ಚಿಕ್ಕೋಡಿ: ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರ ಪ್ರಕರಣದಲ್ಲಿ ನಾವು ಮಧ್ಯಪ್ರವೇಶ ಮಾಡುವುದಿಲ್ಲ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.
ಇಂದು ಎಸ್ಐಟಿ ಅಧಿಕಾರಿಗಳಿಂದ ಕಿಡ್ನಾಪ್ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರನ್ನು ಬಂಧಿಸಲಾಗಿತ್ತು. ಈ ಬಗ್ಗೆ ಹೆಚ್.ಡಿ ರೇವಣ್ಣ ಬಂಧನದ ಬಳಿಕ ಮೊದಲ ಪ್ರತಿಕ್ರಿಯೆ ನೀಡಿರುವಂತ ಸಿಎಂ ಸಿದ್ಧರಾಮಯ್ಯ ಅವರು, ಈ ಸಂಬಂಧ ನಾನು ಪೊಲೀಸರ ಜೊತೆ ಮಾತನಾಡುತ್ತೇನೆ. ನಾವು ಇದರಲ್ಲಿ ಮದ್ಯಪ್ರವೇಶ ಮಾಡಲ್ಲ ಎಂದರು.
ಹೆಚ್.ಡಿ ರೇವಣ್ಣ ಅಪಹರಣ ಪ್ರಕರಣವೊಂದರಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನಿಗೆ ಅರ್ಜಿ ಹಾಕಿದ್ದರು. ಆದ್ರೇ ಅವರ ಅರ್ಜಿಯನ್ನು ವಜಾ ಮಾಡಲಾಗಿದೆ. ಅವರಿಗೆ ಜಾಮೀನು ಸಿಕ್ಕಿಲ್ಲ. ಹೀಗಾಗಿ ಅವರನ್ನು ಕಸ್ಟಡಿಗೆ ತೆಗೆದುಕೊಂಡಿರಬೇಕು ಅನಿಸುತ್ತೆ ಎಂದರು.
BIG NEWS: ಜೆಡಿಎಸ್ ಪಕ್ಷದಿಂದ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅಮಾನತು? | JDS MLA HD Revanna
BIGG NEWS: ನಾಳೆ ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ, ಪೋಲಿಸರಿಗೆ ಶರಣು ಸಾಧ್ಯತೆ !