ಬೆಳಗಾವಿ : ಈಗಾಗಲೇ ಕಳೆದ ಏಪ್ರಿಲ್ 26ರಂದು ದಕ್ಷಿಣ ಕರ್ನಾಟಕದ ಭಾಗಗಳಲ್ಲಿ ಲೋಕಸಭೆ ಚುನಾವಣೆ ಹಿನ್ನೆಲೆ ಮತದಾನ ನಡೆದು ಇದೀಗ ಉತ್ತರ ಕರ್ನಾಟಕ ಭಾಗದಲ್ಲಿ ಮೇ ಏಳರಂದು ಮತದಾನ ನಡೆಯಲಿದೆ. ಹೀಗಾಗಿ ಈ ಬಾರಿ 20 ಕ್ಕೂ ಹೆಚ್ಚು ಸ್ಥಾನಗಳಲ್ಲಿ ನಾವು ಗೆಲುವು ಸಾಧಿಸಲಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬೆಳಗಾವಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮೊದಲ ಹಂತದಲ್ಲಿ 8 ರಿಂದ 9ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲುವ ವಿಶ್ವಾಸವಿದೆ ಎರಡನೇ ಹಂತದಲ್ಲಿ ಹತ್ತಕ್ಕೂ ಹೆಚ್ಚು ಕ್ಷೆತ್ರಗಳಲ್ಲಿ ಗೆಲ್ಲುವ ವಿಶ್ವಾಸವಿದೆ ಒಟ್ಟಿನಲ್ಲಿ ಕರ್ನಾಟಕದಲ್ಲಿ 20 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ.
ಮೇ 7ರಂದು ಎರಡನೇ ಹಂತದಲ್ಲಿ 14 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಸೇರಿ ಹಲವು ನಾಯಕರು ಉಪಸ್ಥಿತಿ ಇರಲಿದೆ. ಇಂದು ಸಂಜೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ ಎಂದರು.