ನವದೆಹಲಿ : ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಕರ್ನಾಟಕ, ಕೇರಳ, ಹಿಮಾಚಲ ಪ್ರದೇಶ, ಉತ್ತರಾಖಂಡ, ರಾಜಸ್ಥಾನ, ಉತ್ತರ ಪ್ರದೇಶ, ಹರಿಯಾಣ, ಚಂಡೀಗಢ, ಜಾರ್ಖಂಡ್, ಒಡಿಶಾ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರ,ಮತ್ತು ದೆಹಲಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಭಾರತೀಯ ಹವಾಮಾಣ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.
ಹಗುರ, ಮಧ್ಯಮದಿಂದ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ನದಿ, ಸಮುದ್ರಗಳಿಂದ ದೂರವಿರಲು ಹವಾಮಾನ ಇಲಾಖೆ ಜನರಿಗೆ ಸಲಹೆ ನೀಡಿದೆ. ಜಲಾವೃತ ಪ್ರದೇಶಗಳಿಂದ ಮಕ್ಕಳನ್ನು ದೂರವಿಡಿ. ಸಾಧ್ಯವಾದರೆ, ಮನೆಯಲ್ಲಿಯೇ ಇರಿ ಇದರಿಂದ ನೀವು ಯಾವುದೇ ರೀತಿಯ ಅಹಿತಕರ ಘಟನೆಯನ್ನು ಎದುರಿಸಬೇಕಾಗಿಲ್ಲ. ತುರ್ತು ಸಂದರ್ಭದಲ್ಲಿ ಮಾತ್ರ ಮನೆಯಿಂದ ಹೊರಹೋಗುವುದು ಉತ್ತಮ ಎಂದು ಹವಾಮಾನ ಇಲಾಖೆ ಮನವಿ ಮಾಡಿದೆ.