನದ ಒಳಗೆ ಮತ್ತು ಹೊರಗೆ ಹೋರಾಟ ಮಾಡಲಿದ್ದೇವೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಪ್ರಕಟಿಸಿದ್ದಾರೆ.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನ” ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು ಪ್ರಶ್ನೆಗೆ ಉತ್ತರ ನೀಡಿದರು. ಈಗಾಗಲೇ ಮುಸ್ಲಿಂ ಬಂಧುಗಳಿಗೆ ಶೇ 4ರಷ್ಟು ಮೀಸಲಾತಿ ಹಿಂದೆ ಇತ್ತು. ಧಾರ್ಮಿಕ ಮೀಸಲಾತಿ ಕೊಡಲು ಸಂವಿಧಾನದಲ್ಲಿ ಅವಕಾಶ ಇಲ್ಲ; ಧಾರ್ಮಿಕ ಮೀಸಲಾತಿ ನೀಡಿದರೆ ಅದು ಸಂವಿಧಾನಕ್ಕೆ ವಿರುದ್ಧವಾದ ನಡೆ ಎಂದು ಪ್ರತಿಪಾದಿಸಿದರು.
ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಗಳಾಗಿದ್ದಾಗ ಧಾರ್ಮಿಕ ಮೀಸಲಾತಿಯನ್ನು ಹಿಂದಕ್ಕೆ ಪಡೆಯಲಾಗಿತ್ತು. ಕಾಂಗ್ರೆಸ್ಸಿನವರು ತಾವು ಅಧಿಕಾರಕ್ಕೆ ಬಂದರೆ ಮತ್ತೆ ಧಾರ್ಮಿಕ ಮೀಸಲಾತಿ ನೀಡುವುದಾಗಿ ಘೋಷಿಸಿದ್ದರು. ಈಗ ಗುತ್ತಿಗೆಯಲ್ಲಿ ಶೇ 4 ಮೀಸಲಾತಿಯನ್ನು ಕೊಟ್ಟಿದ್ದಾರೆ. ಇದು ಕಾನೂನುಬಾಹಿರ, ಸಂವಿಧಾನವಿರೋಧಿ ಎಂದು ಆಕ್ಷೇಪಿಸಿದರು.
ನಮ್ಮ ರಾಷ್ಟ್ರೀಯ ನಾಯಕರು ಕೂಡ ಇದಕ್ಕೆ ಉತ್ತರ ನೀಡಿದ್ದಾರೆ. ಜೈನರು ಮತ್ತು ಇತರ ಅಲ್ಪಸಂಖ್ಯಾತರನ್ನು ನೆಪಕ್ಕಾಗಿ ಸೇರಿಸಿದ್ದಾರೆ ಎಂದು ಇನ್ನೊಂದು ಪ್ರಶ್ನೆಗೆ ಉತ್ತರ ಕೊಟ್ಟರು. ಓಲೈಕೆ ರಾಜಕಾರಣಕ್ಕಾಗಿ ಮತ್ತು ಮತಬ್ಯಾಂಕನ್ನು ಯಥಾಸ್ಥಿತಿ ಉಳಿಸಿಕೊಳ್ಳುವ ಉದ್ದೇಶದಿಂದ ನೀವು ಈ ತುಷ್ಟೀಕರಣ ರಾಜಕಾರಣ ಮಾಡುತ್ತಿದ್ದೀರಿ ಎಂದು ಟೀಕಿಸಿದರು. ಮೊದಲು ನೀವು ಶೇ 4 ಕೊಟ್ಟದ್ದನ್ನು ನಾವು ರದ್ದು ಮಾಡಿದ್ದೆವು. ಜೈನರು ಸೇರಿ ಇತರರೆಲ್ಲ ಸೇರಿದ ಮೇಲೆ ಶೇ 4 ಯಾಕಿದೆ? ಮುಸಲ್ಮಾನ ಬಂಧುಗಳಿಗೆ ಕೊಡಬೇಕೆನ್ನುವುದೇ ಅವರ ಉದ್ದೇಶ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಇದು ದೇಶವನ್ನು ಕೆಡಿಸುವ ಕೆಲಸ ಎಂದು ದೂರಿದರು.
ಇದು ದೇಶವಿರೋಧಿ ನೀತಿ ಎಂದು ನಮ್ಮ ರಾಷ್ಟ್ರೀಯ ನಾಯಕರು ಹೇಳಿದ್ದಾರೆ. ನಿನ್ನೆ, ಮೊನ್ನೆ ಸಾಮಾಜಿಕ ಜಾಲತಾಣಗಳು, ಪತ್ರಿಕೆಗಳಲ್ಲಿ ರಾರಾಜಿಸುತ್ತಿದೆ. ನಾವು ಈಗಾಗಲೇ ಪಶ್ಚಿಮ ಬಂಗಾಲದಲ್ಲಿ ಶೇ 41 ದಾಟಿದ್ದೇವೆ. ನಮಗೆ ಯಾರ ಹಂಗೂ ಬೇಕಿಲ್ಲ; ನಾವೇ ಚುನಾವಣೆಗೆ ಸ್ಪರ್ಧೆ ಮಾಡುತ್ತೇವೆ. 1947ರಲ್ಲಿ ನಮಗೆ ಸ್ವಾತಂತ್ರ್ಯ ಬಂದಿದೆ. ಆವತ್ತು ಈ ದೇಶ ವಿಭಜನೆ ಆಗಿತ್ತು. ಈಗ 2047ಕ್ಕೆ 100 ವರ್ಷ ತುಂಬಿದಾಗ ನಾವು ಭಾರತವನ್ನು ಇಸ್ಲಾಂ ರಾಷ್ಟ್ರ ಮಾಡುತ್ತೇವೆ ಎನ್ನುತ್ತಿದ್ದಾರೆ. ಇದನ್ನು ಯಾರು ಹೇಳುತ್ತಿದ್ದಾರೆ ಎಂದು ಕೇಳಿದರು.
ಮುಸಲ್ಮಾನ ಬಂಧುಗಳಿಂದಲೇ ಈ ದೇಶಕ್ಕೆ ಗಂಡಾಂತರ ಇದೆ ಎಂದು ನಾನು ಹೇಳುತ್ತಿಲ್ಲ; ಆದರೆ, ಮುಸ್ಲಿಮರ ಜೊತೆಗೇ ಇದ್ದು ಮುಸ್ಲಿಂ ಮನಸ್ಥಿತಿ ಇರುವ ಹಿಂದೂಗಳಿಂದ ಈ ದೇಶಕ್ಕೆ ಗಂಡಾಂತರ ಇದೆ ಎಂದು ಅವರು ವಿಶ್ಲೇಷಿಸಿದರು.
ಹೋಳಿ ಪಾರ್ಟಿಯಲ್ಲಿ ಕುಡಿದ ಮತ್ತಿನಲ್ಲಿ ಸಹನಟನಿಂದ ಕಿರುತೆರೆ ನಟಿಗೆ ಲೈಂಗಿಕ ಕಿರುಕುಳ: ದೂರು ದಾಖಲು
SHOCKING : ರಾಜ್ಯದಲ್ಲಿ ಅಮಾನವೀಯ ಘಟನೆ : ಕಲ್ಬುರ್ಗಿಯಲ್ಲಿ ‘ಮಂಗಳಮುಖಿಯನ್ನು’ ಬೆತ್ತಲೆಗೊಳಿಸಿ, ತಲೆ ಬೋಳಿಸಿ ಹಲ್ಲೆ!