ಬೆಂಗಳೂರು: ಬೆಂಗಳೂರಿ ಜನತೆಗೆ ತೊಂದರೆ ಕೊಟ್ಟರೇ ನಾವು ಸುಮ್ಮನೇ ಇರುವುದಿಲ್ಲ ಅಂತ ಮಾಜಿ ಡಿಸಿಎಂ ಡಾ.ಸಿಎನ್ ಅಶ್ವತ್ಥನಾರಾಯಣ್ ಖಡಕ್ ಎಚ್ಚರಿಕೆಯನ್ನು ನೀಡಿದ್ದಾರೆ.
ಇಂದು ಮಾಜಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಜನತೆಗೆ ತೊಂದರೆ ಕೊಟ್ಟರೆ ನಾವು ಸುಮ್ಮನಿರುವುದಿಲ್ಲ. ಪ್ರತಿಭಟನೆಯನ್ನು ಇನ್ನಷ್ಟು ತೀವ್ರಗೊಳಿಸುತ್ತೇವೆ ಎಂದು ಎಚ್ಚರಿಸಿದರು.
ಈ ಪ್ರತಿಭಟನೆ ಕಾಂಗ್ರೆಸ್ ಸರಕಾರಕ್ಕೆ ಎಚ್ಚರಿಕೆ ಗಂಟೆ ಎಂದು ಅವರು ತಿಳಿಸಿದರು. ಆಶಾದಾಯಕ, ಭರವಸೆದಾಯಕ ನಗರ ಬೆಂಗಳೂರನ್ನು ಕಾಂಗ್ರೆಸ್ ಸರಕಾರ ಕಡೆಗಣಿಸಿದ್ದು, ಈ ಸರಕಾರಕ್ಕೆ ಪ್ರಜ್ಞೆ ಇದೆಯೇ ಎಂದು ಟೀಕಿಸಿದರು. ಇದು ಅತ್ಯಂತ ಕೆಟ್ಟ- ಭ್ರಷ್ಟ ಸರಕಾರ. ಗುತ್ತಿಗೆದಾರರ ರಕ್ತ ಹೀರುವ ಸರಕಾರ ಎಂದು ಅವರು ದೂರಿದರು.
ಮಾಜಿ ಸಚಿವರಾದ ಬೈರತಿ ಬಸವರಾಜ್, ಗೋಪಾಲಯ್ಯ, ಮುನಿರತ್ನ, ನಾರಾಯಣ ಗೌಡ, ಶಾಸಕರಾದ ವಿಶ್ವನಾಥ್, ಮುನಿರಾಜು, ರವಿಸುಬ್ರಹ್ಮಣ್ಯ, ಕೃಷ್ಣಪ್ಪ, ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಬೆಂಗಳೂರಿನ ಮಾಜಿ ಸಚಿವರು, ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು, ಬಿಬಿಎಂಪಿ ಮಾಜಿ ಸದಸ್ಯರು, ಬಿಜೆಪಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಸಿ.ಕೆ. ರಾಮಮೂರ್ತಿ ಮತ್ತು ಪಕ್ಷದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಬಾಗಲಕೋಟೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ : ರುಂಡ-ಮುಂಡ ಬೇರ್ಪಡಿಸಿ ಭೀಕರವಾಗಿ ಹತ್ಯೆ
BREAKING: ದೆಹಲಿ ಗಲಭೆ ಪ್ರಕರಣ: ‘ಉಮರ್ ಖಾಲಿದ್’ಗೆ ಜಾಮೀನು ನಿರಾಕರಿಸಿದ ಕೋರ್ಟ್ | Delhi Riots conspiracy case