ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ಖಂಡಿಸಿ ಬಿಜೆಪಿಯು ಇತ್ತೀಚೆಗೆ ಮಾಧ್ಯಮಗಳಿಗೆ ನೀಡಿದ್ದ ಜಾಹೀರಾತು ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಕಾಂಗ್ರೆಸ್ ಮುಂದಾಗಿದೆ. ಈ ಬಗ್ಗೆ ಖಂಡನೆ ವ್ಯಕ್ತಪಡಿಸಿರುವ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ನಿಮ್ಮ ಗೊಡ್ಡು ಬೆದರಿಕೆಗಳಿಗೆ, ನಟ್ಟು-ಬೋಲ್ಟು ಟೈಟು ಮಾಡುವ ಧಮ್ಕಿಗಳಿಗೆ ನಾವು ಜಗ್ಗುವುದು ಇಲ್ಲ ಬಗ್ಗುವುದು ಇಲ್ಲ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, 40% ಸರ್ಕಾರ ಎಂಬ ಹಸಿ ಸುಳ್ಳು, ಅಪಪ್ರಚಾರದ ಮೂಲಕ ಅಧಿಕಾರಕ್ಕೆ ಬಂದ @INCKarnataka ಈಗ ಜವಾಬ್ದಾರಿಯುತ ವಿಪಕ್ಷವಾಗಿ ಸರ್ಕಾರದ ಭ್ರಷ್ಟಾಚಾರ, ವೈಫಲ್ಯಗಳ ಬಗ್ಗೆ ದನಿ ಎತ್ತುತ್ತಿರುವ @BJP4Karnataka ಪಕ್ಷದ ಮೇಲೆ ಸುಳ್ಳು ಕೇಸು ದಾಖಲಿಸುವ ಮೂಲಕ ವಿಪಕ್ಷಗಳ ದನಿ ಅಡಗಿಸುವ ಪ್ರಯತ್ನ ಮಾಡುತ್ತಿದೆ.
ಸಿಎಂ @siddaramaiah ನವರೇ ಹಾಗೂ ಡಿಸಿಎಂ @DKShivakumar ಅವರೇ, ನಿಮ್ಮ ಗೊಡ್ಡು ಬೆದರಿಕೆಗಳಿಗೆ, ನಟ್ಟು-ಬೋಲ್ಟು ಟೈಟು ಮಾಡುವ ಧಮ್ಕಿಗಳಿಗೆ ನಾವು ಜಗ್ಗುವುದು ಇಲ್ಲ, ಬಗ್ಗುವುದೂ ಇಲ್ಲ. @INCKarnataka ಸರ್ಕಾರದ ಭ್ರಷ್ಟಾಚಾರ, ವೈಫಲ್ಯ, ಎಡವಟ್ಟುಗಳನ್ನು ಜನರಿಗೆ ತಲುಪಿಸುವ ನಮ್ಮ ಸಾಂವಿಧಾನಿಕ ದತ್ತ ಕರ್ತವ್ಯ ಎಗ್ಗಿಲ್ಲದೆ ಮುಂದುವರೆಯಲಿದೆ.
https://twitter.com/RAshokaBJP/status/1926868561856807333?t=heRtkfTaVN_GDX7ihANxBg&s=19