ನವದೆಹಲಿ: ಮುಂದಿನ ಮೂರು ದಿನಗಳಲ್ಲಿ ಗುಜರಾತ್, ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಒಡಿಶಾ, ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ನೀಡಿದೆ. ಈ ತಿಂಗಳ 17 ಮತ್ತು 18 ರ ಸುಮಾರಿಗೆ ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಹೊಸ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು ಒಡಿಶಾದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ಮಹಾನಿರ್ದೇಶಕ ಮೃತ್ಯುಂಜಯ್ ಮೊಹಾಪಾತ್ರ ಹೇಳಿದ್ದಾರೆ.
ಹವಾಮಾನ ಇಲಾಖೆಯ ಈ ಎಚ್ಚರಿಕೆಯ ನಂತರ, ಒಡಿಶಾ ಸರ್ಕಾರವು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಬಿಕ್ಕಟ್ಟಿನ ಪರಿಸ್ಥಿತಿಯನ್ನು ಎದುರಿಸಲು ಸಿದ್ಧರಾಗುವಂತೆ ಕೇಳಿದೆ. ಈ ಅವಧಿಯಲ್ಲಿ ಸಮುದ್ರ ಪರಿಸ್ಥಿತಿ ಪ್ರಕ್ಷುಬ್ಧವಾಗಿರುವ ಸಾಧ್ಯತೆ ಇರುವುದರಿಂದ ವಾಯುವ್ಯ ಮತ್ತು ಪಶ್ಚಿಮ-ಮಧ್ಯ ಬಂಗಾಳ ಕೊಲ್ಲಿಯಲ್ಲಿ ಮತ್ತು ಆಂಧ್ರಪ್ರದೇಶ, ಒಡಿಶಾ ಮತ್ತು ಪಶ್ಚಿಮ ಬಂಗಾಳ ಕರಾವಳಿಗಳ ಉದ್ದಕ್ಕೂ ಮತ್ತು ಹೊರಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಐಎಂಡಿ ಸಲಹೆ ನೀಡಿದೆ. ಒಡಿಶಾದ ಅನೇಕ ಜಿಲ್ಲೆಗಳಲ್ಲಿ ಕಳೆದ 2 ದಿನಗಳಿಂದ ಸಾಕಷ್ಟು ಮಳೆಯಾಗುತ್ತಿದೆ.