ಬೆಂಗಳೂರು: ಕೇಂದ್ರ ಸರ್ಕಾರದ ಆದೇಶದನ್ವಯ ರಾಜ್ಯದೆಲ್ಲೆಡೆ ಕಾರಿನಲ್ಲಿ ಚಾಲಕ ಮಾತ್ರವಲ್ಲದೇ ಸಹ ಪ್ರಯಾಣಿಕರೂ ಸಹ ಕಡ್ಡಾಯವಾಗಿ ಸೀಟ್ ಬೆಲ್ಟ್ ಹಾಕಬೇಕು. ತಪ್ಪಿದರೆ ಕಾರಿನಲ್ಲಿ ಪ್ರಯಾಣಿಸುವ ಪ್ರತಿಯೊಬ್ಬರೂ 1 ಸಾವಿರ ರೂ.ಗಳಂತೆ ದಂಡ ತೆರಬೇಕಾಗುತ್ತದೆ.
ಈ ನಿಯಮ ಬುಧವಾರದಿಂದಲೇ ಜಾರಿಗೆ ಬಂದಿದೆ. ಜನರ ಪ್ರಾಣ ಸುರಕ್ಷತೆ ಸಲುವಾಗಿ ದೇಶಾದ್ಯಂತ ಸೀಟ್ ಬೆಲ್ಟ್ ಧರಿಸುವುದನ್ನು ಕೇಂದ್ರ ಸರ್ಕಾರ ಕಡ್ಡಾಯಗೊಳಿಸಿದೆ. ಈ ಬೆನ್ನಲ್ಲೇ ರಾಜ್ಯದಲ್ಲೂ ಸೀಟ್ ಬೆಲ್ಟ್ ಧರಿಸೋದು ಕಡ್ಡಾಯವಾಗಿದೆ. ವಾಹನ ಚಾಲನೆ ವೇಳೆಯಲ್ಲಿ ಸೀಟ್ ಬೆಲ್ಟ್ ಧರಿಸೋದು ಕಡ್ಡಾಯಗೊಳಿಸಿ ಡಿಜಿ-ಐಜಿಪಿ ಪ್ರವೀಣ್ ಸೂದ್ ( DG-IGP Praveen Sood ) ಆದೇಶ ಹೊರಡಿಸಿದ್ದಾರೆ.
ಈ ಕುರಿತಂತೆ ಆದೇಶ ಹೊರಡಿಸಿರುವಂತ ಅವರು ಅ.19 ರಿಂದ ಜಾರಿಗೆ ಬರುವಂತೆ ರಾಜ್ಯದಲ್ಲಿ ವಾಹನ ಚಾಲಾಯಿಸುವ ಸಂದರ್ಭದಲ್ಲಿ ಸೀಟ್ ಬೆಲ್ಟ್ ಧರಿಸೋದು ಕಡ್ಡಾಯಗೊಳಿಸಲಾಗಿದೆ. ಒಂದು ವೇಳೆ ಸೀಟ್ ಬೆಲ್ಟ್ ಅನ್ನು ಧರಿಸದೇ ವಾಹನವನ್ನು ಚಲಾಯಿಸಿದ್ರೇ ಅಂತವರಿಗೆ 1 ಸಾವಿರ ದಂಡ ವಿಧಿಸಲಾಗುತ್ತದೆ. ಈ ಮೊದಲು ಸೀಟ್ ಬೆಲ್ಟ್ ಹಾಕದ ಚಾಲಕನಿಗೆ ಮಾತ್ರ 500ರೂ ದಂಡ ವಿಧಿಸಲಾಗುತ್ತಿತ್ತು.
ಅಂದಹಾಗೇ ವಾಹನ ಚಲಾಯಿಸುವಂತ ಸಂದರ್ಭದಲ್ಲಿ ಸೀಟ್ ಬೆಲ್ಟ್ ಧರಿಸದೇ ಇದ್ದರೇ ಅಪಘಾತವಾದಂತ ಸಂದರ್ಭದಲ್ಲಿ ಏರ್ ಬ್ಯಾಗ್ ಓಪನ್ ಆಗುವುದಿಲ್ಲ. ಹೀಗೆ ಏರ್ ಬ್ಯಾಗ್ ಓಪನ್ ಆಗದೇ ಇದ್ದಾಗ ಅಪಘಾತದ ವೇಳೆಯಲ್ಲಿ ಸಾವು ನೋವು ಸಂಭವಿಸಿವೆ. ಈ ಹಿನ್ನಲೆಯಲ್ಲಿಯೇ ಕೇಂದ್ರ ಸರ್ಕಾರ ಸೀಟ್ ಬೆಲ್ಟ್ ಧರಿಸೋದು ಕಡ್ಡಾಯಗೊಳಿಸೋ ಕರಡನ್ನು ಪ್ರಕಟಿಸಿತ್ತು. ರಾಜ್ಯದಲ್ಲಿ ಸೀಟ್ ಬೆಲ್ಟ್ ಹಾಕದೆ ಕಾರು ಚಲಾಯಿಸುವವರಿಗೆ 500 ರು ದಂಡ ವಿಧಿಸಲಾಗುತ್ತಿದ್ದು, ಬುಧವಾರದಿಂದ ಆ ದಂಡದ ಮೊತ್ತವು 1 ಸಾವಿರ ರು.ಗಳಿಗೆ ಏರಿಕೆ ಆಗಿದೆ.
BIG NEWS: ವಿಜಯಪುರ ವಿಮಾನ ನಿಲ್ದಾಣಕ್ಕೆ ʻಬಸವಣ್ಣʼನವರ ಹೆಸರಿಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ
BIG NEWS: ನ. 1ರಂದು ನಟ ʻಪುನೀತ್ ರಾಜ್ಕುಮಾರ್ʼಗೆ ಮರಣೋತ್ತರ ʻಕರ್ನಾಟಕ ರತ್ನʼ ಪ್ರಶಸ್ತಿ ಪ್ರಧಾನ: ಸಿಎಂ ಬೊಮ್ಮಾಯಿ