Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದಲ್ಲಿ ‘ಸತ್ತವರ ಹೆಸರ’ಲ್ಲಿ ಆಸ್ತಿ ಮಾರಾಟ, ಬೃಹತ್ ಭೂ ಹಗರಣ: ‘ಲೋಕಾಯುಕ್ತ’ದಿಂದ ತನಿಖೆಗೆ ಆದೇಶ

ದಂಪತಿಗಳ ಲೈಂಗಿಕ ಜೀವನ ಸುಧಾರಿಸಲು ಈ ಒಂದು ಸರಳ ಅಭ್ಯಾಸ ಸಾಕು: ಸಂಶೋಧನೆಯಿಂದ ದೃಢ!

ದಂಪತಿಗಳ ನಡುವಿನ ಅನ್ಯೋನ್ಯತೆ ಹೆಚ್ಚಿಸಲು ಹೊಸ ಪ್ರಯೋಗ: ವೈವಾಹಿಕ ಜೀವನಕ್ಕೆ ಮರುಜೀವ ನೀಡಿದ ‘ನಗ್ನ ಛಾಯಾಚಿತ್ರ’

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಹವಾಮಾನ ಮುನ್ಸೂಚನೆ: ರೈತರಿಗೆ ಕೃಷಿ ಇಲಾಖೆಯಿಂದ ಪ್ರಮುಖ ಸಲಹೆ
KARNATAKA

ಹವಾಮಾನ ಮುನ್ಸೂಚನೆ: ರೈತರಿಗೆ ಕೃಷಿ ಇಲಾಖೆಯಿಂದ ಪ್ರಮುಖ ಸಲಹೆ

By kannadanewsnow57

ಹವಾಮಾನ ಮುನ್ಸೂಚನೆ ಹಿನ್ನೆಲೆಯಲ್ಲಿ ರೈತರಿಗೆ ಕೃಷಿ ಇಲಾಖೆಯಿಂದ ಪ್ರಮುಖ ಸಲಹೆಗಳನ್ನು ನೀಡಲಾಗಿದೆ.ಭಾರತೀಯ ಹವಾಮಾನ ಇಲಾಖೆ, ಬೆಂಗಳೂರು ಇವರ ಮುನ್ಸೂಚನೆಯ ಪ್ರಕಾರ ಕೊಪ್ಪಳ ಜಿಲ್ಲೆಯಲ್ಲಿ ಮುಂದಿನ ಐದು ದಿನಗಳವರೆಗೆ ಭಾಗಶಃ ಮೋಡಕವಿದ ವಾತಾವರಣ ಇರಲಿದೆ. ಈ ಅವಧಿಯಲ್ಲಿ ಗರಿಷ್ಠ ಉಷ್ಣಾಂಶ 39 ರಿಂದ 40’ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 24 ರಿಂದ 25’ಸೆಲ್ಸಿಯಸ್ ಇರುವ ಸಾಧ್ಯತೆ ಇದೆ. ಗರಿಷ್ಠ ಆರ್ದ್ರತೆ 61–63% ಮತ್ತು ಕನಿಷ್ಠ ಆರ್ದ್ರತೆ 27 ರಿಂದ 29% ಇರಬಹುದು. ಗಾಳಿಯ ವೇಗವು ಗಂಟೆಗೆ 4.0 ರಿಂದ 6.0 ಕಿ.ಮೀ. ವೇಗದಲ್ಲಿ ಬೀಸುವ ಸಾಧ್ಯತೆ ಇದೆ.

ಈ ಮುನ್ಸೂಚನೆಯ ಪ್ರಕಾರ ಉಷ್ಣಾಂಶ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಜಿಲ್ಲೆಯ ರೈತರು ಮತ್ತು ಸಾರ್ವಜನಿಕರು ಶಾಖ ಅಲೆ ವಿರುದ್ಧ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ತಾಪಮಾನ ಏರಿಕೆಯಿಂದ ಕೀಟಬಾಧೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ರೈತರು ಬೆಳಗಿನ ಜಾವದಲ್ಲಿ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳುವುದು ಸೂಕ್ತ.

ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ಮೊದಲ ಮಳೆ ಬಿದ್ದ ತಕ್ಷಣ ಉಳುಮೆ ಮಾಡಲು ಹದ ಸಿಗುತ್ತದೆ. ಜಮೀನನ್ನು ಸಮತಟ್ಟಾಗಿಸಿ, ಹದ ಸಿಕ್ಕಾಗ ಉಳುಮೆ ಮಾಡಿದರೆ ಮಣ್ಣು ಸಡಿಲವಾಗಿ ಮಳೆ ನೀರು ಭೂಮಿಯಲ್ಲೇ ಇಂಗುತ್ತದೆ. ಇದರಿಂದ ಹೆಚ್ಚುವರಿ ಮಳೆಯ ಸಮಯದಲ್ಲಿ ಅಂತರ್ಜಲ ಮಟ್ಟವೂ ಹೆಚ್ಚಾಗುತ್ತದೆ.

ಹಿಂಗಾರು ಹಂಗಾಮಿನ ಬೆಳೆಗಳನ್ನು ಕಟಾವು ಮಾಡಿದ ನಂತರ ಭೂಮಿಯಲ್ಲಿ ತೇವಾಂಶ ಕಡಿಮೆ ಇರುತ್ತದೆ. ಬೇಸಿಗೆಯಲ್ಲಿ ಮಳೆ ಬಂದರೆ, ಹಸಿಯಾದ ಮಣ್ಣನ್ನು ಟ್ರ್ಯಾಾಕ್ಟರ್ ಅಥವಾ ನೇಗಿಲಿನಿಂದ ಇಳಿಜಾರಿಗೆ ಅಡ್ಡವಾಗಿ ಉಳುಮೆ ಮಾಡಬೇಕು.

ಮಾಗಿ ಉಳುಮೆಯ ಪ್ರಯೋಜನಗಳು: ಮಣ್ಣು ಸಡಿಲವಾಗುವುದರಿಂದ ಮಳೆ ನೀರು ಭೂಮಿಯಲ್ಲಿ ಹೆಚ್ಚು ಇಂಗುತ್ತದೆ. ಬೆಳೆ ಅವಶೇಷಗಳು ಮಣ್ಣಿನಲ್ಲಿ ಬೆರೆತು ಸಾವಯವ ಗೊಬ್ಬರವಾಗುತ್ತವೆ. ಕೀಟಗಳು ಮತ್ತು ರೋಗಕಾರಕ ಜೀವಿಗಳು ಸೂರ್ಯನ ತಾಪಕ್ಕೆ ನಾಶವಾಗುತ್ತವೆ. ಮಣ್ಣು ಕೊಚ್ಚಿಹೋಗುವುದನ್ನು ತಡೆಯಬಹುದು ಹಾಗೂ ನೀರು ಜಮೀನಿನಲ್ಲೇ ಉಳಿಯುತ್ತದೆ. ಕರಕೆ ಮತ್ತು ಜೇಕೆ ಮೊದಲಾದ ಬಹುವಾರ್ಷಿಕ ಕಳೆಗಳನ್ನು ನಿಯಂತ್ರಿಸಬಹುದು.

ಈ ಪ್ರಯೋಜನಗಳನ್ನು ಪಡೆಯಲು ಮಧ್ಯಮದಿಂದ ಆಳವಾದ ಕಪ್ಪು ಮಣ್ಣಿನಲ್ಲಿ ಪ್ರತಿ 2 ರಿಂದ 3 ವರ್ಷಕ್ಕೊಮ್ಮೆ ಹಾಗೂ ಕೆಂಪು ಅಥವಾ ಮಿಶ್ರಿತ ಕಪ್ಪು ಮಣ್ಣಿನಲ್ಲಿ ಪ್ರತಿ ವರ್ಷ ಆಳವಾದ ಮಾಗಿ ಉಳುಮೆ ಮಾಡುವುದು ಸೂಕ್ತ.

ಉಷ್ಣಾಂಶ ಹೆಚ್ಚುತ್ತಿರುವುದರಿಂದ ಮತ್ತು ಮಳೆಯ ಕೊರತೆಯಿಂದ, ಬೆಳೆಗಳ ಸುತ್ತ ಮಲ್ಚಿಂಗ್ ಮಾಡಿ ಮಣ್ಣಿನ ತೇವಾಂಶವನ್ನು ಉಳಿಸಿಕೊಳ್ಳಬೇಕು. ಹಿಂಗಾರು ಬೆಳೆ ಕಟಾವಿನ ನಂತರ ಮಣ್ಣಿನ ಪರೀಕ್ಷೆ ಮಾಡಿಸಿಕೊಳ್ಳುವುದು ಅಗತ್ಯ. ಮಣ್ಣಿನ ಮಾದರಿಯನ್ನು ಸಂಗ್ರಹಿಸುವಾಗ ಬದುವಿನ ಮಣ್ಣು, ಅತಿಯಾಗಿ ಹಸಿ ಮಣ್ಣು ಅಥವಾ ಮಳೆಯಾದ ತಕ್ಷಣದ ಮಣ್ಣು ಬಳಸಬಾರದು.

ಬೆಳೆ ಅವಶೇಷಗಳನ್ನು ಸುಡದೇ, ಅವನ್ನು ಸಾವಯವ ಗೊಬ್ಬರ ಅಥವಾ ಕೊಟ್ಟಿಗೆ ಗೊಬ್ಬರ ತಯಾರಿಸಲು ಬಳಸಬೇಕು. ಉಗ್ರಾಣ ಕೀಟಗಳ ಹಾನಿ ತಪ್ಪಿಸಲು ಧಾನ್ಯಗಳಲ್ಲಿ 11 ರಿಂದ 12% ತೇವಾಂಶ, ದ್ವಿದಳ ಧಾನ್ಯಗಳಲ್ಲಿ 8% ಮತ್ತು ಎಣ್ಣೆ ಬೀಜಗಳಲ್ಲಿ 9% ತೇವಾಂಶವನ್ನು ಕಾಯ್ದುಕೊಳ್ಳಬೇಕು.

ಭತ್ತದ ಬೆಳೆಗೆ ಸಂಬಂಧಿಸಿದಂತೆ, ಕೊಯ್ಲಿಗೆ ಮುನ್ನ ಹೊಲದಿಂದ ನೀರನ್ನು ಹೊರಹಾಕಬೇಕು. ಕೊಯ್ಲು ಹಂತದಲ್ಲಿದ್ದರೆ ಸಂಯೋಜಿತ ಕೊಯ್ಲು ಯಂತ್ರಗಳನ್ನು ಬಳಸುವುದು ಉತ್ತಮ. ಭತ್ತದ ಒಣ ಹುಲ್ಲಿನ ನಿರ್ವಹಣೆಗೆ ಬೇಲರ್ ಉಪಕರಣ ಬಳಸಬೇಕು. ಯಾವುದೇ ಕಾರಣಕ್ಕೂ ಭತ್ತದ ಒಣ ಹುಲ್ಲನ್ನು ಬೆಂಕಿ ಹಚ್ಚಿ ಸುಡಬಾರದೆಂದು ಜಂಟಿ ಕೃಷಿ ನಿರ್ದೇಶಕರು ರೈತರಲ್ಲಿ ಮನವಿ ಮಾಡಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಹತ್ತಿರ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಛೇರಿ, ಕೃಷಿ ವಿಸ್ತರಣ ಘಟಕ ಅಥವಾ ಕೃಷಿ ವಿಜ್ಞಾನ ಕೇಂದ್ರವನ್ನು ಸಂಪರ್ಕಿಸಲು ಕೊಪ್ಪಳ ಜಂಟಿ ಕೃಷಿ ನಿರ್ದೇಶಕರಾದ ಜಿ.ಟಿ ಕೃಷ್ಣಮೂರ್ತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Weather forecast: Important advice from the Department of Agriculture to farmers
Share. Facebook Twitter LinkedIn WhatsApp Email

Related Posts

ಸಾಗರದಲ್ಲಿ ‘ಸತ್ತವರ ಹೆಸರ’ಲ್ಲಿ ಆಸ್ತಿ ಮಾರಾಟ, ಬೃಹತ್ ಭೂ ಹಗರಣ: ‘ಲೋಕಾಯುಕ್ತ’ದಿಂದ ತನಿಖೆಗೆ ಆದೇಶ

2 Mins Read

ಜನಿವಾರಕ್ಕೆ ಇವರೇನು ಅನುಮತಿ ನೀಡೋದು? ಕೇಸರಿ ಶಾಲು ನಿಷೇಧಿಸಲು ಇವರ್ಯಾರು?: ಪ್ರಹ್ಲಾದ್ ಜೋಶಿ ಪ್ರಶ್ನೆ

1 Min Read

ಮಂಗಳೂರಲ್ಲಿ ಹವಾಮಾನ ವೈಫರಿತ್ಯದಿಂದ ಆಕಾಶದಲ್ಲೇ ಅರ್ಧ ಗಂಟೆ ಗಿರಕಿ ಹೊಡೆದ ವಿಮಾನಗಳು

1 Min Read
Recent News

ಸಾಗರದಲ್ಲಿ ‘ಸತ್ತವರ ಹೆಸರ’ಲ್ಲಿ ಆಸ್ತಿ ಮಾರಾಟ, ಬೃಹತ್ ಭೂ ಹಗರಣ: ‘ಲೋಕಾಯುಕ್ತ’ದಿಂದ ತನಿಖೆಗೆ ಆದೇಶ

ದಂಪತಿಗಳ ಲೈಂಗಿಕ ಜೀವನ ಸುಧಾರಿಸಲು ಈ ಒಂದು ಸರಳ ಅಭ್ಯಾಸ ಸಾಕು: ಸಂಶೋಧನೆಯಿಂದ ದೃಢ!

ದಂಪತಿಗಳ ನಡುವಿನ ಅನ್ಯೋನ್ಯತೆ ಹೆಚ್ಚಿಸಲು ಹೊಸ ಪ್ರಯೋಗ: ವೈವಾಹಿಕ ಜೀವನಕ್ಕೆ ಮರುಜೀವ ನೀಡಿದ ‘ನಗ್ನ ಛಾಯಾಚಿತ್ರ’

ನೈಸರ್ಗಿಕ ಪೋಷಕಾಂಶಗಳ ಗಣಿ: ಪ್ರತಿದಿನ ಮೊಳಕೆ ಕಾಳುಗಳನ್ನು ತಿನ್ನುವುದರಿಂದಾಗುವ 7 ಲಾಭಗಳು

State News
KARNATAKA

ಸಾಗರದಲ್ಲಿ ‘ಸತ್ತವರ ಹೆಸರ’ಲ್ಲಿ ಆಸ್ತಿ ಮಾರಾಟ, ಬೃಹತ್ ಭೂ ಹಗರಣ: ‘ಲೋಕಾಯುಕ್ತ’ದಿಂದ ತನಿಖೆಗೆ ಆದೇಶ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆಯುತ್ತಿರುವ ಭೂ ಮಾಫಿಯಾದ ಭೀಕರ ದಂಧೆಯೊಂದು ಬಯಲಿಗೆ ಬಂದಿದೆ. ಸತ್ತವರ ಹೆಸರಿನಲ್ಲಿ ನಕಲಿ…

ಜನಿವಾರಕ್ಕೆ ಇವರೇನು ಅನುಮತಿ ನೀಡೋದು? ಕೇಸರಿ ಶಾಲು ನಿಷೇಧಿಸಲು ಇವರ್ಯಾರು?: ಪ್ರಹ್ಲಾದ್ ಜೋಶಿ ಪ್ರಶ್ನೆ

ಮಂಗಳೂರಲ್ಲಿ ಹವಾಮಾನ ವೈಫರಿತ್ಯದಿಂದ ಆಕಾಶದಲ್ಲೇ ಅರ್ಧ ಗಂಟೆ ಗಿರಕಿ ಹೊಡೆದ ವಿಮಾನಗಳು

BIG NEWS: ಸಾಗರದ ನಾಡಕಲಸೆಯಲ್ಲಿ ‘ಕಂದಾಯ ಭೂಮಿ’ ಒತ್ತುವರಿ: ಲೋಕಾಯುಕ್ತರಿಂದ ಸ್ವಯಂ ಪ್ರೇರಿತ ಮೊಕದ್ದಮೆ ದಾಖಲು

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.