ರಾಮನಗರ: ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ನಾವೇ ಗೆಲ್ಲುತ್ತೇವೆ ಎಂಬುದಾಗಿ ಸಹೋದರ ಡಿ.ಕೆ ಸುರೇಶ್ ಪರವಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಗೆಲುವಿನ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.
ರಾಮನಗರ ಜಿಲ್ಲೆಯ ಕನಕಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಲೋಕಸಭಾ ಚುನಾವಣೆಯಲ್ಲಿ ನಾವೇ ಗೆಲ್ಲುತ್ತೇವೆ ಎಂಬುದಾಗಿ ಹೇಳಿದರು. ಈ ಮೂಲಕ ಸಹೋದರ ಡಿ.ಕೆ ಸುರೇಶ್ ಗೆಲ್ಲುವ ಬಗ್ಗೆ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.
“ಮೋದಿ ಅವರ ನೂರು ದಿನಗಳ ಕಾರ್ಯಕ್ರಮ ರಾಜಕೀಯ ತಂತ್ರದ ಭಾಗವಷ್ಟೇ. ಜನರ ಮನಸ್ಥಿತಿಯನ್ನು ಸಜ್ಜು ಮಾಡುವ ವ್ಯಾಖ್ಯಾನ ಬಿಟ್ಟರೆ ಇದರಲ್ಲಿ ಬೇರೆನೂ ಇಲ್ಲ” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಹೇಳಿದರು.
“ನಾವು ಸಹ ರಾಜಕೀಯ ತಂತ್ರ ಹೊಂದಿದ್ದೇವೆ. ಪ್ರತಿಯೊಂದು ಪಕ್ಷವು ಒಂದೊಂದು ತಂತ್ರ ಅನುಸರಿಸುತ್ತವೆ. ಎಕ್ಸಿಟ್ ಪೋಲ್ ಸುಳ್ಳಾಗಲಿದೆ. ಇಂಡಿಯಾ ಒಕ್ಕೂಟ ಬಹುಮತ ಪಡೆಯುತ್ತದೆ ಮತ್ತು ಸರ್ಕಾರ ರಚಿಸುತ್ತದೆ” ಎಂದು ಹೇಳಿದರು.
ಕಾರ್ಮಿಕರೇ ಗಮನಿಸಿ : ರಾಜ್ಯ ಸರ್ಕಾರದಿಂದ ನಿಮಗೆ ಸಿಗಲಿವೆ ಈ ಎಲ್ಲಾ ʻಸೌಲಭ್ಯʼಗಳು!